September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ ಚಾಣಕ್ಯ ಸಂಜೀವಿನಿ ಗ್ರಾ.ಪಂ. ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

ಅಳದಂಗಡಿ : ಚಾಣಕ್ಯ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ ಅಳದಂಗಡಿ ಇದರ ವಾರ್ಷಿಕ ಮಹಾಸಭೆಯನ್ನು ಒಕ್ಕೂಟದ ಅಧ್ಯಕ್ಷೆ ‘ಭಾರತಿ’ಯವರ ಅಧ್ಯಕ್ಷತೆಯಲ್ಲಿ ಹಾಗೂ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರಾದ ಪ್ರತಿಮಾರವರ ಉಪಸ್ಥಿತಿಯಲ್ಲಿ ನಡೆಸಲಾಯಿತು.

ಸದಸ್ಯೆ ಸುಪ್ರಿಯಾ ಪ್ರಾರ್ಥಿಸಿ. ಸಮುದಾಯ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಆಶಾ ಸ್ವಾಗತಿಸಿದರು. ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕಿ ಪ್ರತಿಮಾರವರು ಪ್ರಾಸ್ತಾವಿಕವಾಗಿ ಸಂಜೀವಿನಿ ಯೋಜನೆಯಿಂದ ಸದಸ್ಯರಿಗೆ ಸಿಗುವಂತಹ ಸಾಲ ಸೌಲಭ್ಯಗಳು ಸಂಜೀವಿನಿ ಯೋಜನೆಯ ಪ್ರಮುಖ ಉದ್ದೇಶದ ಬಗ್ಗೆ ಹಾಗೂ ಮಹಿಳೆಯರ ಆರ್ಥಿಕ ಸಬಲೀಕರಣದ ಬಗ್ಗೆ ಹಲವಾರು ವಿಷಯಗಳ ಮಾತುಗಳನ್ನಾಡಿದರು. ಒಕ್ಕೂಟದ ಅಧ್ಯಕ್ಷೆ ಭಾರತಿರವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

2025- 2026ನೇ ಸಾಲಿನ ಒಕ್ಕೂಟದ ವಾರ್ಷಿಕ ವರದಿಯನ್ನು ಮುಖ್ಯ ಪುಸ್ತಕ ಬರಹಗಾರರಾದ ಹರ್ಷಲಾರವರು ಮಂಡಿಸಿದರು. ಹಾಗೂ ಲೆಕ್ಕಪರಿಶೋಧನಾ ವರದಿ ಮತ್ತು ಲೆಕ್ಕಪತ್ರಗಳನ್ನು ಸಭೆಗೆ ಮಂಡಿಸಿದರು. ವರದಿಯ ಬಗ್ಗೆ ಚರ್ಚಿಸಿ ಸಭೆಯಿಂದ ಅನುಮೋದನೆ ಪಡೆಯಲಾಯಿತು.


ವಲಯ ಮೇಲ್ವಿಚಾರಕರಾದ ಸ್ವಸಿಕ್ ಜೈನ್ ರವರು ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ನೂತನ ಪದಾಧಿಕಾರಿಗಳ ಜವಾಬ್ದಾರಿ ಹಾಗೂ ಒಕ್ಕೂಟವನ್ನು ಪ್ರಗತಿಪಥದಲ್ಲಿ ಯಾವ ರೀತಿಯಾಗಿ ಮುನ್ನಡೆಸಿಕೊಂಡು ಹೋಗುವಲ್ಲಿ ನೂತನ ಪದಾಧಿಕಾರಿಗಳ ಜವಾಬ್ದಾರಿಯನ್ನು ಸಂಕ್ಷಿಪ್ತವಾಗಿ ವಿವರಿಸಿದರು.

ನೂತನ ಪದಾಧಿಕಾರಿಗಳನ್ನು ಅಭಿನಂದಿಸಲಾಯಿತು. ಜಿಲ್ಲಾ ಪಂಚಾಯತ್ IEC ಸುನೀತಾರವರು VBG RAMG ಬಗ್ಗೆ ಸದಸ್ಯರಿಗೆ ಹಲವಾರು ವಿಷಯಗಳ ಮಾಹಿತಿಯನ್ನು ನೀಡಿದರು. ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ PHCO ರವರು ಪೌಷ್ಟಿಕ ಪೋಷಣಾ ಅಭಿಯಾನದ ಬಗ್ಗೆ ಮಾಹಿತಿಯನ್ನು ನೀಡಿದರು. ಒಕ್ಕೂಟದ ಅಧ್ಯಕ್ಷೆ ಭಾರತೀಯವರ ಅಧ್ಯಕ್ಷೀಯ ಮಾತಿನಲ್ಲಿ ನೂತನ ಪದಾಧಿಕಾರಿಗಳು ಒಕ್ಕೂಟಕ್ಕೆ ನಿಮ್ಮೆಲ್ಲರ ಸಹಕಾರ ಇದ್ದರೆ ಇನ್ನು ಒಳ್ಳೆಯ ರೀತಿಯಲ್ಲಿ ನಡೆಸಿಕೊಂಡು ಹೋಗಬಹುದು. ಹಾಗೂ ಸಂಘದ ಸದಸ್ಯರಿಗೆ ಸಂಘಗಳು ಹೇಗಿರಬೇಕೆಂದು ವಿವರವಾಗಿ ತಿಳಿಸಿದರು. ಒಕ್ಕೂಟದ ಅಧ್ಯಕ್ಷರು ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕಿ ಪ್ರತಿಮಾರವರನ್ನು ಸ್ಮರಣಿಕೆ ನೀಡಿ ಗೌರವಿಸಿದರು. ಸಾಂತ್ವನ ವಿಕಲಚೇತನ ಸಂಘದ ಸದಸ್ಯರಾದವರನ್ನು ತಾಲೂಕು ವಲಯ ಮೇಲ್ವಿಚಾರಕರಾದ ಸ್ವಸ್ತಿಕ್ ಜೈನ್ ರವರನ್ನು ಸ್ಮರಣಿಕೆ ನೀಡಿ ಗೌರವಿಸಿದರು. ಹಾಗೂ ನಿರೂಪಣೆಯನ್ನು ಮಾಡಿದ ಸಂಘದ ಸದಸ್ಯರಾದ ಶ್ರೀಮತಿದೀಪ ರವರನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು. ಪೌಷ್ಟಿಕ ಆಹಾರ ಉತ್ಪನ್ನಗಳನ್ನು ತಯಾರಿಸಿ ತಂದ ಸದಸ್ಯರಿಗೆ ಅಭಿನಂದನೆಯನ್ನು ಸಲ್ಲಿಸಲಾಯಿತು. ಸಂಘದ ಸದಸ್ಯರಾದ ದೀಪಾ ಕಾರ್ಯಕ್ರಮವನ್ನು ನಿರೂಪಿಸಿದರು. ಕೃಷಿಸಖಿ ಜಾನೆಟ್ ಡಿ ಸೋಜಾರವರು ಧನ್ಯವಾದವನ್ನು ಸಮರ್ಪಿಸಿದರು.

Related posts

ಕಡಿರುದ್ಯಾವರ : ಕಾನರ್ಪ ಒಕ್ಕೂಟ ಅನ್ನಪೂರ್ಣೇಶ್ವರಿ ಸಂಘದ ಸದಸ್ಯೆಯ ಮನೆ ದುರಸ್ತಿ ಕಾರ್ಯ ನಡೆಸಿದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು

Suddi Udaya

ಇಳಂತಿಲ: ಶ್ರೀ ಮಹಾಭಾರತ ಸರಣಿಯ 75ನೇ ತಾಳಮದ್ದಳೆ ಮತ್ತು ಸನ್ಮಾನ

Suddi Udaya

ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ಕಾಜೂರು ಹಯಾತುಲ್ ಔಲಿಯಾ ದರ್ಗಾ ಶರೀಫ್ ನಲ್ಲಿ ಸಂಭ್ರಮದ ಈದುಲ್ ಫಿತ್ರ್ ಆಚರಣೆ

Suddi Udaya

‘ಬೆಳ್ತಂಗಡಿ ಸಂಭ್ರಮ’ ಕಾರ್ಯಕ್ರಮಕ್ಕೆ ಚಾಲನೆ: ಮೂರು ದಿನಗಳ ಕಾಲ ಬೆಳ್ತಂಗಡಿ ಮಾರಿಗುಡಿ ಮೈದಾನದಲ್ಲಿ ಸಂಭ್ರಮ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಜಾರಿಗೆ ಹೈಕೋರ್ಟ್ ತಡೆ

Suddi Udaya

ಚಾರ್ಮಾಡಿ: ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya
error: Content is protected !!