September 16, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿರಾಜಕೀಯವರದಿ

ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ರಿಗೆ ಕೆಡಿಪಿ ಸದಸ್ಯರಿಂದ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೆಡಿಪಿ (KDP) ಸದಸ್ಯರು ಸೆ.16ರಂದು ಜಿಲ್ಲಾ ಉಸ್ತುವಾರಿ ಸಚಿವರಾದ ಯು. ಟಿ. ಖಾದರ್ ಅವರನ್ನು ಭೇಟಿಯಾಗಿ ಜಿಲ್ಲೆಯ ಪ್ರಮುಖ ಸಮಸ್ಯೆ ಹಾಗೂ ಬೇಡಿಕೆಗಳ ಕುರಿತು ಮನವಿ ಸಲ್ಲಿಸಿದರು.

ಸೆಪ್ಟೆಂಬರ್ 18ರಂದು ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ದ.ಕ. ಜಿಲ್ಲೆಗೆ ಸಂಬಂಧಿಸಿದಂತೆ ಕೆಳಗಿನ ಪ್ರಮುಖ ವಿಷಯಗಳನ್ನು ಪ್ರಸ್ತಾಪಿಸಿ, ಅಗತ್ಯ ಕ್ರಮ ಕೈಗೊಳ್ಳಲು ಒತ್ತಾಯಿಸುವಂತೆ ಸಚಿವರಿಗೆ ವಿನಂತಿಸಲಾಯಿತು.

•ನಮೂನೆ 9 ಮತ್ತು 11 ರ ಸಮಸ್ಯೆ: ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಫಾರಂ 9 ಮತ್ತು 11 ರ ಸಮಸ್ಯೆಗೆ ಶೀಘ್ರ ಪರಿಹಾರ ಕಲ್ಪಿಸುವುದು. •ಗಣಿಗಾರಿಕೆ ವಿಚಾರ: ಜಿಲ್ಲೆಯಲ್ಲಿ ಗಣಿಗಾರಿಕೆಗೆ ಸಂಬಂಧಿಸಿದಂತೆ ಎದುರಾಗಿರುವ ತೊಡಕುಗಳನ್ನು ಬಗೆಹರಿಸುವುದು. •ತುಳು ಭಾಷೆಗೆ ಅಧಿಕೃತ ಸ್ಥಾನಮಾನ: ತುಳು ಭಾಷೆಗೆ ರಾಜ್ಯದ ಅಧಿಕೃತ ಭಾಷೆಯ ಸ್ಥಾನಮಾನ ನೀಡುವ ಕುರಿತು ಸಚಿವ ಸಂಪುಟದಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳುವುದು.

ಈ ಸಂದರ್ಭದಲ್ಲಿ ಜಿಲ್ಲಾ ಕೆಡಿಪಿ ಸದಸ್ಯರಾದ ಮೆಲ್ವಿನ್ ಡಿಸೋಜ, ಸಂತೋಷ್ ಕುಮಾರ್ ಲಾಯಿಲ, ಹಾಗೂ ಹಮೀದ್ ಕಿನ್ಯ ಅವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಜಿಲ್ಲಾ ಪಂಚಾಯತ್ ವ್ಯಾಪ್ತಿಗೆ ಭಾರತ್ ಜೋಡೋ ಯುವ ಸಂಘದ ಉಸ್ತುವಾರಿಗಳ ನೇಮಕ

Suddi Udaya

ರಾಜ್ಯ ಮಟ್ಟದ ಜೂನಿಯರ್ ರೆಡ್ ಕ್ರಾಸ್ ಪರೀಕ್ಷೆ : ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya

ವಾಣಿ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಸಮಾವೇಶ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಮಾದಕ ವಸ್ತುಗಳ ವಿರೋಧಿ ದಿನಾಚರಣೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ.ನಲ್ಲಿ ಜಮಾಬಂದಿ ಕಾರ್ಯಕ್ರಮ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ “ಕಾಂಟ್ರಾಪ್ಷನ್ ಗೇಮಿಂಗ್ ಸ್ಪರ್ಧೆ”

Suddi Udaya
error: Content is protected !!