30.8 C
ಪುತ್ತೂರು, ಬೆಳ್ತಂಗಡಿ
September 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ. ಪ್ರಾಥಮಿಕ ಶಾಲೆಯಲ್ಲಿ ಉಚಿತ ಗುರುತಿನ ಚೀಟಿ ವಿತರಣೆ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಧರ್ಮಸ್ಥಳದಲ್ಲಿ ಶಾಲಾ ಮಕ್ಕಳಿಗೆ ಉಚಿತ ಗುರುತಿನ ಚೀಟಿ ವಿತರಣಾ ಸಮಾರಂಭವು ಸೆ.11 ರಂದು ಕ್ಷೇತ್ರದ ಅಮೃತವರ್ಷಿಣಿ ಸಭಾಂಗಣದಲ್ಲಿ ನಡೆಯಿತು.

ಕೊಡುಗೈ ದಾನಿಗಳೂ, ಸಮಾಜ ಸೇವಕರೂ, ಮಂಜುನಾಥ ಸ್ವಾಮಿ ದೇವಸ್ಥಾನದ ಪಾರುಪತ್ಯಗಾರರೂ ಆದ ಲಕ್ಷ್ಮೀನಾರಾಯಣ ರಾವ್ ಇವರು ಶಾಲೆಯ ಎಲ್ಲಾ ಮಕ್ಕಳಿಗೆ ಉಚಿತ ಗುರುತಿನ ಚೀಟಿಯನ್ನು ಪ್ರತಿ ವರ್ಷ ಕೊಡುತ್ತಾ ಬರುತ್ತಿದ್ದು ಈ ವರ್ಷವೂ ಕೂಡ ವಿತರಣೆ ಮಾಡಿ ‘ಮಕ್ಕಳು ಬಾಲ್ಯದಿಂದಲೇ ಜವಾಬ್ದಾರಿಯುತವಾಗಿ ತಮ್ಮ ತಮ್ಮ ಕೆಲಸಗಳನ್ನು ನಿರ್ವಹಿಸುತ್ತಾ ಬಂದರೆ ಮುಂದೆ ಒಳ್ಳೆಯ ಸ್ಥಾನಕ್ಕೆ ಹೋಗಲು ಸಾಧ್ಯವಾಗುತ್ತದೆ’ ಎಂದು ಕಿವಿಮಾತು ನೀಡಿದರು.

ಎಸ್‌.ಡಿಎಂ ಡಿ.ಎಡ್ ಕಾಲೇಜಿನ ಪ್ರಾಧ್ಯಾಪಕರಾದ ಮಂಜು ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯರು ಸಭೆಯ ಅಧ್ಯಕ್ಷತೆಯನ್ನು ವಹಿಸಿ ಸಮಾಜ ಸೇವೆಯನ್ನು ಮಾಡುತ್ತಾ ಬಂದಿರುವ ಶ್ರೀಯುತರು ನಮ್ಮ ಶಾಲೆಯ ಹಳೆ ವಿದ್ಯಾರ್ಥಿಯಾಗಿದ್ದು, ಶಾಲೆಯ ಮೇಲೆ ಅಪಾರ ಅಭಿಮಾನವನ್ನು ಹೊಂದಿರುತ್ತಾರೆ. ಇವರ ಈ ಸೇವೆಗೆ ನಾವೆಲ್ಲರೂ ಚಿರಋಣಿಗಳಾಗಿದ್ದೇವೆ ಎಂದರು.

ಶಾಲಾ ಶಿಕ್ಷಕ ಜೋಸೆಫ್ ಸ್ವಾಗತಿಸಿದ ಈ ಕಾರ್ಯಕ್ರಮಕ್ಕೆ ಶಿಕ್ಷಕಿ ರಾಜೇಶ್ವರಿ ವಂದಿಸಿದರು. ಶಿಕ್ಷಕಿ ಸೀಮಾ ಕಾರ್ಯಕ್ರಮವನ್ನು ನಿರ್ವಹಿಸಿದರು.

Related posts

ಕ್ಯಾಂಪ್ಕೊ ನಿಯಮಿತ ಮಂಗಳೂರು “ಸಾಂತ್ವನ” ಯೋಜನೆಯಡಿ ಕನ್ನಾಜೆಯ ಬೆನೆಡಿಕ್ಟ್ ವೇಗಸ್ ರಿಗೆ ವೈದ್ಯಕೀಯ ನೆರವು

Suddi Udaya

ಉಜಿರೆ ವಿದ್ಯುತ್ ಉಪಕೇಂದ್ರ ಕಾಮಗಾರಿ ವಿಳಂಬ: ಅರಣ್ಯ ಇಲಾಖೆ ಅನುಮತಿ ದೊರೆತ ಕೂಡಲೇ ಕಾಮಗಾರಿ ಮುಂದುವರಿಯುವುದು-ಎಂಎಲ್‌ಸಿ ಪ್ರತಾಪಸಿಂಹ ನಾಯಕ್

Suddi Udaya

ಜೆಸಿಐ ವಲಯ-15ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ಸಮ್ಮೇಳನದಲ್ಲಿ ಜೆಸಿ ಜಯೇಶ್ ಬರೆಟ್ಟೊ ರವರಿಗೆ ಪ್ರತಿಷ್ಠಿತ “ಸಾಧನಾಶ್ರೀ ಪುರಸ್ಕಾರ”

Suddi Udaya

ಬೆಳ್ತಂಗಡಿ: ರಾಜ್ಯ ಸರ್ಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದಿಂದ ಆರೋಗ್ಯ ಇಲಾಖೆ ನೌಕರರಿಗೆ ಉಚಿತ ಸಮವಸ್ತ್ರ ವಿತರಣೆ

Suddi Udaya

ಕನ್ಯಾಡಿ || : ಹಿಂದೂ ಧಾರ್ಮಿಕ ಸೇವಾ ಸಮಿತಿ ವತಿಯಿಂದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ರಚನೆ

Suddi Udaya

ಕನ್ಯಾಡಿ ದೇವರಗುಡ್ಡೆ ಗುರುದೇವ ಮಠಕ್ಕೆ ಕೇಂದ್ರ ಸಚಿವ ವಿ. ಸೋಮಣ್ಣ ಭೇಟಿ:

Suddi Udaya
error: Content is protected !!