30.1 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಮಹಿಳೆಯರಿಗಾಗಿ 38ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಉದ್ಘಾಟನೆ

ಉಜಿರೆ : ಸೇವಾಭಾರತಿ(ರಿ.), ಕನ್ಯಾಡಿ ಇದರ ನೇತೃತ್ವದಲ್ಲಿ ಸಬಲಿನಿ ಯೋಜನೆಯಡಿ ಲಯನ್ಸ್ ಕ್ಲಬ್, ಬೆಳ್ತಂಗಡಿ ಪ್ರೇರಣಾ ಸಂಜೀವಿನಿ ಮಹಿಳಾ ಒಕ್ಕೂಟ(ರಿ.), ಮಹಾತ್ಮಾ ಗಾಂಧಿ ಗ್ರಾಮ ಪಂಚಾಯತ್, ಉಜಿರೆ ಮತ್ತು ಶ್ರೀ ದುರ್ಗಾಮಾತೃ ಮಂಡಳಿ, ಕನ್ಯಾಡಿ ಇದರ ಸಹಭಾಗಿತ್ವದಲ್ಲಿ ಮಹಿಳೆಯರಿಗಾಗಿ 38 ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಉದ್ಘಾಟನಾ ಸಮಾರಂಭವು ಸೆ. 10 ರಂದು ಸಂಜೀವಿನಿ ಕಟ್ಟಡ ಗ್ರಾಮ ಪಂಚಾಯತ್ ಉಜಿರೆಯಲ್ಲಿ ನಡೆಯಿತು.

ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಅಧ್ಯಕ್ಷ ಲಯನ್ ರಘುರಾಮ ಶೆಟ್ಟಿ ”ಸಾಧನಾ'” ರವರು ಶಿಬಿರಕ್ಕೆ ಚಾಲನೆ ನೀಡಿ, ಟೈಲರಿಂಗ್ ತರಬೇತಿಯು ಕೇವಲ ಕಲೆ ಮಾತ್ರವಲ್ಲ, ಸ್ವಯಂ ಉದ್ಯೋಗ ಮತ್ತು ಆರ್ಥಿಕ ಸಬಲೀಕರಣದ ಉತ್ತಮ ಅವಕಾಶವಾಗಿದೆ. ಈ ತರಬೇತಿಯ ಮೂಲಕ ಹೊಸ ಕೌಶಲ್ಯಗಳನ್ನು ಕಲಿತು ಸ್ವಾವಲಂಬಿಗಳಾಗುವಂತೆ ಶುಭಹಾರೈಸಿದರು.

ಸೇವಾಭಾರತಿ ಅಧ್ಯಕ್ಷ ಹಾಗೂ ಸೇವಾಧಾಮ ಸಂಸ್ಥಾಪಕ ಕೆ ವಿನಾಯಕ ರಾವ್ ರವರು ಯಶಸ್ಸಿಗೆ ದೊಡ್ಡ ಅವಕಾಶಗಳಿಗಿಂತ ಕಲಿಯುವ ಮನಸ್ಸು ಮತ್ತು ಹೊಸ ವಿಷಯಗಳನ್ನು ತಿಳಿದುಕೊಳ್ಳುವ ಆಸಕ್ತಿ ಮುಖ್ಯ. ಆದ್ದರಿಂದ ಈ ತರಬೇತಿಯನ್ನು ಉತ್ತಮ ಅವಕಾಶವಾಗಿ ಸ್ವೀಕರಿಸಿ ಎಂದು ಅಧ್ಯಕ್ಷರ ನುಡಿಗಳನ್ನಾಡಿದರು.
ಮುಖ್ಯ ಅತಿಥಿಗಳಾಗಿ ಉಜಿರೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಪ್ರಕಾಶ್ ಶೆಟ್ಟಿ,ಮಹಿಳೆಯರು ಸ್ವಾವಲಂಬನೆ ಮತ್ತು ಉದ್ಯಮಶೀಲರಾಗಲು ಸಾಕಷ್ಟು ಕಾರ್ಯಕ್ರಮಗಳನ್ನು ನಡೆಸಿದ್ದೇವೆ ಮುಂದೆಯೂ ಸದಾ ನನ್ನ ಬೆಂಬಲವಿದೆ. ಎಂದು ಶುಭ ಹಾರೈಸಿದರು.

ವೇದಿಕೆಯಲ್ಲಿ ಉಜಿರೆ ಪ್ರೇರಣಾ ಸಂಜೀವಿನಿ ಮಹಿಳಾ ಒಕ್ಕೂಟ(ರಿ.), ಅಧ್ಯಕ್ಷೆ ವಿನುತಾ ರಜತ್ ಗೌಡ, ಬೆಳ್ತಂಗಡಿ ಲಯನ್ಸ್ ಕ್ಲಬ್ ಕಾರ್ಯದರ್ಶಿ ಲಯನ್ ಅಮಿತಾನಂದ ಹೆಗ್ಡೆ ಗ್ರಾಮ ಪಂಚಯಾತ್ ಮಾಜಿ ಅಧ್ಯಕ್ಷೆ ಪುಷ್ಪವತಿ, ಬೆಳ್ತಂಗಡಿ ತಾಲೂಕು ಕೃಷಿಯೇತರ ವ್ಯವಸ್ಥಾಪಕ ನಿತೀಶ್ ಉಜಿರೆ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಉಷಾ ಕಿರಣ್ ಕಾರಂತ್, ಕನ್ಯಾಡಿ ಶ್ರೀ ದುರ್ಗಾಮಾತೃ ಮಂಡಳಿ ಅಧ್ಯಕ್ಷೆ ಮಮತಾ ಬಿ, ಟೈಲರಿಂಗ್ ತರಬೇತುದಾರರಾದ ಲಲಿತ ಉಪಸ್ಥಿತರಿದ್ದರು.

ಶಿಬಿರದಲ್ಲಿ ಒಟ್ಟು 66 ಮಂದಿ ಮಹಿಳಾ ಶಿಬಿರಾರ್ಥಿಗಳು ಭಾಗವಹಿಸಿದ್ದರು. ಬೆಳ್ತಂಗಡಿ ಪ್ರೇರಣಾ ಸಂಜೀವಿನಿ ಮಹಿಳಾ ಒಕ್ಕೂಟದ ಶಾಶ್ವಿತ ಸ್ವಾಗತಿಸಿ, ಸಂಧ್ಯಾ ನಿರೂಪಿಸಿ, ಭಾಗೀರಥಿ ಧನ್ಯವಾದವಿತ್ತರು.

Related posts

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ವಾಣಿ ಕಾಲೇಜು: ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

Suddi Udaya

ಗುರುವಾಯನಕೆರೆ ವಿಕಾಸ ವಿ.ಸ. ಸಂಘದ ಮಹಾಸಭೆ: ಶೇ.15 ಡಿವಿಡೆಂಡ್ ಘೋಷಣೆ , ರೂ. 262.73 ಕೋಟಿ ವ್ಯವಹಾರ

Suddi Udaya

ಬೆಳ್ತಂಗಡಿ ಸರ್ಕಾರಿ ಮಾದರಿ ಹಿ.ಪ್ರಾ ಶಾಲೆಯಲ್ಲಿ ಸಂಭ್ರಮ ಶನಿವಾರಕ್ಕೆ ಚಾಲನೆ

Suddi Udaya

ಚಿಕ್ಕಮಗಳೂರಿನಲ್ಲಿ ಕಳ್ಳತನವಾದ ಓಮಿನಿ ಕಾರು ಉಜಿರೆಯಲ್ಲಿ ಪತ್ತೆ: ಮಾಲೀಕನ ಸ್ನೇಹಿತರ ಮೂಲಕ 10 ದಿನದಲ್ಲಿ ಕಾರು ಪತ್ತೆ

Suddi Udaya

ಕೊಕ್ಕಡ: ಕೆಎಸ್ಆರ್‌ಟಿಸಿ ಬಸ್–ಕಾರು ಮುಖಾಮುಖಿ ಡಿಕ್ಕಿ: ಮಹಿಳೆಗೆ ಗಾಯ

Suddi Udaya
error: Content is protected !!