32.1 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಯ ಮಹಾಸಭೆ

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ, ಬೆಳ್ತಂಗಡಿಯ ಮಹಾಸಭೆಯು ಸೆ.12 ರಂದು ನಡೆಯಿತು.

ಶಿಕ್ಷಣಾಧಿಕಾರಿಗಳ ಪರವಾಗಿ ಜಗದೀಶ್, BIERT, BRC ಬೆಳ್ತಂಗಡಿ ಅವರು ಆಗಮಿಸಿ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ಪ್ರತಿಯೊಂದು ಶಾಲೆಯಲ್ಲಿಯೂ ಸ್ಕೌಟ್ಸ್ ಮತ್ತು ಗೈಡ್ಸ್ ದಳಗಳನ್ನು ಪ್ರಾರಂಭಿಸಿ, ಮಕ್ಕಳಲ್ಲಿ ಶಿಸ್ತು, ಸೇವಾ ಮನೋಭಾವ, ನಾಯಕತ್ವ ಹಾಗೂ ದೇಶಪ್ರೇಮದ ಗುಣಗಳನ್ನು ಬೆಳೆಸುವಂತೆ ಅವರು ಸಲಹೆ ನೀಡಿದರು.

ಜಿಲ್ಲಾ ಸಂಸ್ಥೆಯ ಪರವಾಗಿ ರಾಜ್ಯ ಸಹಾಯಕ ಸಂಘಟನಾ ಆಯುಕ್ತ ಭರತ್ ರಾಜ್ ಕೆ. ಅವರು ಭಾಗವಹಿಸಿ, ಸ್ಕೌಟ್ಸ್ ಮತ್ತು ಗೈಡ್ಸ್ ಘಟಕಗಳ ಪುನಶ್ಚೇತನ ಶಿಬಿರದ ರೂಪರೇಷೆಗಳು, ಕಾರ್ಯಕ್ರಮಗಳ ಅನುಷ್ಠಾನ ಹಾಗೂ ಮುಂದಿನ ಚಟುವಟಿಕೆಗಳ ಕುರಿತು ಸಮಗ್ರ ಮಾರ್ಗದರ್ಶನ ನೀಡಿದರು.

ಸಭೆಯಲ್ಲಿ ಸರ್ವಿಸ್ ಅವಾರ್ಡ್ ಪಡೆದ ಕಾರ್ಯದರ್ಶಿ ಪ್ರಮೀಳಾ ಹಾಗೂ ಗೀತಾ ಅವರಿಗೆ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು. ವಿವಿಧ ಶಾಲೆಗಳ ಶಿಕ್ಷಕರಿಗೆ ಚಾರ್ಟರ್ ಹಾಗೂ ವಾರೆಂಟ್‌ಗಳನ್ನು ವಿತರಿಸಲಾಯಿತು.

ಇದೇ ಸಂದರ್ಭದಲ್ಲಿ ಸಮವಸ್ತ್ರದಲ್ಲಿನ ಬದಲಾವಣೆಗಳು, ಬ್ಯಾಡ್ಜ್‌ಗಳ ಬದಲಾವಣೆ, ವಿವಿಧ ಪರೀಕ್ಷೆಗಳ ಮಾಹಿತಿ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಅಗತ್ಯ ಮಾರ್ಗದರ್ಶನವನ್ನು ಭರತ್ ರಾಜ್ ಕೆ. ಅವರು ನೀಡಿದರು.

ಕಾರ್ಯಕ್ರಮದ ನಿರೂಪಣೆಯನ್ನು ರೋವರ್ ಸ್ಕೌಟ್ ಲೀಡರ್ ಲಕ್ಷ್ಮೀಶ ಭಟ್ ನೆರವೇರಿಸಿದರು. ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಪ್ರಮೀಳಾ ಸ್ವಾಗತಿಸಿದರು .

ಸಭೆಯು ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಶಾಲೆಗಳಲ್ಲಿ ವಿಸ್ತರಿಸುವ ಹಾಗೂ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಹೆಚ್ಚಿನ ಅವಕಾಶಗಳನ್ನು ಕಲ್ಪಿಸುವ ಸಂಕಲ್ಪದೊಂದಿಗೆ ಯಶಸ್ವಿಯಾಗಿ ನೆರವೇರಿತು.

Related posts

ಮಚ್ಚಿನ ಚಿರತೆ ದಾಳಿಗೆ ನಾಯಿ ಬಲಿ

Suddi Udaya

ಕಾಯರ್ತಡ್ಕ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಸಾವಿರಾರು ರೈತರ ಕೃಷಿ ಜಮೀನು ಆರ್.ಟಿ.ಸಿ ಯಲ್ಲಿ ವಕ್ಫ್ ಅಸ್ತಿ ಎಂದು ದಾಖಲು: ಕಾಂಗ್ರೆಸ್ ಸರಕಾರದ ಮುಸ್ಲಿಂ ತುಷ್ಟೀಕರಣ ನೀತಿಯಿಂದ ರೈತರು ಆತ್ಮಹತ್ಯೆ ಮಾಡಬೇಕಾದ ಸ್ಥಿತಿ ನಿಮಾ೯ಣ : ಹರೀಶ್ ಪೂಂಜ

Suddi Udaya

ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲೆ ಪ್ರಥಮ ಸ್ಥಾನ

Suddi Udaya

ಫೆ.6: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಕಿವಿ-ಮೂಗು-ಗಂಟಲು ತಪಾಸಣಾ ಶಿಬಿರ

Suddi Udaya

ಕಡಿರುದ್ಯಾವರ ಶ್ರೀ ವಿದ್ಯಾ ಸರಸ್ವತಿ ಮಹಿಳಾ ಮಂಡಲದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya
error: Content is protected !!