30.1 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಚಿಕಿತ್ಸೆಯ ಕುರಿತು ಸಂವಾದ ಕಾರ್ಯಕ್ರಮ

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜು, ಜೂನಿಯರ್ ರೆಡ್ ಕ್ರಾಸ್ ಘಟಕದ ವತಿಯಿಂದ “ಪ್ರಥಮ ಚಿಕಿತ್ಸೆಯ ಮೂಲಭೂತ ಅಂಶಗಳು” ವಿಷಯದ ಕುರಿತು ಸಂವಾದ ಕಾರ್ಯಕ್ರಮವು ಸೆ. 10ರಂದು ಕಾಲೇಜಿನಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಎಂ. ವಹಿಸಿದ್ದರು.

ಎಸ್.ಡಿ.ಎಂ ಪಾಲಿಟೆಕ್ನಿಕ್ ಕಾಲೇಜು, ಉಜಿರೆಯ ಉಪನ್ಯಾಸಕ ಅವನೀಶ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ತುರ್ತು ಸಂದರ್ಭಗಳಲ್ಲಿ ಪ್ರಥಮ ಚಿಕಿತ್ಸೆಯ ಮಹತ್ವ, ಕೈಗೊಳ್ಳಬೇಕಾದ ಪ್ರಾಥಮಿಕ ಕ್ರಮಗಳು ಹಾಗೂ ಅಪಘಾತ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ವಿದ್ಯಾರ್ಥಿಗಳು ವಹಿಸಬೇಕಾದ ಜವಾಬ್ದಾರಿಗಳ ಕುರಿತು ಪ್ರಾಯೋಗಿಕ ಹಾಗೂ ಉಪಯುಕ್ತ ಮಾಹಿತಿಯನ್ನು ನೀಡಿದರು.
ಕಾರ್ಯಕ್ರಮದ ನಿರೂಪಣೆಯನ್ನು ಕುಮಾರಿ ಸಿಂಚನಾ ಎಂ.ಸಿ. ನೆರವೇರಿಸಿದರು.

ಕುಮಾರಿ ರುಶಿಕಾ ಅತಿಥಿಗಳನ್ನು ಸ್ವಾಗತಿಸಿದರು. ಶ್ರೀಮತಿ ಅನುರಾಧಾ ಕೆ. ರಾವ್, ಜೂನಿಯರ್ ರೆಡ್ ಕ್ರಾಸ್ ಘಟಕದ ಸಂಯೋಜಕಿ, ಸಂಪನ್ಮೂಲ ವ್ಯಕ್ತಿಯನ್ನು ಪರಿಚಯಿಸಿದರು.


ಕಾರ್ಯಕ್ರಮದ ಕುರಿತು ವಿದ್ಯಾರ್ಥಿಗಳಾದ ಅರೇಲ್ ರಿಷಾ ರೋಡ್ರಿಗಸ್ ಹಾಗೂ ಸಂಭ್ರಮ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಜೂನಿಯರ್ ರೆಡ್ ಕ್ರಾಸ್ ಘಟಕದ ಯೂನಿಟ್ ಲೀಡರ್ ಮನೀಶ್ ವಂದನಾರ್ಪಣೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತಾಧಿಕಾರಿ ಪ್ರಸಾದ್ ಕುಮಾರ್, ಜೂನಿಯರ್ ರೆಡ್ ಕ್ರಾಸ್ ಘಟಕದ ಸಂಯೋಜಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಮೊಗ್ರು ಸರಕಾರಿ ಶಾಲೆಯಲ್ಲಿ ಆಂ.ಮಾ. ಶಿಕ್ಷಣ ನೀಡಲು ಅನುಮತಿ: ಟ್ರಸ್ಟ್ ನ ಪ್ರಯತ್ನ | ಶಾಸಕರ ಸಾಥ್ | ಸರಕಾರದ ನಿರ್ಧಾರ

Suddi Udaya

“ಒಂದೇ ಭಾರತ ಒಂದೇ ತುರ್ತು ಕರೆ-112” ಸಹಾಯವಾಣಿ ಪ್ರಾರಂಭ

Suddi Udaya

ಗುರುವಾಯನಕೆರೆಯಲ್ಲಿ ಎಂ.ಆರ್.ಪಿ.ಎಲ್ ಸಂಸ್ಥೆಯ ಸಹಕಾರದೊಂದಿಗೆ ಕಾರ್ಯಾರಂಭಗೊಂಡ ಶ್ರೀ ಶಾಂತೀಶ್ವರ ಫ್ಯೂಯಲ್ ನ ಉದ್ಘಾಟನೆ

Suddi Udaya

ಸೊಂಟದ ಬಾಲ್ಸ್ ಸಮಸ್ಯೆಯಿಂದ ಬಳಲುತ್ತಿರುವ ಬಂದಾರು ಕುಂಟಾಲಪಲ್ಕೆ ಕಲ್ಲಿಮಾರು ನಿವಾಸಿ ಹರಿಶ್ಚಂದ್ರ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಪ್ರಸಿದ್ದ ಉದ್ಯಮಿ ಮೋಹನ್ ಕುಮಾರ್ ಅವರನ್ನು ಭೇಟಿಯಾದ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಮೋಹಿತ್

Suddi Udaya

ನಿಡ್ಲೆ: ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಆಟೋಚಾಲಕ

Suddi Udaya
error: Content is protected !!