32.2 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಮಹಿಳೆಯರಿಗಾಗಿ 38ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಉದ್ಘಾಟನೆ

ಉಜಿರೆ : ಸೇವಾಭಾರತಿ(ರಿ.), ಕನ್ಯಾಡಿ ಇದರ ನೇತೃತ್ವದಲ್ಲಿ ಸಬಲಿನಿ ಯೋಜನೆಯಡಿ ಲಯನ್ಸ್ ಕ್ಲಬ್, ಬೆಳ್ತಂಗಡಿ ಪ್ರೇರಣಾ ಸಂಜೀವಿನಿ ಮಹಿಳಾ ಒಕ್ಕೂಟ(ರಿ.), ಮಹಾತ್ಮಾ ಗಾಂಧಿ ಗ್ರಾಮ ಪಂಚಾಯತ್, ಉಜಿರೆ ಮತ್ತು ಶ್ರೀ ದುರ್ಗಾಮಾತೃ ಮಂಡಳಿ, ಕನ್ಯಾಡಿ ಇದರ ಸಹಭಾಗಿತ್ವದಲ್ಲಿ ಮಹಿಳೆಯರಿಗಾಗಿ 38 ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಉದ್ಘಾಟನಾ ಸಮಾರಂಭವು ಸೆ. 10 ರಂದು ಸಂಜೀವಿನಿ ಕಟ್ಟಡ ಗ್ರಾಮ ಪಂಚಾಯತ್ ಉಜಿರೆಯಲ್ಲಿ ನಡೆಯಿತು.

ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಅಧ್ಯಕ್ಷ ಲಯನ್ ರಘುರಾಮ ಶೆಟ್ಟಿ ”ಸಾಧನಾ'” ರವರು ಶಿಬಿರಕ್ಕೆ ಚಾಲನೆ ನೀಡಿ, ಟೈಲರಿಂಗ್ ತರಬೇತಿಯು ಕೇವಲ ಕಲೆ ಮಾತ್ರವಲ್ಲ, ಸ್ವಯಂ ಉದ್ಯೋಗ ಮತ್ತು ಆರ್ಥಿಕ ಸಬಲೀಕರಣದ ಉತ್ತಮ ಅವಕಾಶವಾಗಿದೆ. ಈ ತರಬೇತಿಯ ಮೂಲಕ ಹೊಸ ಕೌಶಲ್ಯಗಳನ್ನು ಕಲಿತು ಸ್ವಾವಲಂಬಿಗಳಾಗುವಂತೆ ಶುಭಹಾರೈಸಿದರು.

ಸೇವಾಭಾರತಿ ಅಧ್ಯಕ್ಷರಾದ ಹಾಗೂ ಸೇವಾಧಾಮ ಸಂಸ್ಥಾಪಕರಾದ ಕೆ ವಿನಾಯಕ ರಾವ್ ರವರು ಯಶಸ್ಸಿಗೆ ದೊಡ್ಡ ಅವಕಾಶಗಳಿಗಿಂತ ಕಲಿಯುವ ಮನಸ್ಸು ಮತ್ತು ಹೊಸ ವಿಷಯಗಳನ್ನು ತಿಳಿದುಕೊಳ್ಳುವ ಆಸಕ್ತಿ ಮುಖ್ಯ. ಆದ್ದರಿಂದ ಈ ತರಬೇತಿಯನ್ನು ಉತ್ತಮ ಅವಕಾಶವಾಗಿ ಸ್ವೀಕರಿಸಿ ಎಂದು ಅಧ್ಯಕ್ಷರ ನುಡಿಗಳನ್ನಾಡಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಉಜಿರೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಪ್ರಕಾಶ್ ಶೆಟ್ಟಿ,ಮಹಿಳೆಯರು ಸ್ವಾವಲಂಬನೆ ಮತ್ತು ಉದ್ಯಮಶೀಲರಾಗಲು ಸಾಕಷ್ಟು ಕಾರ್ಯಕ್ರಮಗಳನ್ನು ನಡೆಸಿದ್ದೇವೆ ಮುಂದೆಯೂ ಸದಾ ನನ್ನ ಬೆಂಬಲವಿದೆ ಎಂದು ಶುಭ ಹಾರೈಸಿದರು.

ಉಜಿರೆ ಪ್ರೇರಣಾ ಸಂಜೀವಿನಿ ಮಹಿಳಾ ಒಕ್ಕೂಟ(ರಿ.), ಅಧ್ಯಕ್ಷೆ ವಿನುತಾ ರಜತ್ ಗೌಡ, ಬೆಳ್ತಂಗಡಿ ಲಯನ್ಸ್ ಕ್ಲಬ್ ಕಾರ್ಯದರ್ಶಿ ಲಯನ್ ಅಮಿತಾನಂದ ಹೆಗ್ಡೆ ಗ್ರಾಮ ಪಂಚಯಾತ್ ಮಾಜಿ ಅಧ್ಯಕ್ಷರು ಪುಷ್ಪವತಿ, ಬೆಳ್ತಂಗಡಿ ತಾಲೂಕು ಕೃಷಿಯೇತರ ವ್ಯವಸ್ಥಾಪಕರಾದ ನಿತೀಶ್ ಉಜಿರೆ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಉಷಾ ಕಿರಣ್ ಕಾರಂತ್, ಕನ್ಯಾಡಿ ಶ್ರೀ ದುರ್ಗಾಮಾತೃ ಮಂಡಳಿ ಅಧ್ಯಕ್ಷರಾದ ಮಮತಾ ಬಿ, ಟೈಲರಿಂಗ್ ತರಬೇತುದಾರರಾದ ಲಲಿತ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಶಿಬಿರದಲ್ಲಿ ಒಟ್ಟು 66 ಮಂದಿ ಮಹಿಳಾ ಶಿಬಿರಾರ್ಥಿಗಳು ಭಾಗವಹಿಸಿದ್ದರು. ಬೆಳ್ತಂಗಡಿ ಪ್ರೇರಣಾ ಸಂಜೀವಿನಿ ಮಹಿಳಾ ಒಕ್ಕೂಟದ ಶಾಶ್ವಿತ ಸ್ವಾಗತಿಸಿ, ಸಂಧ್ಯಾ ನಿರೂಪಿಸಿ, ಭಾಗೀರಥಿ ಧನ್ಯವಾದವಿತ್ತರು.

Related posts

ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಅ.ವಂ. ಜೇಮ್ಸ್ ಪಟ್ಟೇರಿಲ್ ರವರನ್ನು ಅಭಿನಂದಿಸಿದ ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್

Suddi Udaya

ನಿಡ್ಲೆ: ಸರ್ಕಾರಿ ಪ್ರೌಢಶಾಲೆಯಲ್ಲಿ ಆರೋಗ್ಯ ಮತ್ತು ಸುರಕ್ಷತೆಯ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಕನ್ನಡ ಸೇನೆ -ಕರ್ನಾಟಕ ಬೆಳ್ತಂಗಡಿ ಸಮಿತಿ ವತಿಯಿಂದ ಬೆಳ್ತಂಗಡಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ವಾಣಿ ಕಾಲೇಜಿನಲ್ಲಿ ನಶಾಮುಕ್ತ ಭಾರತ -ಪ್ರತಿಜ್ಞಾವಿಧಿ ಸ್ವೀಕಾರ

Suddi Udaya

ಕನ್ಯಾಡಿ -2 ಸ.ಉ.ಹಿ.ಪ್ರಾ. ಶಾಲೆಯಲ್ಲಿ “ಆಟಿಡೊಂಜಿ ದಿನ”

Suddi Udaya

ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ ಖಾಸಗಿ ಬಸ್‌; ಡ್ರೈವರ್‌ ಸ್ಥಳದಲ್ಲೇ ಸಾವು

Suddi Udaya
error: Content is protected !!