30.8 C
ಪುತ್ತೂರು, ಬೆಳ್ತಂಗಡಿ
September 12, 2026
ಅಪಘಾತತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ ಸಮೀಪ ಸರ್ಕಾರಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿ

ಕೊಕ್ಕಡ: ಕೊಕ್ಕಡ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಹಾಗೂ ಕೆ.ಎಸ್. ಆರ್.ಟಿ.ಸಿ ಬಸ್ ನಡುವೆ ಅಪಘಾತ ಸಂಭವಿಸಿದ್ದು ಹಲವರು ಗಾಯಗೊಂಡ ಘಟನೆ ಸೆ 12 ರಂದು ಮಧ್ಯಾಹ್ನದ ವೇಳೆ ಸಂಭವಿಸಿದೆ.

ಧರ್ಮಸ್ಥಳ ದಿಂದ ಬೆಂಗಳೂರು ಕಡೆ ಹೋಗುತ್ತಿದ್ದ ಕಾರು ಹಾಗೂ ಸುಬ್ರಹ್ಮಣ್ಯ ದಿಂದ ಧರ್ಮಸ್ಥಳ ಕ್ಕೆ‌ಬರುತ್ತಿದ್ದ ಬಸ್ ಎದುರು ಬದುರಾಗಿ ಡಿಕ್ಕಿಹೊಡೆದಿದ್ದು ಹೊಡೆತದ ತೀವ್ರತೆಗೆ ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದೆ. ಬಸ್ಸಿನ ಮುಂಭಾಗವೂ ನುಜ್ಜುಗುಜ್ಜಾಗಿದೆ.

ಕಾರಿನಲ್ಲಿದ್ದ ಹಲವರು ಗಾಯಗೊಂಡಿರುವುದಾಗಿ ತಿಳಿದು ಬಂದಿದೆ ಬಸ್ಸಿನಲ್ಲಿದ್ದ ಮೂವರು ಪ್ರಯಾಣಿಕರಿಗೂ ಗಾಯಗಳಾಗಿರುವುದಾಗಿ ತಿಳಿದು ಬಂದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಪೊಲೀಸರು ಸ್ಥಳಕ್ಕೆ‌ಆಗಮಿಸಿ ಪರಿಶೀಲನೆ‌ನಡೆಸಿದ್ದಾರೆ ಹೆಚ್ಚಿನ ಮಾಹಿತಿಗಳು ಇನ್ನಷ್ಟೆ ತಿಳಿದು ಬರಬೇಕಾಗಿದೆ.

Related posts

ಅಡಿಕೆ ವರ್ತಕರ ಜಿಲ್ಲಾ ಸಂಘಟನೆಯ ಸಭೆ: ಅಧ್ಯಕ್ಷರಾಗಿ ಪ್ರಶಾಂತ್ ಶೆಟ್ಟಿ ಮೂಡಯೂರು, ಕಾರ್ಯದರ್ಶಿಯಾಗಿ ತೇಜಸ್ವಿ ರಾಜ್ ಆಯ್ಕೆ

Suddi Udaya

ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಅನ್ನಛತ್ರ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇ. ಧ.ಗ್ರಾ. ಯೋಜನೆಯಿಂದ ಅನುದಾನದ ಮಂಜೂರಾತಿ ಪತ್ರ ವಿತರಣೆ

Suddi Udaya

ಪ್ರಸಿದ್ಧ ಗುಜರಾತ್ ಉದ್ಯಮಿ ಶಶಿಧ‌ರ್ ಶೆಟ್ಟಿ ನವಶಕ್ತಿ ಯವರಿಗೆ ಮಾತೃ ವಿಯೋಗ

Suddi Udaya

ಕನ್ಯಾಡಿ ಸ್ವಾಮೀಜಿಯವರಿಂದ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ತಾಲೂಕು ಕಾನೂನು ಸೇವೆಗಳ ಸಮಿತಿ, ಬೆಳ್ತಂಗಡಿ ವಕೀಲರ ಸಂಘ ಹಾಗೂ ಅರಣ್ಯ ಇಲಾಖೆ ಇವರ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಮರಿಯಾಂಬಿಕ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!