28.3 C
ಪುತ್ತೂರು, ಬೆಳ್ತಂಗಡಿ
September 11, 2026
ಅಪಘಾತತಾಲೂಕು ಸುದ್ದಿಬೆಳ್ತಂಗಡಿವರದಿ

ಪದ್ಮುಂಜದಲ್ಲಿ ವಿದ್ಯುತ್ ಶಾಕ್‌ಗೆ ಕಾರ್ಮಿಕ ಬಲಿ

ಬೆಳ್ತಂಗಡಿ: ವಿದ್ಯುತ್ ಶಾಕ್ ಹೊಡೆದು ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಪದ್ಮುಂಜದಲ್ಲಿ ಶುಕ್ರವಾರ ಸಂಜೆ ನಡೆದಿದೆ.ಮೃತರನ್ನು ಬಂದಾರು ನಿವಾಸಿ ಜಯಪ್ರಕಾಶ್ (38) ಎಂದು ಗುರುತಿಸಲಾಗಿದೆ.

ಪದ್ಮುಂಜದಲ್ಲಿರುವ ಮರದ ಮಿಲ್‌ನಲ್ಲಿ ಜಯಪ್ರಕಾಶ್ ಅವರು ಕೆಲಸ ನಿರ್ವಹಿಸುತ್ತಿದ್ದ ವೇಳೆ ಏಕಾಏಕಿ ವಿದ್ಯುತ್ ಆಘಾತಕ್ಕೊಳಗಾಗಿ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ಇದನ್ನು ಗಮನಿಸಿದ ಸಹ ಕಾರ್ಮಿಕರು ಹಾಗೂ ಸ್ಥಳೀಯರು ತಕ್ಷಣ ಅವರನ್ನು ರಕ್ಷಿಸಿ ಚಿಕಿತ್ಸೆಗಾಗಿ ಬೆಳ್ತಂಗಡಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ.ಆದರೆ, ಆಸ್ಪತ್ರೆಗೆ ಕರೆತರುವಷ್ಟರಲ್ಲಿ ಜಯಪ್ರಕಾಶ್ ಅವರ ಸ್ಥಿತಿ ಗಂಭೀರವಾಗಿದ್ದು, ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.ವಿದ್ಯುತ್ ಆಘಾತದಿಂದ ಸಂಭವಿಸಿದ ಈ ದುರ್ಘಟನೆಯಿಂದ ಕುಟುಂಬಸ್ಥರು ಹಾಗೂ ಸ್ಥಳೀಯರಲ್ಲಿ ಆಘಾತ ಮತ್ತು ದುಃಖ ಆವರಿಸಿದೆ. ಘಟನೆಯ ಕುರಿತು ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿದುಬರಬೇಕಿದೆ.

Related posts

ಇಂದಬೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಆಶಾಲತಾ ಉಪಾಧ್ಯಕ್ಷರಾಗಿ ಪ್ರೇಮ ಅವಿರೋಧ ಆಯ್ಕೆ

Suddi Udaya

ಕರ್ತವ್ಯದ ವೇಳೆ ಬೆಳ್ತಂಗಡಿ ತಹಶೀಲ್ದಾ‌ರ್ ಮೇಲೆ ಹಲ್ಲೆಗೆ ಯತ್ನ: ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಚಿತ್ರಕಲಾ ಶಿಕ್ಷಕ ವಿ.ಕೆ. ವಿಟ್ಲ ರವರು ಕಲಾನಿಧಿ ಪ್ರಶಸ್ತಿಗೆ ಆಯ್ಕೆ

Suddi Udaya

ಮಡಂತ್ಯಾರು ಮೆಸ್ಕಾಂ ಕಛೇರಿಯಲ್ಲಿ ಕಂದಾಯ ಅದಾಲತ್‌ ಕಾರ್ಯಕ್ರಮ: ವಿದ್ಯುತ್ ಪರಿವರ್ತಕದ ಬೇಡಿಕೆಗೆ ಮನವಿ

Suddi Udaya

ಎಸ್ಸೆಸ್ಸೆಲ್ಸಿ ಮರು ಮೌಲ್ಯ ಮಾಪನ : ಬೆಳ್ತಂಗಡಿ ಶ್ರೀ ಧ.ಮಂ.ಆಂ.ಮಾ. ಶಾಲಾ ವಿದ್ಯಾರ್ಥಿ ಪ್ರತೀಕ್ ವಿ. ಎಸ್. ರಾಜ್ಯಕ್ಕೆ 7ನೇ ರ್‍ಯಾಂಕ್

Suddi Udaya

ಮೇ 5: ‘ನನ್ನ ಬೂತ್ ನನ್ನ ಜವಾಬ್ದಾರಿ’ ಎಂಬ ಧ್ಯೇಯದೊಂದಿಗೆ ಪ್ರಚಾರ ಕಾರ್ಯ ಮಾಡುವಂತೆ ಕರೆ ನೀಡಿದ ಮಾಜಿ ಶಾಸಕ ವಸಂತ ಬಂಗೇರ

Suddi Udaya
error: Content is protected !!