ಕನ್ಯಾಡಿ: ಹಿಂದೂ ಧಾರ್ಮಿಕ ಸೇವಾ ಸಮಿತಿ ಕನ್ಯಾಡಿ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕನ್ಯಾಡಿ ಇವರ ವತಿಯಿಂದ 13ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಸೆ.14ರಂದು ಕನ್ಯಾಡಿ ಶಾಲಾ ವಠಾರದಲ್ಲಿ ಭಕ್ತಿ, ಶ್ರದ್ಧೆ ಹಾಗೂ ವಿಜೃಂಭಣೆಯಿಂದ ನಡೆಯಲಿದೆ.
ಕಳೆದ 12 ವರ್ಷಗಳಿಂದ ಸಾರ್ವಜನಿಕ ಶ್ರೀ ಗಣೇಶೋತ್ಸವವನ್ನು ಧಾರ್ಮಿಕ ಹಾಗೂ ಸಾಂಸ್ಕೃತಿಕ ವೈಭವದೊಂದಿಗೆ ಆಚರಿಸಿಕೊಂಡು ಬರಲಾಗುತ್ತಿದ್ದು, ಈ ಬಾರಿ 13ನೇ ವರ್ಷದ ಗಣೇಶೋತ್ಸವಕ್ಕೆ ವಿಶೇಷ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.
ಗಣೇಶೋತ್ಸವದ ದಿನವಾದ ಸೋಮವಾರ ಬೆಳಿಗ್ಗೆ 7.30 ಗಂಟೆಗೆ ಗಣಹೋಮ, ಮೂರ್ತಿ ಪ್ರತಿಷ್ಠೆ, ಧ್ವಜಾರೋಹಣ ಹಾಗೂ ವಿವಿಧ ಧಾರ್ಮಿಕ ವಿಧಿವಿಧಾನಗಳೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. ಬಳಿಕ ದೀಪ ಪ್ರಜ್ವಲನೆ, ಧಾರ್ಮಿಕ ಕಾರ್ಯಕ್ರಮಗಳು, ಗಣ್ಯರ ಉಪಸ್ಥಿತಿ ಹಾಗೂ ಭಜನಾ ಕಾರ್ಯಕ್ರಮಗಳು ನಡೆಯಲಿವೆ.
ಬೆಳಿಗ್ಗೆ 10.30 ಗಂಟೆಗೆ ಗಣಪತಿಯ ಚಿತ್ರ ಬಿಡಿಸುವ ಸ್ಪರ್ಧೆ ಏರ್ಪಡಿಸಲಾಗಿದ್ದು, ನಂತರ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 12.30 ಗಂಟೆಗೆ ಮಹಾಪೂಜೆ ಮತ್ತು ಪ್ರಸಾದ ವಿತರಣೆ, ಮಧ್ಯಾಹ್ನ 1 ಗಂಟೆಯಿಂದ ಸಾರ್ವಜನಿಕ ಅನ್ನಸಂತರ್ಪಣೆ ಹಾಗೂ ಮಧ್ಯಾಹ್ನ 2 ಗಂಟೆಯಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
ಸಂಜೆ 5 ಗಂಟೆಯಿಂದ ಭಜನಾ ಕಾರ್ಯಕ್ರಮ ನಡೆಯಲಿದ್ದು, ರಾತ್ರಿ 7 ಗಂಟೆಯಿಂದ ರಂಗಪೂಜೆ, ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ವೈಭವದ ಶೋಭಯಾತ್ರೆ ನಡೆಯಲಿದೆ. ಪುಣ್ಯ ನದಿ ನೇತ್ರಾವತಿ ಯಲ್ಲಿ ಗಣಪತಿ ವಿಸರ್ಜನೆ.
ಭಕ್ತಿ, ಧಾರ್ಮಿಕತೆ ಮತ್ತು ದೇಶಪ್ರೇಮದ ಸಂದೇಶ ಸಾರುವ ಕಾರ್ಯಕ್ರಮಗಳೊಂದಿಗೆ ಗಣೇಶೋತ್ಸವವು ಸಂಪನ್ನಗೊಳ್ಳಲಿದೆ.
ಶ್ರೀ ಗಣೇಶೋತ್ಸವದ ವಿವಿಧ ಕಾರ್ಯಕ್ರಮಗಳಲ್ಲಿ ಕನ್ಯಾಡಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಭಕ್ತಾದಿಗಳು, ಸಾರ್ವಜನಿಕರು ಮತ್ತು ಗಣಪತಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಹಿಂದೂ ಧಾರ್ಮಿಕ ಸೇವಾ ಸಮಿತಿ ಕನ್ಯಾಡಿ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕನ್ಯಾಡಿ ಪ್ರಕಟಣೆಯಲ್ಲಿ ವಿನಂತಿಸಿದೆ.












