30.8 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೆ. 19 : ಉಜಿರೆಯಲ್ಲಿ ಎಂಡೋಸಲ್ಫಾನ್ ಪೀಡಿತ ಮಕ್ಕಳಿಗಾಗಿ ನಿರ್ಮಿಸಿದ ‘ಸಾನಿಧ್ಯ ರೋಟರಿ ಸಭಾಭವನ’ ಲೋಕಾರ್ಪಣೆ: 15 ಲಕ್ಷ ಅನುದಾನದಲ್ಲಿ ನಿರ್ಮಾಣಗೊಂಡ ಸಭಾಂಗಣ

ಬೆಳ್ತಂಗಡಿ: ಎಂಡೋಸಲ್ಫಾನ್ ಪೀಡಿತ ಮಕ್ಕಳಿಗಾಗಿ ಉಜಿರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ‘ಸಾನಿಧ್ಯ’ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ಹಾಗೂ ರೋಟರಿ ಕ್ಲಬ್ ಬೆಂಗಳೂರು ಇಂದಿರಾನಗರದ ಸಹಯೋಗದಲ್ಲಿ ರೂ.15 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ‘ಸಾನಿಧ್ಯ ರೋಟರಿ ಸಭಾಭವನ’ ಸೆಪ್ಟೆಂಬರ್ 19ರಂದು ಮಧ್ಯಾಹ್ನ 2.30ಕ್ಕೆ ಲೋಕಾರ್ಪಣೆಗೊಳ್ಳಲಿದೆ ಎಂದು ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಶ್ರೀಧರ ಕೆ.ವಿ ಹೇಳಿದರು.

ಉಜಿರೆ ಸಾನಿದ್ಯ ಕೆಂದ್ರದಲ್ಲಿ ಸೆ.15 ರಂದು ಕರೆದ ಪತ್ರಿಕಾಗೋಷ್ಠಿಯಲ್ಲಿ ಅವರು ವಿವರ ನೀಡಿದರು.

ಕರ್ನಾಟಕ ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ಡಾ. ಯು.ಟಿ. ಖಾದರ್ ಫರೀದ್ ಅವರು ಸಭಾಭವನವನ್ನು ಉದ್ಘಾಟಿಸಲಿದ್ದು, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಮಂಗಳೂರಿನ ಶ್ರೀ ಗಣೇಶಾ ಸೇವಾ ಟ್ರಸ್ಟ್ (ರಿ.) ಸಂಸ್ಥೆಯು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮನವಿಯ ಮೇರೆಗೆ 2018ರಲ್ಲಿ ಉಜಿರೆಯಲ್ಲಿ ‘ಸಾನಿಧ್ಯ’ ಕೌಶಲ್ಯ ತರಬೇತಿ ಕೇಂದ್ರವನ್ನು ಆರಂಭಿಸಿದ್ದು, ಪ್ರಸ್ತುತ 40 ವಿಶೇಷ ಮಕ್ಕಳು ಇಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಎಂಡೋಸಲ್ಫಾನ್ ಪೀಡಿತ ಮಕ್ಕಳಲ್ಲಿ ಕಂಡುಬರುವ ಬುದ್ದಿಮಾಂದ್ಯತೆ, ಮೆದುಳಿನ ಪಾರ್ಶ್ವವಾಯು, ಬಹುವಿಧ ನ್ಯೂನ್ಯತೆ, ಆಟಿಸಂ ಹಾಗೂ ನಿರ್ದಿಷ್ಟ ಕಲಿಕೆಯ ಸಮಸ್ಯೆಗಳಿಗೆ ಅನುಗುಣವಾಗಿ ವಿವಿಧ ಥೆರಪಿ ಮತ್ತು ಕೌಶಲ್ಯ ತರಬೇತಿಗಳನ್ನು ನಿರಂತರವಾಗಿ ನೀಡಲಾಗುತ್ತಿದೆ.

ಮಕ್ಕಳಿಗೆ ಊಟ, ಯೋಗ, ಥೆರಪಿ ಹಾಗೂ ವಿವಿಧ ಚಟುವಟಿಕೆಗಳನ್ನು ನಡೆಸಲು ಸೂಕ್ತವಾದ ಸಭಾಭವನದ ಅಗತ್ಯವನ್ನು ಮನಗಂಡು ಬೆಳ್ತಂಗಡಿ ರೋಟರಿ ಕ್ಲಬ್ ಈ ಯೋಜನೆಯನ್ನು ಕೈಗೆತ್ತಿಕೊಂಡಿದೆ. ಬೆಂಗಳೂರಿನ ಇಂದಿರಾನಗರ ರೋಟರಿ ಕ್ಲಬ್ ಪ್ರಾಯೋಜಿತ ‘ಸ್ವರಸ್ವತಿ’ ಸಂಸ್ಥೆ ಹಾಗೂ ಬೆಳ್ತಂಗಡಿ ರೋಟರಿಯ ವತಿಯಿಂದ ರೂ.7 ಲಕ್ಷ ದೇಣಿಗೆಯ ಚೆಕ್ ಅನ್ನು ಕಾರ್ಯಕ್ರಮದಲ್ಲಿ ಹಸ್ತಾಂತರಿಸಲಾಗುವುದು.

ವಿದ್ಯಾದಾನ – 171 ವಿದ್ಯಾರ್ಥಿಗಳಿಗೆ ರೂ. 7.50 ಲಕ್ಷ ವಿದ್ಯಾರ್ಥಿವೇತನ:
ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯನ್ನು ಉತ್ತೇಜಿಸುವ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ರೋಟರಿ ಕ್ಲಬ್ ಬೆಳ್ತಂಗಡಿ, ರೋಟರಿ ಬೆಂಗಳೂರು ಇಂದಿರಾನಗರ ಹಾಗೂ ಶ್ರೀ ಕೃಷ್ಣ ಪಡ್ಡೆಟ್ನಾಯ ಪ್ರತಿಷ್ಠಾನ, ಉಜಿರೆ ಇವರ ಸಹಯೋಗದಲ್ಲಿ “ವಿದ್ಯಾದಾನ – ವಿದ್ಯಾರ್ಥಿವೇತನ ವಿತರಣೆ ಕಾರ್ಯಕ್ರಮ”ವನ್ನು ಆಯೋಜಿಸಲಾಗಿದೆ.
ಬೆಳ್ತಂಗಡಿ ತಾಲೂಕಿನ ವಿವಿಧ ಸರ್ಕಾರಿ ಪದವಿಪೂರ್ವ ಕಾಲೇಜುಗಳ 171 ಅರ್ಹ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಈ ವಿದ್ಯಾರ್ಥಿವೇತನಕ್ಕೆ ಆಯ್ಕೆ ಮಾಡಲಾಗಿದೆ. ಒಟ್ಟು ರೂ. 7.50 ಲಕ್ಷ ಮೊತ್ತದ ವಿದ್ಯಾರ್ಥಿವೇತನವನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಗುವುದು.

ಕಾರ್ಯಕ್ರಮದಲ್ಲಿ ರೋಟರಿ 3181ರ ಸಹಾಯಕ ರಾಜ್ಯಪಾಲ ರೊ. ಡಾ. ಶಶಿಧರ್ ಡೊಂಗ್ರೆ, ರೋಟರಿ ಕ್ಲಬ್ ಇಂದಿರಾನಗರ ಬೆಂಗಳೂರು ಅಧ್ಯಕ್ಷ ಗೋಪಿನಾಥ್ ಎನ್., ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಹೆಚ್.ಆರ್. ತಿಮ್ಮಯ್ಯ, ದ.ಕ. ಜಿಲ್ಲಾ ಎಂಡೋಸಲ್ಫಾನ್ ನೋಡೆಲ್ ಅಧಿಕಾರಿ ಡಾ. ನವೀನ್‌ಚಂದ್ರ ಕುಲಾಲ್, ರೋಟರಿ ಜಿಲ್ಲೆ 3192 ರ ಲೆಫ್ಟಿನೆಂಟ್ ಗವರ್ನರ್ ರೊ. ಜಗದೀಶ್ ಮುಗುಳಿ, ರೋಟರಿ ಜಿಲ್ಲಾ ಕಾರ್ಯದರ್ಶಿ ರೊ. ಸುಪ್ರಿಯಾ ಕಂದಾರಿ, ರೋಟರಿ ಕ್ಲಬ್ ಇಂದಿರಾನಗರದ ನಿಯೋಜಿತ ಅಧ್ಯಕ್ಷ ರೊ. ನರಸಿಂಹನ್ ಕಣ್ಣನ್, ರೋಟರಿ ಬೆಂಗಳೂರು ದಿಶಾದ ಸದಸ್ಯೆ ರೂ. ದಿವ್ಯ ರಾಘವನ್ ಹಾಗೂ ಬೆಳ್ತಂಗಡಿ ತಾಲೂಕು ಆರೋಗ್ಯಾಧಿಕಾರಿ ಡಾ. ಸಂಜಾತ್ ಗೌರವಾನ್ವಿತ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.

ರೋಟರಿ ಕ್ಲಬ್‌ ಬೆಳ್ತಂಗಡಿ ಅಧ್ಯಕ್ಷ ರೊ. ಶ್ರೀಧರ್ ಕೆ.ವಿ., ಕಾರ್ಯದರ್ಶಿ ರೊ. ಡಾ. ರಾಘವೇಂದ್ರ ಪಿದಮಲೆ, ‘ಸಾನಿಧ್ಯ’ ಸಮೂಹ ಸಂಸ್ಥೆಗಳ ಆಡಳಿತಾಧಿಕಾರಿ ಡಾ. ವಸಂತ್ ಕುಮಾರ್ ಶೆಟ್ಟಿ, ಶ್ರೀ ಗಣೇಶ ಸೇವಾ ಟ್ರಸ್ಟ್‌ ಅಧ್ಯಕ್ಷ ಮಹಾಬಲ ಮಾರ್ಲ ಹಾಗೂ ‘ಸಾನಿಧ್ಯ’ ಕೌಶಲ್ಯ ತರಬೇತಿ ಕೇಂದ್ರದ ಗೌರವ ಸಲಹೆಗಾರ ರೋಷನ್ ಸಿಕ್ಕೇರಾ ಉಪಸ್ಥಿತರಿರುವರು.

ಪತ್ರಿಕಾಗೋಷ್ಠಿಯಲ್ಲಿ ರೋಟರಿ ಕ್ಲಬ್ ಕೋಶಾಧಿಕಾರಿ ಅಬೂಬಕ್ಕರ್, ಕ್ಲಬ್ ಸೇವೆ ಚೇರ್ಮೆನ್ ವಿದ್ಯಾ ಕುಮಾರ್ ಕಾಂಚೂಡು, ಸಾನಿದ್ಯ ಸಲಹಾ ಸಮಿತಿ ಸದಸ್ಯ ಪ್ರೇಮ್‌ರಾಜ್ ರೋಶನ್ ಸಿಕ್ವೇರ ಉಪಸ್ಥಿತರಿದ್ದರು.

Related posts

ಶ್ರೀರಾಮ ಪ್ರತಿಷ್ಠೆಯ ಸಂಭ್ರಮದ ಸಮಯ ಕಾಂಗ್ರೆಸ್ ತುಷ್ಟೀಕರಣದ ನೀತಿಗೆ ಅಂಟಿಕೊಂಡಿರುವುದು ವಿಪರ್ಯಾಸ: ಪ್ರತಾಪ್‌ಸಿಂಹ ನಾಯಕ್

Suddi Udaya

ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಖರೀದಿಯ ಮೇಲೆ ಶೇ.20 ಸ್ಪೆಷಲ್ ಡಿಸ್ಕೌಂಟ್ ಆಫರ್

Suddi Udaya

ಇಳಂತಿಲ ಗ್ರಾ.ಪಂ. ನಲ್ಲಿ ಮತದಾನದ ಮಾಹಿತಿ ಶಿಬಿರ

Suddi Udaya

ಭಾರೀ ಮಳೆ ಕಕ್ಕಿಂಜೆಯಲ್ಲಿ ಕುಸಿದು ಬಿದ್ದ ಮನೆ

Suddi Udaya

ರಕ್ಷಿತ್ ಶಿವರಾಂ ಮನವಿಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳ ಸ್ಪಂದನೆ : ಅರಸಿನಮಕ್ಕಿ ಶಾಲೆಗೆ ಶಿಕ್ಷಕರ ನೇಮಕ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ 25 ಸಾವಿರ ಸಹಾಯಧನ ವಿತರಣೆ

Suddi Udaya
error: Content is protected !!