ಮಚ್ಚಿನ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ ಮತ್ತು ಸ.ಉ.ಪ್ರಾ. ಶಾಲೆ ಮಚ್ಚಿನ ಇವುಗಳ ಸಹಯೋಗದೊಂದಿಗೆ ಬೆಳ್ತಂಗಡಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟವನ್ನು ಮಚ್ಚಿನ ಸ.ಉ.ಹಿ.ಪ್ರಾ. ಶಾಲೆಯಲ್ಲಿ ನಡೆಸಲಾಯಿತು.
ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಮ್.ಸಿ ಅಧ್ಯಕ್ಷ ಹರೀಶ್ ಕುಮಾರ್ ವಹಿಸಿದರು. ಪದ್ಮನಾಭ ಸಾಲಿಯಾನ್ ಇವರು ದೀಪ ಪ್ರಜ್ವಲನೆಗೊಳಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ವೇದಿಕೆಯಲ್ಲಿ ರಾಜ್ಯ ಸರಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಜಯರಾಜ್ ಜೈನ್ , ಜಿಲ್ಲಾ ದೈಹಿಕ ಶಿಕ್ಷಕ ಸಂಘದ ಅಧ್ಯಕ್ಷ ರವಿರಾಜ್, ಬೆಳ್ತಂಗಡಿ ತಾಲೂಕು ಪ್ರೌಢ ಶಾಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಸುಭಾಶ್ಚಂದ್ರ ಪುಂಜಾಲಕಟ್ಟೆ ಸಮೂಹ ವ್ಯಕ್ತಿಗಳಾದ ಚೇತನಾ, ದೈಹಿಕ ಶಿಕ್ಷಕರ ಸಂಘದ ಕಾರ್ಯದರ್ಶಿ ನಿರಂಜನ್, ದೈಹಿಕ ಪರಿವೀಕ್ಷಣಾಧಿಕಾರಿ ಪ್ರಭಾಕರ, ನ್ಯೂ ಪ್ರೆಂಡ್ಸ್ ಕ್ಲಬ್ ಬಳ್ಳಮಂಜ ಇದರ ಅಧ್ಯಕ್ಷ ನಾರಾಯಣ ಪೂಜಾರಿ , ಮಚ್ಚಿನ ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷ ಪ್ರಮೋದ್, ಶಾಲಾ ಮುಖ್ಯ ಶಿಕ್ಷಕಿ ಚಂದ್ರಾವತಿಕೆ., ಎಸ್.ಡಿ.ಎಮ್.ಸಿ ಉಪಾಧ್ಯಕ್ಷ ಹಾಗೂ ಸದಸ್ಯರು ಉಪಸ್ಥಿತರಿದ್ದರು.
14 ರ ವಯೋಮಾನದ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಮೊರಾರ್ಜಿ ಮುಂಡಾಜೆ ಶಾಲೆ ಪ್ರಥಮ ಸ್ಥಾನವನ್ನು, ಸಂತ ತೆರೇಸಾ ಬೆಳ್ತಂಗಡಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡರು. ಬಾಲಕಿಯರ ವಿಭಾಗದಲ್ಲಿ ಸ.ಉ.ಪ್ರಾ. ಶಾಲೆ ಕೊಯ್ಯೂರು ಪ್ರಥಮ ಸ್ಥಾನ ಮತ್ತು ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಚ್ಚಿನ ದ್ವಿತೀಯ ಸ್ಥಾನವನ್ನು ಪಡೆದುಕೊಂಡರು.












