30.1 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆ

ಬೆಳ್ತಂಗಡಿ: ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆಯು ಸಮಿತಿಯ ಅಧ್ಯಕ್ಷ ಪದ್ಮನಾಭ ಸಾಲ್ಯಾನ್ ರವರ ಅಧ್ಯಕ್ಷತೆಯಲ್ಲಿ ಪಂಚ ಗ್ಯಾರಂಟಿ ಯೋಜನೆ ಸದಸ್ಯ ಕಾರ್ಯದರ್ಶಿ ಹಾಗೂ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್ ಎನ್. ಇವರ ಉಪಸ್ಥಿತಿಯಲ್ಲಿ ಬೆಳ್ತಂಗಡಿ ತಾಲೂಕು ಪಂಚಾಯತಿಯ ಗ್ಯಾರಂಟಿ ಅನುಷ್ಟಾನ ಸಮಿತಿ ಕಛೇರಿಯಲ್ಲಿ ನಡೆಯಿತು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮೆಸ್ಕಾಂ ಇಲಾಖೆ, ಆಹಾರ ಇಲಾಖೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮತ್ತು ಉದ್ಯೋಗ ವಿನಿಮಯ ಕಛೇರಿಗಳ ಮೂಲಕ ಗೃಹಲಕ್ಷ್ಮೀ, ಗೃಹಜ್ಯೋತಿ, ಅನ್ನಭಾಗ್ಯ, ಶಕ್ತಿ ಹಾಗೂ ಯುವನಿಧಿ ಯೋಜನೆಗಳಲ್ಲಿ ಸರ್ಕಾರದಿಂದ ಬಿಡುಗಡೆಯಾದ ಅನುದಾನ ಹಾಗೂ ಸವಲತ್ತು ಪಡೆದ ಫಲಾನುಭವಿಗಳ ಸಂಖ್ಯೆಯನ್ನು ಪರಿಶೀಲಿಸಲಾಯಿತು. ಸರ್ಕಾರದ ಪಂಚಯೋಜನೆಗಳ ಸವಲತ್ತುಗಳನ್ನು ಪಡೆಯಲು ಬಾಕಿ ಇರುವ ಫಲಾನುಭವಿಗಳ ಅರ್ಜಿಗಳನ್ನು ವಿಲೇವಾರಿಗೊಳಿಸುವ ಕುರಿತು ಚರ್ಚಿಸಲಾಯಿತು.

ಗೃಹಜ್ಯೋತಿ ಯೋಜನೆಯಡಿ ಉಜಿರೆ ಉಪವಿಭಾಗದಲ್ಲಿ 2026ರ ಜುಲೈ ಮಾಹೆಯಲ್ಲಿ 27197 ಕುಟುಂಬಗಳಿಗೆ 1,39,50,796/- ರೂ, ಹಾಗೂ ಬೆಳ್ತಂಗಡಿ ಉಪವಿಭಾಗದಲ್ಲಿ 2026ರ ಜುಲೈ ಮಾಹೆಯಲ್ಲಿ 45896 ಕುಟುಂಬಗಳಿಗೆ 2,74,91,230/-ರೂ ಸಹಾಯಧನ ದೊರತಿದ್ದು ತಾಲೂಕಿಗೆ ಈವರೆಗೆ 1,37,02,05,579/- ರೂ ಸಹಾಯಧನ ದೊರೆತಿರುವುದಾಗಿ ಮೆಸ್ಕಾಂ ಇಲಾಖೆಯ ಸಹಾಖೆಯಕ ಕಾರ್ಯಪಾಲಕ ಅಭಿಯಂತರರು ಸಭೆಗೆ ತಿಳಿಸಿದರು. ತಾಲೂಕಿನ ಅರ್ಹ ಗೃಹಜ್ಯೋತಿ ಫಲಾನುಭವಿಗಳ ಹೆಚ್ಚುವರಿ ಮಾಹಿತಿಯನ್ನು ಸಂಗ್ರಹಿಸುವ ಕಾರ್ಯವು ಪ್ರಗತಿಯಲ್ಲಿದ್ದು, ಉಜಿರೆ ಉಪವಿಭಾಗದಲ್ಲಿ ಒಟ್ಟು 25581 ಕುಟುಂಬಗಳಲ್ಲಿ 23935 ಕುಟುಂಬಗಳ ಹೆಚ್ಚುವರಿ ಮಾಹಿತಿಯನ್ನು ಸಂಗ್ರಹಿಸಲಾಗಿ ಶೇಕಡಾ 94% ಪ್ರಗತಿಯನ್ನು ಸಾಧಿಸಲಾಗಿದೆ. ಬೆಳ್ತಂಗಡಿ ಉಪವಿಭಾಗದಲ್ಲಿ ಒಟ್ಟು 47477 ಕುಟುಂಬಗಳಲ್ಲಿ 44208 ಕುಟುಂಬಗಳ ಹೆಚ್ಚುವರಿ ಮಾಹಿತಿಯನ್ನು ಸಂಗ್ರಹಿಸಲಾಗಿ ಶೇಕಡಾ 93% ಪ್ರಗತಿಯನ್ನು ಸಾಧಿಸಲಾಗಿದೆ. 30 ಸೆಪ್ಟೆಂಬರ್ 2026ರೊಳಗೆ ಪರಿಶೀಲನೆಗೆ ಬಾಕಿ ಇರುವ ಅರ್ಹ ಫಲಾನುಭವಿಗಳ ಮಾಹಿತಿಯನ್ನು ಪಡೆದು ಸರ್ವೆಯನ್ನು ಪೂರ್ಣಗೊಳಿಸುವಂತೆ ಮೆಸ್ಕಾಂ ಇಲಾಖೆಗೆ ಗ್ಯಾರಂಟಿ ಯೋಜನೆಯ ಅಧ್ಯಕ್ಷರು ಸೂಚಿಸಿದರು.

ಗೃಹಲಕ್ಷ್ಮೀ ಯೋಜನೆಯಡಿ ಪ್ರಸ್ತುತ 59204 ಫಲಾನುಭವಿಗಳಿದ್ದು, ಆಗಸ್ಟ್-2023 ರಿಂದ ಜೂನ್ 2026 ರವರೆಗೆ ತಾಲೂಕಿನ ಅರ್ಹ ಗೃಹಲಕ್ಷ್ಮೀ ಯೋಜನೆಯ ಕುಟುಂಬಗಳಿಗೆ 351,39,44,000/-ರೂ ಸಹಾಯಧನ ದೊರೆತಿರುವುದಾಗಿ ಹಾಗೂ ಗೃಹಲಕ್ಷ್ಮೀ ಯೋಜನೆಯ ಮರುಪರಿಶೀಲನೆ ಮಾಡುವ ಕಾರ್ಯವು ಸರಕಾರವು ಆದೇಶ ಹೊರಡಿಸಿದ ನಂತರ ನಡೆಸುವುದಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಇವರು ಸಭೆಗೆ ಮಾಹಿತಿ ನೀಡಿದರು.

ಅನ್ನ ಭಾಗ್ಯ ಯೋಜನೆಗೆ ಸಂಬಂಧಿಸಿದಂತೆ ಆಗಸ್ಟ್ 2026ರ ವರೆಗೆ ತಾಲೂಕಿನಲ್ಲಿ ಒಟ್ಟು 48388 ಪಡಿತರ ಚೀಟಿಗಳಲ್ಲಿ 44868 ಪಡಿತರ ಚೀಟಿಗಳಿಗೆ ವಿತರಿಸಲಾಗಿ ಶೇಕಡಾ 92.73% ರಂತೆ 18943 ಕ್ವಿಂಟಾಲ್ ಪಡಿತರ ಅಕ್ಕಿ ವಿತರಿಸಲಾಗಿದೆ. ಆಹಾರ ಇಲಾಖೆಯ ಆಯುಕ್ತರ ಕಚೇರಿಯಿಂದ ಇ-ಕೆವೈಸಿ ಯಾಗಿ 5 ವರ್ಷ ಪೂರ್ಣಗೊಳಿಸಿದ ಪಡಿತರ ಚೀಟಿಯ ಪಟ್ಟಿಯನ್ನು ನೀಡಲಾಗಿದ್ದು, ಸದರಿ ಪಟ್ಟಿಯಲ್ಲಿರುವ ಎಲ್ಲಾ ಪಡಿತರ ಚೀಟಿಯ ಸದಸ್ಯರು ನ್ಯಾಯಬೆಲೆ ಅಂಗಡಿಗಳಿಗೆ ತೆರಳಿ ಸೆ.30 ರೊಳಗೆ ಇ-ಕೆವೈಸಿ ಮಾಡಿಸಬೇಕಾಗಿರುತ್ತದೆ ಎಂದು ಆಹಾರ ನಿರೀಕ್ಷಕರು ಸಭೆಗೆ ವಿವರ ನೀಡಿದರು.

ಶಕ್ತಿ ಯೋಜನೆಯಡಿ ಧರ್ಮಸ್ಥಳ ಘಟಕದ ಬಸ್ಸುಗಳ ಮೂಲಕ 2026ರ ಆಗಸ್ಟ್ ತಿಂಗಳಲ್ಲಿ ಒಟ್ಟು 7,29,256 ಮಹಿಳಾ ಪ್ರಯಾಣಿಕರು ಯೋಜನೆಯ ಸವಲತ್ತನ್ನು ಪಡೆದಿದ್ದು, ಜೂನ್-2023 ರಿಂದ ಈವರೆಗೆ ರೂ.119,82,30,813/- ಖರ್ಚು ಭರಿಸುವುದಾಗಿ ಧರ್ಮಸ್ಥಳ ಘಟಕದ ಮೇಲ್ವಿಚಾರಕರು ಸಭೆಗೆ ಮಾಹಿತಿ ನೀಡಿದರು.


ಯುವನಿಧಿ ಯೋಜನೆಯಡಿ ಜಿಲ್ಲೆಯಲ್ಲಿ ಒಟ್ಟು 8274 ಫಲಾನುಭವಿಗಳಿದ್ದು, ಬೆಳ್ತಂಗಡಿ ತಾಲೂಕಿನ 1222 ಅಭ್ಯರ್ಥಿಗಳು ನೋಂದಣಿಗೊಂಡಿರುತ್ತಾರೆ. ತಾಲೂಕಿನಲ್ಲಿ ಒಟ್ಟು 1132 ಅರ್ಹ ಫಲಾನುಭವಿಗಳಿಗೆ ಡಿ.ಬಿ.ಟಿ ಮೂಲಕ ಸಹಾಯಧನವನ್ನು ವಿತರಿಸಲಾಗಿದ್ದು, ಈವರೆಗೆ 3,33,52,500 ರೂ.ಗಳನ್ನು ಸರ್ಕಾರದಿಂದ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗಿದೆ ಎಂದು ಶ್ರೀಮತಿ ಮಂಜೂಷ ತಿಳಿಸಿದರು.

ಸಭೆಯಲ್ಲಿ ತಾಲೂಕು ಪಂಚ ಗ್ಯಾರಂಟಿ ಅನುಷ್ಟಾನ ಸಮಿತಿಯ ಸದಸ್ಯರಾದ ವಂದನಾ ಕುಮಾರಿ, ಮೆರಿಟಾ ಪಿಂಟೋ, ಸೌಮ್ಯ ಲಾಯಿಲ, ವೀರಪ್ಪ ಮೊಯ್ಲಿ, ವಿಜಯ ಗೌಡ ಬೆಳಾಲು, ಶರೀಫ್ ಶಬರಬೈಲ್, ಕೆ.ನೇಮಿರಾಜ್ ಕಿಲ್ಲೂರು, ಕೇಶವ ನಾಯ್ಕ, ಸತೀಶ ಹೆಗ್ಡೆ, ವಾಸುದೇವ ರಾವ್, ಹಾಗೂ ನೋಡೆಲ್ ಅಧಿಕಾರಿಯಾದ ಹೆರಾಲ್ಡ್ ಸ್ವಿಕ್ವೇರಾ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಸವಣಾಲು ಅ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬಿಜೆಪಿ ಜಿಲ್ಲಾ ಮಟ್ಟದ ವಿವಿಧ ಮೋರ್ಚಾಗಳ ಪ್ರಧಾನ ಕಾರ್ಯದರ್ಶಿಗಳ ನೇಮಕ

Suddi Udaya

ರಾಣಿ ಅಬ್ಬಕ್ಕ 500 ವಿಶೇಷ ಉಪನ್ಯಾಸ ಕಾರ್ಯಕ್ರಮ: ಶ್ರೀಮತಿ ರಶ್ಮಿತಾ ಜೈನ್ ಇವರಿಗೆ ರಾಣಿ ಅಬ್ಬಕ್ಕ ವಿಶೇಷ ಪುರಸ್ಕಾರ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಬಾರ್ಯ ಗ್ರಾ.ಪಂ ಎದುರು ಬಿಜೆಪಿ ಪ್ರತಿಭಟನೆ

Suddi Udaya

ನಾಡಿನ ಪುಣ್ಯಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ 13ನೇ ವರ್ಷದ ಪಾದಯಾತ್ರೆಯ ಪೂರ್ವಭಾವಿ ಸಭೆ

Suddi Udaya

ಮಾರಾಟ ತೆರಿಗೆ ಹೆಚ್ಚಿಸಿ ಪೆಟ್ರೋಲ್ ಡೀಸಿಲ್ ದರ ಏರಿಸಿದ‌ ರಾಜ್ಯದ ಕಾಂಗ್ರೇಸ್ ಸರಕಾರದ ನಡೆ ಖಂಡನೀಯ ಸಿಪಿಐಎಂ ಬೆಳ್ತಂಗಡಿ ತಾಲೂಕು ಮುಖಂಡ ನ್ಯಾಯವಾದಿ ಬಿ.ಎಂ.ಭಟ್

Suddi Udaya
error: Content is protected !!