30.7 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೆ.14-18: ಬೆಳ್ತಂಗಡಿಯಲ್ಲಿ 65ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬೆಳ್ತಂಗಡಿ ವತಿಯಿಂದ 65ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಸೆ. 14ರಿಂದ 18ರವರೆಗೆ ನಡೆಯಲಿದೆ.

ಸೆ.14ರಂದು ಬೆಳಿಗ್ಗೆ 10ಕ್ಕೆ ಮೂರ್ಜೆ ಶಿವಶಂಕರ್ ರವರಿಂದ ಉದ್ಘಾಟನೆ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ರಘುರಾಮ ಶೆಟ್ಟಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 1ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ 7ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ, ಹಂಸಿಕಾ ಅವರಿಂದ ಸ್ಯಾಕ್ಸೋಫೋನ್ ವಾದನ,

ಸೆ.15ರಂದು ಮಧ್ಯಾಹ್ನ 1ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, ಸಂಜೆ 7ಕ್ಕೆ ಝೀ ಕನ್ನಡ ಡ್ಯಾನ್ಸ್ ಖ್ಯಾತಿಯ ಬೀಟ್ ರಾಕ್ಸ್ ಡ್ಯಾನ್ಸ್ ಅಕಾಡೆಮಿ ಬೆಳ್ತಂಗಡಿ ಇವರಿಂದ ನೃತ್ಯ ವೈಭವ, ಸೆ.16ರಂದು ಮಧ್ಯಾಹ್ನ 1ಕ್ಕೆ ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ 7ಕ್ಕೆ ಶ್ರೀ ಕೃಷ್ಣ ಮುಖ್ಯಪ್ರಾಣ ಭಜನಾ ಮಂಡಳಿ ಬೆಳ್ತಂಗಡಿ ಇವರಿಂದ ಭಜನಾ ಕಾರ್ಯಕ್ರಮ,

ಸೆ.17ರಂದು ಮಧ್ಯಾಹ್ನ 1ಕ್ಕೆ ಮಹಾಪೂಜೆ, ರಾತ್ರಿ 7.30ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ, ತುಳು ಹಾಸ್ಯಮಯ ನಾಟಕ ‘ಶೋಭಾಜಿ’ ನಡೆಯಲಿದೆ. ಸಂಜೆ 6.30ಕ್ಕೆ ಧಾರ್ಮಿಕ ಸಭಾ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಶಶಿಧರ ಶೆಟ್ಟಿ ಬರೋಡ ನವಶಕ್ತಿ ವಹಿಸಲಿದ್ದಾರೆ.

ಪ್ರಕಾಶ್ ಮಲ್ಪೆ ಶಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಡಾ| ಪ್ರದೀಪ್ ನಾವೂರು, ನ್ಯಾಯವಾದಿ ಮುರಳಿ ಬಲಿಪ, ಕಾಲಭೈರವೇಶ್ವರ ಕ್ರೆಡಿಟ್ ಸಹಕಾರಿ ಸಂಘದ ಅಧ್ಯಕ್ಷ ರಂಜನ್ ಜಿ. ಗೌಡ ಭಾಗವಹಿಸಲಿದ್ದಾರೆ.

ಸೆ.18ರಂದು ಬೆಳಿಗ್ಗೆ 9.30ಕ್ಕೆ 12 ತೆಂಗಿನಕಾಯಿ ಗಣಹೋಮ, ಮಧ್ಯಾಹ್ನ 1ಕ್ಕೆ ಮಹಾಪೂಜೆ, ಸಂಜೆ 5ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ ನಂತರ ಶೋಭಾಯಾತ್ರೆಯೊಂದಿಗೆ ಬೆಳ್ತಂಗಡಿಯ ಪುಣ್ಯ ನದಿಯಲ್ಲಿ ಶ್ರೀ ವಿಶ್ವೇಶ್ವರನ ವಿಗ್ರಹ ವಿಸರ್ಜನೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

Related posts

ಆದಿಚುಂಚನಗಿರಿ ಮಹಾಸಂಸ್ಥಾನದ ಶಾಖಾಮಠ ಕಾವೂರು ಮಂಗಳೂರು ಪೂಜ್ಯ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರಿಂದ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಟ್ರಸ್ಟ್‌ನ ಲೋಗೋ ಅನಾವರಣ

Suddi Udaya

ಕೊಕ್ಕಡ ಜೇಸಿಐ ಕಪಿಲಾ ಘಟಕದಿಂದ ಸೆಬಾಸ್ಟಿಯನ್ ಪಿ.ಟಿ ರವರಿಗೆ “ಕಪಿಲಾಶ್ರೀ 2025” ಪ್ರಶಸ್ತಿ

Suddi Udaya

ಬಳಂಜ: ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯಿಂದ ದೀಪಾವಳಿ ಸಂಭ್ರಮಾಚರಣೆ

Suddi Udaya

ಜು.11: ಉಜಿರೆಯಲ್ಲಿ ಹೆಗ್ಡೆ ಮೆಡಿಕಲ್ಸ್ ಶುಭಾರಂಭ

Suddi Udaya

ಮೇಲಂತಬೆಟ್ಟು : ಕೆಲ್ಲಕೆರೆ ಕೊರಗ ಸಮುದಾಯದ ಕಾಲೋನಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಅಯೋಧ್ಯೆಯಲ್ಲಿ ಶ್ರೀ ರಾಮಚಂದ್ರನ ಪ್ರತಿಷ್ಠಾಪನೆಗೆ ಮೂಹೂರ್ತ ನಿಗದಿ: ಜ.21ರಿಂದ 3 ದಿನ ಕಾರ್ಯಕ್ರಮ: ಪ್ರಧಾನಿ ನರೇಂದ್ರ ಮೋದಿ ಸಹಿತ ಅನೇಕ ನಾಯಕರು ಭಾಗಿ

Suddi Udaya
error: Content is protected !!