30.2 C
ಪುತ್ತೂರು, ಬೆಳ್ತಂಗಡಿ
September 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಚ್ಚ ನ್ಯಾಯಾಲಯದ  ನ್ಯಾಯಮೂರ್ತಿಯಾಗಿ ನೇಮಕಗೊಂಡ ಉಷಾರಾಣಿ: ಬೆಳ್ತಂಗಡಿ ತಾಲೂಕಿಗೆ ಹೆಮ್ಮೆಯ ವಿಚಾರ: ಅಲೋಶಿಯಸ್ ಲೋಬೋ

ಬೆಳ್ತಂಗಡಿ ತಾಲೂಕಿನ ಇತಿಹಾಸದಲ್ಲಿ ಉಚ್ಚನ್ಯಾಯಾಲದ ನ್ಯಾಯಮೂರ್ತಿಯಾಗಿ ನೇಮಕವಾಗಿರುವುದು ಅತ್ಯಂತ ಹೆಮ್ಮೆಯ ವಿಚಾರವಾಗಿರುತ್ತದೆ . ಬೆಳ್ತಂಗಡಿಯ ಹಿರಿಯ ವಕೀಲರು ಹಾಗೂ ಸಮಾಜ ಸೇವಕರು, ಧರ್ಮರಕ್ಷಕರು ಆದ ಎಲ್ಲರ ಚಿರ ಪರಿಚಿತ ದಿವಂಗತ ನೇಮಿರಾಜ ಶೆಟ್ಟಿ ಅವರ ಪುತ್ರಿ .

1991ರಲ್ಲಿ ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನಿಂದ ಕೆ ಎ ಆರ್‌ / 918 /91ರಂತೆ ಬೆಳ್ತಂಗಡಿ ನ್ಯಾಯಾಲಯದಲ್ಲಿ ತನ್ನ ತಂದೆಯೊಂದಿಗೆ ವಕೀಲ ವೃತಿಯನ್ನು ಆರಂಭಿಸಿ, ಕೆಲವೇ ಕೆಲವು  ವರ್ಷಗಳಲ್ಲಿ ನ್ಯಾಯಾಧೀಶರಾಗಿ ಆಯ್ಕೆಗೊಂಡು , ಬೆಂಗಳೂರಿನಲ್ಲಿ ಲೋಕಾಯುಕ್ತ ನ್ಯಾಯಾಧೀಶರಾಗಿ , ಮೈಸೂರಿನಲ್ಲಿ  ಪ್ರಧಾನ ಜಿಲ್ಲಾ ಮತ್ತು ಸತ್ರ  ನ್ಯಾಯಾಧೀಶರಾಗಿ  , ಹಾಸನದಲ್ಲಿ ಜಿಲ್ಲಾ ನ್ಯಾಯಾಧೀಶರಾಗಿ ಹಾಗೂ ಇತರ ಹಲವಾರು ಕಡೆಗಳಲ್ಲಿ ಅತ್ತುತ್ಯಮ ನ್ಯಾಯಾಧೀಶರು ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುತ್ತಾರೆ. ತಮ್ಮ ನ್ಯಾಯಾಂಗ ಸೇವೆಯ ಅವಧಿಯಲ್ಲಿ ಇವರು ಮಾನವ  ಅಕ್ರಮ ಸಾಗಾಣಿಕೆ ತಡೆ , ಹೆಣ್ಣು ಮಕ್ಕಳ ಶಿಕ್ಷಣದ ಹಕ್ಕುಗಳು ಮತ್ತು ಮಹಿಳಾ ಸಬಲೀಕರಣದ ಕುರಿತು ಕಾನೂನು ಜಾಗೃತಿ ಮೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ .

ಬೆಳ್ತಂಗಡಿಯಲ್ಲಿ ನ್ಯಾಯಾಲಯದಲ್ಲಿ ವೃತ್ತಿಯಲ್ಲಿ ನಿರತರಾಗಿದ್ದ ಸಮಯದಲ್ಲಿ ಅಂದಿನ ಪ್ರಧಾನ  ನ್ಯಾಯಾಧೀಶರಾದ ನಿಂಗನ ಗೌಡ ಜಂತ್ಲಿ ಇವರ ಪ್ರೇರಣೆಯಿಂದ  ನ್ಯಾಯಾಧೀಶರಾಗಿ ಆಯ್ಕೆಗೊಂಡು ನನ್ನ ಸಹದ್ಯೋಗಿ  ಇಂದು ಉಚ್ಚ ನ್ಯಾಯಾಲಯದ ನ್ಯಾಯಾಮೂರ್ತಿಯಾಗಿ ನೇಮಕಗೊಂಡಿರುವುದು ನಮ್ಮ ಬೆಳ್ತಂಗಡಿ ವಕೀಲರ ಸಂಘಕ್ಕೆ ಹೆಮ್ಮೆಯ ವಿಚಾರ ವಾಗಿರುತ್ತದೆ ಎಂದು ಸಂಘದ ಅಧ್ಯಕ್ಷ ಅಲೋಶಿಯಸ್ ಲೋಬೋ ಸಂತೋಷ   ವ್ಯಕ್ತಪಡಿಸಿದ್ದಾರೆ.

Related posts

ಎಸ್‌ಡಿಎಂ ಆಯುರ್ವೇದ ಕಾಲೇಜಿನಲ್ಲಿ ಕ್ಷಮತ್ವಂ 2026: ಆಟೋಇಮ್ಯೂನ್ ಕಾಯಿಲೆಗಳ ಕುರಿತು ಆಯುರ್ವೇದದ ಜಾಗತಿಕ ಸಂವಾದಕ್ಕೆ ವೇದಿಕೆ

Suddi Udaya

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನವೀಕೃತ ಮಡಂತ್ಯಾರು ಶಾಖೆಯ ಉದ್ಘಾಟನೆ

Suddi Udaya

ವಲಯ ಮಟ್ಟದ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಸ.ಪ್ರೌ.ಶಾಲೆ ಗೇರುಕಟ್ಟೆ ಪ್ರಥಮ

Suddi Udaya

ಧರ್ಮಸ್ಥಳ: ಪೊಸೊಳಿಕೆ ಅಂಗನವಾಡಿ ಕೇಂದ್ರದಲ್ಲಿ ಬಾಲ ಮೇಳ ಆಚರಣೆ

Suddi Udaya

ರಾಜ್ಯ ಸರ್ಕಾರದ ಜನವಿರೋಧಿ ನೀತಿಯನ್ನು ವಿರೋಧಿಸಿ ಕುವೆಟ್ಟು ಗ್ರಾಮ ಪಂಚಾಯತ್ ಎದುರು ಪ್ರತಿಭಟನೆ

Suddi Udaya

ಕುದ್ಯಾಡಿ: ಶ್ರೀಮತಿ ವಿಮಲ ಹಾಗೂ ಗೋಪಾಲ ಪೂಜಾರಿ ದಂಪತಿಗಳ ವೈವಾಹಿಕ ಜೀವನದ ಸುವರ್ಣ ಸಂಭ್ರಮ ಆಚರಣೆ

Suddi Udaya
error: Content is protected !!