30.1 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ಕಬಡ್ಡಿ ಪಂದ್ಯಾಟದ ಉದ್ಘಾಟನಾ ಸಮಾರಂಭ

ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಎಜುಕೇಷನಲ್ ಟ್ರಸ್ಟ್ (ರಿ). ನಿಂದ ನಡೆಸಲ್ಪಡುವ ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಗಳು ಕಕ್ಯಪದವು ಇಲ್ಲಿನ ಎಲ್.ಸಿ.ಆರ್ ಇಂಡಿಯನ್ ಪದವಿಪೂರ್ವ ಕಾಲೇಜು ಹಾಗೂ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ದಕ್ಷಿಣ ಕನ್ನಡ ಇವರ ಸಂಯುಕ್ತ ಆಶ್ರಯದಲ್ಲಿ ಬಂಟ್ವಾಳ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕ–ಬಾಲಕಿಯರ ಕಬಡ್ಡಿ ಪಂದ್ಯಾಟವನ್ನು ದಿನಾಂಕ 10-09-2026 ರಂದು ಎಲ್.ಸಿ.ಆರ್ ಕ್ರೀಡಾಂಗಣದಲ್ಲಿ ಆಯೋಜಿಸಲಾಯಿತು.

ಕಾರ್ಯಕ್ರಮವನ್ನು ಬಂಟ್ವಾಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬೇಬಿ ಕುಂದರ್ ಉದ್ಘಾಟಿಸಿ ಮಾತನಾಡಿ ಕಬಡ್ಡಿ ಕೇವಲ ಒಂದು ಕ್ರೀಡೆಯಲ್ಲ, ಅದು ದೈಹಿಕ ಸಾಮರ್ಥ್ಯ, ಧೈರ್ಯ, ಶಿಸ್ತು, ಸಮಯಪ್ರಜ್ಞೆ ಮತ್ತು ತಂಡದ ಮನೋಭಾವವನ್ನು ಬೆಳೆಸುವ ಅತ್ಯುತ್ತಮ ಕ್ರೀಡೆ ಎಂದು ತಿಳಿಸಿದರು. ವಿದ್ಯಾರ್ಥಿಗಳು ಕ್ರೀಡೆಯೊಂದಿಗೆ ಶಿಕ್ಷಣಕ್ಕೂ ಸಮಾನ ಪ್ರಾಮುಖ್ಯತೆ ನೀಡಬೇಕು ಹಾಗೂ ಕ್ರೀಡಾ ಕ್ಷೇತ್ರದಲ್ಲಿ ದೊರೆಯುವ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು , ನಮ್ಮ ಭವಿಷ್ಯ ನಮ್ಮ ಕೈಯಲ್ಲಿದೆ ಎಂದು ಎಂದು ಕರೆ ನೀಡಿದರು.
ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೊ ಮಾತನಾಡಿ ಪಂದ್ಯಾವಳಿಗಳ ನಿಯಮ ನಿಬಂಧನೆಗಳ ಕುರಿತು ಮಾಹಿತಿ ನೀಡಿದರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಎಸ್.ಕೆ.ಡಿ.ಆರ್.ಡಿ.ಪಿ  ಪುಂಜಾಲಕಟ್ಟೆ ವಲಯಾಧ್ಯಕ್ಷರಾದ ಹಾಗೂ ಉಳಿ ಗ್ರಾಮ ಪಂಚಾಯತ್‌ನ ಮಾಜಿ ಉಪಾಧ್ಯಕ್ಷರಾದ ಶ್ರೀಯುತ ಚಿದಾನಂದ ರೈ ಮಾತನಾಡಿ ಕ್ರೀಡಾಪಟುಗಳಲ್ಲಿ ಕ್ರೀಡಾ ಸ್ಪೂರ್ತಿ  ಹಾಗೂ ಉತ್ಸಾಹ ಮುಖ್ಯ ಎಂದು ಶುಭ ಹಾರೈಸಿದರು. 


ಗೌರವ ಉಪಸ್ಥಿತರಾಗಿ ಸಂಸ್ಥೆಯ ಕಾರ್ಯದರ್ಶಿ ಶ್ರೀಮತಿ ಶಿವಾನಿ ರೋಹಿನಾಥ್, ಟ್ರಸ್ಟಿಗಳಾದ ಯಜ್ಞೇಶ್ ರಾಜ್ ಹಾಗೂ ಬಂಟ್ವಾಳ ತಾಲೂಕು ಕ್ರೀಡಾ ಸಂಯೋಜಕರಾದ ನಿತಿನ್ ಕೊಡ್ಯ, ಶ್ರೀ.ಪಂಚದುರ್ಗಾ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾದ ಚಂದ್ರಹಾಸ ಶೆಟ್ಟಿ, ಬಿತ್ತ ಕಾಂಪ್ಲೆಕ್ಸ್ ನ ಮಾಲಕರಾದ ವಿಶ್ವನಾಥ ಸಾಲಿಯಾನ್ ಬಿತ್ತ, ತುಂಬೆ ಪದವಿಪೂರ್ವ ಕಾಲೇಜಿನ ದೈಹಿಕ ನಿರ್ದೇಶಕರಾದ ಸಾಯಿರಾಮ್, ಸಂಸ್ಥೆಯ ಸಂಯೋಜಕರಾದ ಯಶವಂತ್ ಜಿ.ನಾಯಕ್, ಪ್ರಾಥಮಿಕ ಹಾಗೂ ಪ್ರೌಢ ವಿಭಾಗದ ಮುಖ್ಯೋಪಾಧ್ಯಾಯಿನಿಯಾದ ವಿಜಯಾ ಕೆ. ಪ್ರಾಥಮಿಕ ಹಾಗೂ ಪ್ರೌಢ ವಿಭಾಗದ ದೈಹಿಕ ಶಿಕ್ಷಕಿ ಶ್ರೀಮತಿ ಹರಿಣಾಕ್ಷಿ ಜಿ.ಕೆ , ಕಾಲೇಜು ವಿಭಾಗದ ದೈಹಿಕ ನಿರ್ದೇಶಕರಾದ ಪ್ರಥ್ವಿರಾಜ್ ಉಪಸ್ಥಿತರಿದ್ದರು.

ಪಂದ್ಯಾಟದಲ್ಲಿ ಬಂಟ್ವಾಳ ತಾಲೂಕಿನ ವಿವಿಧ ಪದವಿಪೂರ್ವ ಕಾಲೇಜುಗಳ ಬಾಲಕ ಮತ್ತು ಬಾಲಕಿಯರ ತಂಡಗಳು ಭಾಗವಹಿಸಿ ತಮ್ಮ ಕ್ರೀಡಾ ಪ್ರತಿಭೆಯನ್ನು ಪ್ರದರ್ಶಿಸಿದವು. ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಸಹಕರಿಸಿದರು.

ವಾಣಿಜ್ಯಶಾಸ್ತ್ರ ಉಪನ್ಯಾಸಕಿ ಕು.ರೂಪಾಕ್ಷಿ ಸ್ವಾಗತಿಸಿ, ಅರ್ಥಶಾಸ್ತ್ರ ಉಪನ್ಯಾಸಕಿ ಸೌಮ್ಯ ಎನ್ ವಂದಿಸಿ , ವಾಣಿಜ್ಯಶಾಸ್ತ್ರ ಉಪನ್ಯಾಸಕಿ ದೀಕ್ಷಿತಾ ಎ ಕಾರ್ಯಕ್ರಮ ನಿರೂಪಿಸಿದರು.

Related posts

ಅರಸಿನಮಕ್ಕಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಕೊಕ್ಕಡ ಹೋಬಳಿ ಘಟಕಕ್ಕೆ ಚಾಲನೆ

Suddi Udaya

ವಾಣಿ ಪಿಯು ಕಾಲೇಜು ವಾಣಿಜ್ಯ ಸಂಘದ ವತಿಯಿಂದ ‘ಲೀಡರ್ಸ್ ಟಾಕ್’

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ವಿವಿಧ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya

ವೇಣೂರು ಯುವವಾಹಿನಿ ಘಟಕದಿಂದ ಗುರುನಾರಾಯಣ ಜಯಂತಿಯ ಪ್ರಯುಕ್ತ ಗುರುನಮನ

Suddi Udaya

ನಡ: ಜಮಲಾಬಾದ್ ಇದ್ಗ ಮೈದಾನ ನಲ್ಲಿ ಸಂಭ್ರಮದ ಈದ್ ಉಲ್ ಫಿತರ್ ಆಚರಣೆ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ : ಶಾಸಕ ಹರೀಶ್ ಪೂಂಜರಿಂದ ರಾಜ್ಯ ಮಟ್ಟದ ವಸ್ತು ಪ್ರದರ್ಶನ ಉದ್ಘಾಟನೆ

Suddi Udaya
error: Content is protected !!