32.2 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿಯಲ್ಲಿ ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ: ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಬೆಳ್ತಂಗಡಿ: ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಗಣೇಶೋತ್ಸವ ಸಮಿತಿಗಳ ಶಾಂತಿ ಸಭೆ ಸೆ. 11 ರಂದು ಠಾಣೆಯಲ್ಲಿ ಜರುಗಿತು.

ಬೆಳ್ತಂಗಡಿ ಇನ್ಸ್‌ಪೆಕ್ಟರ್ ರವಿ ಮತ್ತು ಸಬ್ ಇನ್ಸ್‌ಪೆಕ್ಟರ್ ಆನಂದ್ ಅವರ ನೇತೃತ್ವದಲ್ಲಿ ಸಭೆ ನಡೆಯಿತು. ಬೆಳ್ತಂಗಡಿ ವ್ಯಾಪ್ತಿಯಲ್ಲಿ ಈ ಬಾರಿ 25 ಕಡೆ ಗಣೇಶ ಚೌತಿ ಪ್ರತಿಷ್ಠಾಪನೆಯಾಗಲಿದ್ದು, 12 ಕಡೆ ವಿಸರ್ಜನಾ ಮೆರವಣಿಗೆ ನಡೆಯಲಿದೆ ಎಂದು ತಿಳಿಸಲಾಯಿತು.

ಪೊಲೀಸ್ ಇಲಾಖೆ ನೀಡಿದ ಪ್ರಮುಖ ಸೂಚನೆಗಳು:

ಬೆಳಿಗ್ಗೆ 6 ರಿಂದ ರಾತ್ರಿ 10 ಗಂಟೆವರೆಗೆ ಮಾತ್ರ ಧ್ವನಿವರ್ಧಕ ಬಳಕೆಗೆ ಅವಕಾಶ, ಡಿಜೆ ಬಳಕೆ ಸಂಪೂರ್ಣ ನಿಷೇಧ, ಸುಪ್ರೀಂ ಕೋರ್ಟ್ ಆದೇಶ ಕಡ್ಡಾಯ ಪಾಲನೆ ಮಾಡಬೇಕು.

ಪ್ರತಿ ಗಣೇಶ ಮಂಟಪದಲ್ಲಿ ಕಡ್ಡಾಯವಾಗಿ ಸಿಸಿ ಟಿವಿ ಅಳವಡಿಸಬೇಕು, ಬೆಳಗ್ಗೆ ಮತ್ತು ರಾತ್ರಿ ಕಾವಲುಗಾರರನ್ನು ನೇಮಿಸಬೇಕು.

ಸಮಿತಿಯವರೇ ಎಲ್ಲಾ ವಿಷಯಗಳಿಗೂ ಸಂಪೂರ್ಣ ಜವಾಬ್ದಾರಿ ಹೊರಬೇಕು. ಕಾರ್ಯಕ್ರಮಕ್ಕೆ ಜವಾಬ್ದಾರಿ ಮುಖ್ಯ, ನಿಯಮ ಪಾಲಿಸದಿದ್ದರೆ ಅನುಮತಿಯನ್ನು ನಿರಾಕರಿಸಲಾಗುವುದು.

ಧಾರ್ಮಿಕ ಕಾರ್ಯಕ್ರಮದ ಭಾಷಣದಲ್ಲಿ ಯಾವುದೇ ಗೊಂದಲ, ತೊಂದರೆ ಬಂದರೆ ಸಂಘಟಕರೇ ಜವಾಬ್ದಾರರು. ಧಾರ್ಮಿಕ ವಿಚಾರದ ಬಗ್ಗೆ ಮಾತ್ರ ಮಾತನಾಡಿ, ಧಾರ್ಮಿಕ ಉಪದೇಶ ನೀಡಬೇಕು.

ಬ್ಯಾನರ್ ಅಳವಡಿಕೆಗೆ ಪಂಚಾಯತ್ ಅನುಮತಿ ಕಡ್ಡಾಯ, ನಿಗದಿತ ಸಮಯಕ್ಕೆ ತೆರವುಗೊಳಿಸಬೇಕು. ಬ್ಯಾನರ್‌ನಲ್ಲಿ ಪ್ರಚೋದನಕಾರಿ ವಿಷಯ ಇರಬಾರದು.

ಮೆರವಣಿಗೆಯನ್ನು ಬೇಗನೆ ಶುರುಮಾಡಿ ನಿಗದಿತ ಸಮಯಕ್ಕೆ ಮುಗಿಸಬೇಕು, ಕಾನೂನು ಪಾಲಿಸಬೇಕು. ಮೆರವಣಿಗೆ ಶಾಂತ ರೀತಿಯಲ್ಲಿ ರಸ್ತೆ ಬದಿಯಲ್ಲಿ ಸಾಗಬೇಕು, ಸಾರ್ವಜನಿಕರಿಗೆ ತೊಂದರೆಯಾಗಬಾರದು.

ಮೆರವಣಿಗೆಯಲ್ಲಿ ವಿದ್ಯುತ್ ತಂತಿಗಳ ಬಗ್ಗೆ ಎಚ್ಚರ ವಹಿಸಬೇಕು. ವಿಸರ್ಜನಾ ಸ್ಥಳದಲ್ಲಿ ಲೈಟ್ ವ್ಯವಸ್ಥೆ ಮಾಡಬೇಕು, ನದಿಯಲ್ಲಿ ಈಜು ಬಲ್ಲವರನ್ನು ಮಾತ್ರ ನೀರಿಗೆ ಇಳಿಸಬೇಕು.

ಪೊಲೀಸ್ ಸಿಬ್ಬಂದಿ ಜೊತೆ ಜಗಳ, ವಾಗ್ವಾದ ನಡೆಸಿದರೆ ಸಂಘಟಕರೇ ಜವಾಬ್ದಾರರು ಎಂದು ಎಚ್ಚರಿಕೆ ನೀಡಲಾಯಿತು.

ಸಭೆಯಲ್ಲಿ ಬೆಳ್ತಂಗಡಿ ಗಣೇಶೋತ್ಸವ ಸಮಿತಿಯ ಅಧ್ಯಕ್ಷರು, ಕಾರ್ಯದರ್ಶಿಗಳು ಸೇರಿದಂತೆ ವಿವಿಧ ಸಮಿತಿಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

Related posts

ಕಾಂಗ್ರೆಸ್ ನಾಯಕರು ಆಯೋಜಿಸಿದ್ದ ಗಣೇಶೋತ್ಸವಕ್ಕೆ ಶಾಸಕ ಹರೀಶ್ ಪೂಂಜ ಮುಖ್ಯ ಅತಿಥಿ: ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಬ್ಯಾನರ್

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಹಿರಿಯ ಪಶುಪರೀಕ್ಷಕ ರಮೇಶ್ ಅಳದಂಗಡಿ ನೇಮಕ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾಗಿ ಶಶಿಧರ್ ಶೆಟ್ಟಿ ನವಶಕ್ತಿ ಆಯ್ಕೆ

Suddi Udaya

ಸಾವ್ಯ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷೆ ಆಶಾ ಅವರಿಗೆ ಕ್ಷೀರರತ್ನ ಪ್ರಶಸ್ತಿ

Suddi Udaya

ಕ್ರಾಂತಿವೀರ ಮಂಜ ಬೈದ್ಯರ ಕಂಚಿನ ಪುತ್ಥಳಿ ನಿರ್ಮಾಣ ಆಗಬೇಕು: ಕನ್ಯಾಡಿ ಶ್ರೀ

Suddi Udaya

ಶಾಸಕ ಹರೀಶ್ ಪೂಂಜರ‌ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲು

Suddi Udaya
error: Content is protected !!