30.8 C
ಪುತ್ತೂರು, ಬೆಳ್ತಂಗಡಿ
September 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರಿಮಣೇಲು ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ-ಸಾಧಕರಿಗೆ ಸನ್ಮಾನ

ವೇಣೂರು: ಕರಿಮಣೇಲು ಹಾಲು ಉತ್ಪಾದಕರ ಸಹಕಾರಿ ಸಂಘದ 2025-26ನೇ ಸಾಲಿನ ಸರ್ವಸದಸ್ಯರ ವಾರ್ಷಿಕ ಮಹಾಸಭೆಯು ವೇಣೂರು ಲಯನ್ಸ್ ಸೇವಾ ಸಭಾಭವನದಲ್ಲಿ ಸೆ.5 ರಂದು ನಡೆಯಿತು.


ಸಂಘದ ಅಧ್ಯಕ್ಷ ರೊನಾಲ್ಡ್ ಡಿಸೋಜ ಅವರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಘವು ರೂ. 74,43 ಲಕ್ಷ ವ್ಯವಹಾರ ನಡೆಸಿ, 3.08 ಲಕ್ಷ ರೂ. ಲಾಭ ಗಳಿಸಿದೆ ಎಂದರು. ಸಂಘವು ನಿರಂತರವಾಗಿ ಸಮಾಜಿಕ ಸೇವಾ ಚಟುವಟಿಕೆಗಳಿಗೆ ಸಹಕಾರ ನೀಡುತ್ತಾ ಬಂದಿದೆ, ಸಂಘದ ಶ್ರೇಯೋಭಿವೃದ್ಧಿಗೆ ಶ್ರಮಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುವುದಾಗಿ ಅವರು ತಿಳಿಸಿದರು.
ಕೆಎಂಎಫ್ ವಿಸ್ತರಣಾಧಿಕಾರಿ ರಾಜೇಶ್ ಪಿ. ಕಾಮತ್ ಅವರು ಸಭೆಯಲ್ಲಿ ಭಾಗವಹಿಸಿ, ಹೈನುಗಾರಿಕೆಯ ಬಗ್ಗೆ ಮಾಹಿತಿ ನೀಡಿ, ಸಂಘದ ಸದಸ್ಯರಿಗೆ ಕೆಎಂಎಫ್‌ನಿಂದ ದೊರೆಯುವ ಸವಲತ್ತುಗಳ ಮಾಹಿತಿ ತಿಳಿಸಿದರು.

ಸಂಘದ ಉಪಾಧ್ಯಕ್ಷ ಶೀನ ದೇವಾಡಿಗ, ನಿರ್ದೇಶಕರುಗಳಾದ ಪಿ. ದೇಜಪ್ಪ ಶೆಟ್ಟಿ, ಲೂಯಿಸ್ ಸೆರಾವೊ, ಕೃಷ್ಣ ಶೇರಿಗಾರ, ಲಕ್ಷ್ಮಣ ಶೆಟ್ಟಿ, ಆನಂದ ಸುವರ್ಣ, ಅಬ್ದುಲ್ ಗಫೂರ್, ಶ್ರೀಮತಿ ರೋಹಿಣಿ ಪ್ರಕಾಶ್, ಶ್ರೀಮತಿ ರೀತಾ ದೇವಾಡಿಗ ಹಾಗೂ ಶ್ರೀಮತಿ ಕಮಲ ಉಪಸ್ಥಿತರಿದ್ದರು.
ಸಂಘದ ಕಾರ್ಯನಿರ್ವಹಣಾಧಿಕಾರಿ ಸತೀಶ್ ಕೆ. ವರದಿ ಮಂಡಿಸಿದರು. ಸಂಘದ ನಿರ್ದೇಶಕ ಲಕ್ಷ್ಮಣ ಪೂಜಾರಿ ನಿರೂಪಿಸಿದರು.

ಸನ್ಮಾನ: ಹಿರಿಯ ಸದಸ್ಯೆ ಲಕ್ಷ್ಮೀ, ರೈಮನ್ ಲೋಬೋ ಹಾಗೂ ಗುಣಪಾಲ ಪೂವಣಿ ಅವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು. ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದಿರುವ ಕು. ಶಾನ್ವಿ ಪರಾರಿ ಮತ್ತು ಕು. ವಿಯೊನಾ ಫೆರ್ನಾಂಡಿಸ್ ಅವರನ್ನು ಗೌರವಿಸಲಾಯಿತು.

Related posts

ನಾಳ: ಶ್ರೀ ದುರ್ಗಾ ಟ್ರೋಫಿ – 2026 ಕ್ರಿಕೆಟ್ ಪಂದ್ಯಾಟ ಉದ್ಘಾಟನೆ

Suddi Udaya

ಧರ್ಮಸ್ಥಳ: ಬೋಳಿಯರ್ ನಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ ಗೆ ಗುದ್ದಿದ್ದ ಕಾಡಾನೆ: ಸ್ಕೂಟರ್ ಗೆ ಹಾನಿ

Suddi Udaya

ಪಣಕಜೆ 23ನೇ ವರ್ಷದ ಸಾರ್ವಜನಿಕ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಡಿ.10: ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವೇಣೂರು ಶ್ರೀಭಗವಾನ್ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರವರಿಗೆ ಆಹ್ವಾನ

Suddi Udaya

ಲಯನ್ಸ್ ಕ್ಲಬ್ ವತಿಯಿಂದ ಸುಲ್ಕೇರಿ ಕೋಲ್ಯಾಯದಲ್ಲಿ ನದಿಯ ಅಣೆಕಟ್ಟಿಗೆ ಸಿಲುಕಿಕೊಂಡಿದ್ದ ಮರದ ದಿಮ್ಮಿ, ಕಸಕಡ್ಡಿಗಳ ತೆರವು ಕಾರ್ಯ

Suddi Udaya
error: Content is protected !!