30.8 C
ಪುತ್ತೂರು, ಬೆಳ್ತಂಗಡಿ
September 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆ ಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಿಗೆ ಬೀಳ್ಕೊಡುಗೆ

ಉಜಿರೆ: ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆ, ಉಜಿರೆಯಲ್ಲಿ ಕಳೆದ 10 ವರ್ಷಗಳಿಂದ ದೈಹಿಕ ಶಿಕ್ಷಣ ಶಿಕ್ಷಕರಾಗಿ ಸೇವೆ ಸಲ್ಲಿಸಿ, ಇದೀಗ ಶ್ರೀ ಧ.ಮಂ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಗೆ ವರ್ಗಾವಣೆಗೊಂಡಿರುವ ಶ್ರೀ ಪರಮೇಶ್ವರ್ ಅವರಿಗೆ ಬೀಳ್ಕೊಡುಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಅವರನ್ನು ಶಾಲೆಯ ವತಿಯಿಂದ ಫಲ-ತಾಂಬೂಲ ನೀಡಿ, ಪೇಟ ತೊಡಿಸಿ ಹಾಗೂ ಸ್ಮರಣಿಕೆ ನೀಡಿ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.

ಶಿಕ್ಷಕರಾದ ಶ್ರೀ ಮೋನಪ್ಪ ಗೌಡ ಅವರು ಸನ್ಮಾನಿತರ ಕಿರು ಪರಿಚಯವನ್ನು ಮಾಡಿಕೊಟ್ಟರು.

ನಂತರ ಸನ್ಮಾನ ಸ್ವೀಕರಿಸಿ ಮಾತನಾಡಿದ ಪರಮೇಶ್ವರ್ ಅವರು, “ನಾನು ಇದೇ ಶಾಲೆಯ ಹಿರಿಯ ವಿದ್ಯಾರ್ಥಿಯಾಗಿದ್ದು, ಇದೇ ಶಾಲೆಯಲ್ಲಿ 10 ವರ್ಷಗಳ ಕಾಲ ಸೇವೆ ಸಲ್ಲಿಸುವ ಅವಕಾಶ ದೊರೆತಿರುವುದು ನನ್ನ ಭಾಗ್ಯ. ಶಾಲೆಯೊಂದಿಗೆ ಹೊಂದಿರುವ ಆತ್ಮೀಯ ಸಂಬಂಧವನ್ನು ಸದಾ ನೆನಪಿನಲ್ಲಿಟ್ಟುಕೊಳ್ಳುತ್ತೇನೆ” ಎಂದು ತಮ್ಮ ಅನಿಸಿಕೆಯನ್ನು ಹಂಚಿಕೊಂಡರು.

ಕಾರ್ಯಕ್ರಮದಲ್ಲಿ ಶಾಲೆಯ ಎಲ್ಲಾ ಶಿಕ್ಷಕರು, 2006ನೇ ಸಾಲಿನ ಬ್ಯಾಚ್‌ನ ಹಿರಿಯ ವಿದ್ಯಾರ್ಥಿಗಳು, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಪಿನಾಕಲ್ ಅಂತರ್ ಕಾಲೇಜು ಸ್ಪರ್ಧೆಗಳಲ್ಲಿ ಎಸ್ ಡಿ ಎಂ ಪ.ಪೂ. ಕಾಲೇಜಿಗೆ ಸಮಗ್ರ ದ್ವಿತೀಯ ಬಹುಮಾನ

Suddi Udaya

ನಾರಾವಿ ಅಂತರ್ ಕಾಲೇಜು ವಾಣಿಜ್ಯ ಮತ್ತು ಸಾಂಸ್ಕೃತಿಕ ಸ್ಪರ್ಧೆ :ಪ್ರಸನ್ನ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಯಂತ್ರ 2.0″ ಸ್ಪರ್ಧೆ: ಉಜಿರೆ ಎಸ್.ಡಿ.ಎಂ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ವತಿಯಿಂದ ಗೀತೆ ಜತೆ ಸಾಹಿತ್ಯ ಸಾಂಗತ್ಯ

Suddi Udaya

ಬ್ರಹ್ಮವಾರ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪ್ರಕರಣ: ವಿಚಾರಣೆಗಾಗಿ ಮಹೇಶ್ ಶೆಟ್ಟಿ ತಿಮರೋಡಿ ಬೆಳ್ತಂಗಡಿ ಪೊಲೀಸ್‌ ಠಾಣೆಗೆ ಹಾಜರು

Suddi Udaya

ಬೆಳ್ತಂಗಡಿ ಯುವ ಮೋರ್ಚಾ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಗುರುವಾಯನಕೆರೆ ಹುತಾತ್ಮ ಯೋಧ ಏಕನಾಥ್ ಶೆಟ್ಟಿ ರವರ ಪ್ರತಿಮೆಗೆ ಮಾಲಾರ್ಪಣೆ, ನುಡಿನಮನ

Suddi Udaya
error: Content is protected !!