27.8 C
ಪುತ್ತೂರು, ಬೆಳ್ತಂಗಡಿ
September 12, 2026
ಗ್ರಾಮಾಂತರ ಸುದ್ದಿ

ಮಡಂತ್ಯಾರು ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ

ಮಡಂತ್ಯಾರು, ಸೆ.10 : ಮಡಂತ್ಯಾರು ಹಾಲು ಉತ್ಪಾದಕರ ಸಹಕಾರಿ ಸಂಘ ನಿಯಮಿತ ಇದರ 2025-26ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯು ಸೆಪ್ಟೆಂಬರ್ 10ರಂದು ಸಂಘದ ಆವರಣದಲ್ಲಿ ಸಂಘದ ಅಧ್ಯಕ್ಷರಾದ ಶ್ರೀ ರವಿರಾಜ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಕಾರ್ಯಕ್ರಮವು ಶ್ರೀಮತಿ ಅಮಿತಾ ಅಶೋಕ್ ರವರ ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು.
ಸಂಘದ ಉಪಾಧ್ಯಕ್ಷರಾದ ಶ್ರೀ ಅಶೋಕ್ ಕೆ.ಎಸ್. ಅವರು ಸ್ವಾಗತಿಸಿದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಜಿ. ಬಾಲಕೃಷ್ಣ ಅವರು 2025-26ನೇ ಸಾಲಿನ ವಾರ್ಷಿಕ ವರದಿಯನ್ನು ಸಭೆಯ ಮುಂದೆ ಮಂಡಿಸಿದರು.

2025-26ನೇ ಸಾಲಿನಲ್ಲಿ ಸಂಘವು ₹11,68,153.25 ನಿವ್ವಳ ಲಾಭ ಗಳಿಸಿದ್ದು, ಸಂಘದ ಸದಸ್ಯರಿಗೆ ಶೇ.65 ಬೋನಸ್ ಹಾಗೂ ಶೇ.25 ಡಿವಿಡೆಂಡ್ ನೀಡುವುದಾಗಿ ಸಭೆಯಲ್ಲಿ ಘೋಷಿಸಲಾಯಿತು. ಸಂಘದ ಆರ್ಥಿಕ ಪ್ರಗತಿ ಹಾಗೂ ಸದಸ್ಯರ ಸಹಕಾರದಿಂದ ಸಾಧಿಸಿರುವ ಬೆಳವಣಿಗೆಗೆ ಸಭೆಯಲ್ಲಿ ಮೆಚ್ಚುಗೆ ವ್ಯಕ್ತವಾಯಿತು.

ಸಭೆಯಲ್ಲಿ ಒಕ್ಕೂಟದ ವಿಸ್ತರಣಾಧಿಕಾರಿ ಶ್ರೀ ರಾಜೇಶ್ ಪಿ.ಕೆ. ಅವರು ಮಾತನಾಡಿ, ಹಾಲು ಉತ್ಪಾದಕರಿಗೆ ಒಕ್ಕೂಟದ ವತಿಯಿಂದ ದೊರೆಯುವ ವಿವಿಧ ಸೌಲಭ್ಯಗಳು, ಸಂಘದ ಲಾಭ-ನಷ್ಟದ ವಿವರಗಳು, ಹಾಲಿನ ಗುಣಮಟ್ಟ ಕಾಪಾಡುವ ಅಗತ್ಯ, NDDB ಸಾಫ್ಟ್‌ವೇರ್, ನಂದಿನಿ ಪಶು ಆಹಾರ ಸೇರಿದಂತೆ ಹೈನುಗಾರಿಕೆಯ ಅಭಿವೃದ್ಧಿಗೆ ಸಂಬಂಧಿಸಿದ ಹಲವು ಮಾಹಿತಿಗಳನ್ನು ನೀಡಿದರು. ಸಂಘದ ಪ್ರಗತಿಗೆ ಸದಸ್ಯರು ನಿರಂತರವಾಗಿ ಸಹಕಾರ ನೀಡುವಂತೆ ಅವರು ಕರೆ ನೀಡಿದರು.

SCDCC ಬ್ಯಾಂಕ್, ಮಡಂತ್ಯಾರು ಶಾಖೆಯ ವ್ಯವಸ್ಥಾಪಕರಾದ ಶ್ರೀಮತಿ ಸೌಮ್ಯ ಚಂದ್ರಹಾಸ್ ಅವರು ಸಭೆಯಲ್ಲಿ ಭಾಗವಹಿಸಿ, ಸರ್ಕಾರದ ವಿವಿಧ ಯೋಜನೆಗಳ ಮೂಲಕ ಹೈನುಗಾರರಿಗೆ ದೊರೆಯುವ ಸಾಲ ಸೌಲಭ್ಯಗಳು ಹಾಗೂ ವಿಮಾ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು. ಹೈನುಗಾರರು ಬ್ಯಾಂಕಿನ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ತಿಳಿಸಿದರು.

ಇದೇ ಸಂದರ್ಭದಲ್ಲಿ ಸಂಘಕ್ಕೆ ಸಕ್ರಿಯವಾಗಿ ಹಾಲು ಪೂರೈಸುವ ಸದಸ್ಯರ ಮಕ್ಕಳಲ್ಲಿ ಪ್ರಸಕ್ತ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿಭಾಗದಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ‘ಪ್ರತಿಭಾ ಪ್ರೋತ್ಸಾಹ’ ನೀಡಿ ಸಂಘದ ವತಿಯಿಂದ ಗೌರವಿಸಲಾಯಿತು. ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯನ್ನು ಅಭಿನಂದಿಸಿ, ಮುಂದಿನ ದಿನಗಳಲ್ಲಿಯೂ ಉತ್ತಮ ಸಾಧನೆ ಮಾಡುವಂತೆ ಶುಭ ಹಾರೈಸಲಾಯಿತು.

ಅಧ್ಯಕ್ಷೀಯ ಭಾಷಣದಲ್ಲಿ ಶ್ರೀ ರವಿರಾಜ್ ಶೆಟ್ಟಿ ಅವರು ಸಂಘದ ಬೆಳವಣಿಗೆಯ ಪಯಣ, ಸದಸ್ಯರಿಗೆ ಸಂಘದ ಮೂಲಕ ದೊರೆಯುವ ವಿವಿಧ ಸೌಲಭ್ಯಗಳು, ಒಕ್ಕೂಟದ ಮುಖೇನ ದೊರೆಯುತ್ತಿರುವ ಸೌಲಭ್ಯಗಳು ಹಾಗೂ ಒಕ್ಕೂಟದ ಸಹಕಾರ ಅಧಿಕಾರಿಗಳ ಪ್ರೋತ್ಸಾಹ ಮತ್ತು ಮಾರ್ಗದರ್ಶನದ ಕುರಿತು ವಿವರಿಸಿದರು. ಸಂಘದ ಅಭಿವೃದ್ಧಿಗೆ ಸಹಕರಿಸುತ್ತಿರುವ ನಿರ್ದೇಶಕರು, ಸಿಬ್ಬಂದಿ ವರ್ಗ ಹಾಗೂ ಎಲ್ಲಾ ಹಾಲು ಉತ್ಪಾದಕ ಸದಸ್ಯರ ಸಹಕಾರವನ್ನು ಸ್ಮರಿಸಿ, ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.

ಸಭೆಯ ಅಂತ್ಯದಲ್ಲಿ ಸಂಘದ ನಿರ್ದೇಶಕರಾದ ಶ್ರೀ ಪ್ರವೀಣ್ ಚಂದ್ರ ಶೆಟ್ಟಿ ಅವರು ವಂದನಾರ್ಪಣೆ ಸಲ್ಲಿಸಿದರು. ಪ್ರಸಕ್ತ ಸಾಲಿನಲ್ಲಿ ಸಂಘಕ್ಕೆ ಹಾಲು ಪೂರೈಸುತ್ತಿರುವ ಎಲ್ಲಾ ಸದಸ್ಯರಿಗೆ ಪ್ರೋತ್ಸಾಹಕ ಉಡುಗೊರೆಗಳನ್ನು ವಿತರಿಸಲಾಯಿತು.

ಸದಸ್ಯರ ಸಕ್ರಿಯ ಸಹಕಾರ, ಉತ್ತಮ ಹಾಲು ಉತ್ಪಾದನೆ ಹಾಗೂ ಸಂಘದ ಆಡಳಿತ ಮಂಡಳಿ ಮತ್ತು ಸಿಬ್ಬಂದಿಯ ಸಮನ್ವಯದ ಫಲವಾಗಿ ಸಂಘವು ಉತ್ತಮ ಆರ್ಥಿಕ ಸಾಧನೆ ಮಾಡಿರುವುದು ಸಭೆಯಲ್ಲಿ ಸಂತಸಕ್ಕೆ ಕಾರಣವಾಯಿತು.
ಸಭೆಯ ನಿರೂಪಣೆಯನ್ನು ಸಂಘದ ಹಾಲು ಪರೀಕ್ಷಕರು ಹಾಗೂ ಗುಮಾಸ್ತರಾದ ಶ್ರೀ ಅಶೋಕ್ ಗುಂಡಿಯಲ್ಕೆ ನಿರ್ವಹಿಸಿದರು.

Related posts

ಚಾರ್ಮಾಡಿ ಗ್ರಾಮದ ಕುಂಡೊಟ್ಟುಗೆ ಲೋಕೋಪಯೋಗಿ ಸಚಿವರ ಭೇಟಿ ಸ್ಥಳೀಯರ ಅಹವಾಲು ಸ್ವೀಕಾರ

Suddi Udaya

ಮುಂಡಾಜೆ ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ‌ ಸಂಭ್ರಮದ ಬಕ್ರೀದ್ ಆಚರಣೆ

Suddi Udaya

ಬಿರುಗಾಳಿ: ಹಲೇಜಿ -ಕಲಾಯಿಯಲ್ಲಿ ನೂರಕ್ಕೂ ಹೆಚ್ಚು ಅಡಿಕೆ ಗಿಡಗಳು ಹಾಗೂ ನಾಲ್ಕು ಕರೆಂಟ್ ಕಂಬಗಳು ಧಾರಾಶಾಹಿ

Suddi Udaya

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರೆ ಹೊರಟಿದ್ದ ಯಾತ್ರಾರ್ಥಿ ಹೃದಯಾಘಾತದಿಂದ ಸಾವು

Suddi Udaya

ಮಚ್ಚಿನ ಗ್ರಾಮದ ಪೇಟೆಯ ಶೌಚಾಲಯದ ಆದೋಗತಿ.. ಉಪಯೋಗಕ್ಕಿಲ್ಲದ ಕಟ್ಟಡ-ತುಕ್ಕು ಹಿಡಿದ ಬಾಗಿಲು…

Suddi Udaya

ಪುಂಜಾಲಕಟ್ಟೆ ಸ.ಪ್ರ.ದ. ಕಾಲೇಜಿನಲ್ಲಿ ಬೆಂಕಿ ರಹಿತ ಅಡುಗೆ ಸ್ಪರ್ಧೆ

Suddi Udaya
error: Content is protected !!