ಕೊಕ್ಕಡ: ಸರ್ಕಾರಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾದ ಘಟನೆ ಸೆ.12ರಂದು ನಡೆದಿದೆ.

ಧರ್ಮಸ್ಥಳ ಕಡೆಯಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಟಾಟಾ ಸಫಾರಿ ಕಾರು ಹಾಗೂ ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಕೊಕ್ಕಡ ಸಮೀಪ ನಡೆದಿದೆ.
ಅಪಘಾತದ ತೀವ್ರತೆಗೆ ಬಸ್ ಹಾಗೂ ಕಾರು ಸಂಪೂರ್ಣ ನಜ್ಜುಗುಜ್ಜಾಗಿರುವುದಾಗಿ ತಿಳಿದುಬಂದಿದೆ. ಅಪಘಾತದಲ್ಲಿ ಕಾರು ಚಾಲಕನ ಕೈ ಮುರಿತ ಉಂಟಾಗಿದ್ದು ಕೆಲವರು ಗಾಯಗೊಂಡಿರುವುದಾಗಿ ತಿಳಿದು ಬಂದಿದೆ.












