September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುವೆಟ್ಟು: ಮನೆಗೆ ನುಗ್ಗಿ ರೂ.15.82 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು ನಗದು ಕಳವು

ಬೆಳ್ತಂಗಡಿ: ಮನೆಯವರು ಸಂಬಂಧಿಕರ ಗೃಹಪ್ರವೇಶ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಮನೆಗೆ ನುಗ್ಗಿದ ಕಳ್ಳರು ಸುಮಾರು ರೂ. 15.82 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ರೂ 1.80 ಲಕ್ಷ ರೂಪಾಯಿ ನಗದು ಕಳವು ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಆಲಂದಿಲದಲ್ಲಿ ನಡೆದಿದೆ.

ಆಲಂದಿಲ ನಿವಾಸಿ ನೌಫಾಲ್ ಬಿ.ಎಂ. (34) ಎಂಬವರು ನೀಡಿದ ದೂರಿನಂತೆ ಸೆ. 13 ರಂದು ಮಧ್ಯಾಹ್ನ ಸುಮಾರು 1.45ಕ್ಕೆ ಪತ್ನಿ, ಮಕ್ಕಳು ಹಾಗೂ ತಾಯಿಯನ್ನು ಸಂಬಂಧಿಕರ ಗೃಹಪ್ರವೇಶ ಕಾರ್ಯಕ್ರಮಕ್ಕೆ ಕಳುಹಿಸಿದ ಬಳಿಕ ನೌಫಾಲ್ ಕೂಡ ಮನೆಗೆ ಬೀಗ ಹಾಕಿ ತರಕಾರಿ ವ್ಯಾಪಾರದ ಕೆಲಸಕ್ಕಾಗಿ ಬೆಳ್ತಂಗಡಿಗೆ ತೆರಳಿದ್ದರು.

ಸೆಪ್ಟೆಂಬರ್ 14ರಂದು ಫಾಲ್ ಸೀಲಿಂಗ್‌ನ ವಯರಿಂಗ್ ಕೆಲಸಕ್ಕಾಗಿ ಕಾರ್ಮಿಕರನ್ನು ಮನೆಗೆ ಕರೆಸಲಾಗಿತ್ತು. ಮದ್ದಡ್ಕದ ಫಾರೂಕ್ ಎಂಬವರು ಕುದ್ರಡ್ಕದ ಅಶ್ರಫ್ ಹಾಗೂ ಶಿರ್ಲಾಲಿನ ಸುಲೈಮಾನ್ ಅವರನ್ನು ಕರೆದುಕೊಂಡು ಬಂದು ಮನೆಯಲ್ಲಿ ಕೆಲಸ ಮಾಡಿದ್ದರು. ಈ ವೇಳೆ ನೌಫಾಲ್ ಅವರ ತಮ್ಮ ಮಹಮ್ಮದ್ ನೌಷಾದ್ ಮನೆಯಲ್ಲಿದ್ದನೆಂದು ದೂರಿನಲ್ಲಿ ತಿಳಿಸಲಾಗಿದೆ. ಅದೇ ದಿನ ರಾತ್ರಿ ಸುಮಾರು 8.30ಕ್ಕೆ ನೌಫಾಲ್ ಕುಟುಂಬದೊಂದಿಗೆ ಮನೆಗೆ ವಾಪಸ್ ಬಂದಾಗ, ಬೆಡ್‌ರೂಂನ ಗಾದ್ರೇಜ್‌ನಲ್ಲಿ ಇಟ್ಟಿದ್ದ ಚಿನ್ನದ ಬಾಕ್ಸ್ ಕಾಣಿಸದಿರುವುದು ಗಮನಕ್ಕೆ ಬಂದಿದೆ. ಪರಿಶೀಲನೆ ನಡೆಸಿದಾಗ 32 ಗ್ರಾಂ ಮತ್ತು 26 ಗ್ರಾಂ ತೂಕದ ಎರಡು ಚಿನ್ನದ ಸರಗಳು, ಮಗುವಿನ ಚಿನ್ನದ ಸರ, ಕಾಲುಚೈನು, ಬ್ರಾಸ್‌ಲೈಟ್ ಸೇರಿದಂತೆ 15 ಲಕ್ಷದ 82 ಸಾವಿರ ರೂಪಾಯಿ ಮೌಲ್ಯದ ಒಟ್ಟು 113 ಗ್ರಾಂ ತೂಕದ ಚಿನ್ನಾಭರಣ ಹಾಗೂ 1.80 ಲಕ್ಷ ರೂಪಾಯಿ ನಗದು ಕಳವಾಗಿರುವುದು ಬೆಳಕಿಗೆ ಬಂದಿದೆ.

ಇದಲ್ಲದೆ ನೌಫಾಲ್ ಅವರ ತಾಯಿಯ ಗಾದ್ರೇಜ್‌ನಲ್ಲಿದ್ದ ಒಟ್ಟು 7 ಗ್ರಾಂ ತೂಕದ ಮೂರು ಉಂಗುರಗಳು ಕಾಣೆಯಾಗಿರುವುದು ಪತ್ತೆಯಾಗಿದೆ. ಮನೆಯ ಗಾದ್ರೇಜ್‌ನ ಕೀ ಗಾದ್ರೇಜ್‌ನಲ್ಲಿಯೇ ಇದ್ದು, ಮನೆಯವರು ಹೊರಗಿದ್ದ ಅವಧಿಯಲ್ಲಿ ಯಾರೋ ಮನೆಗೆ ಪ್ರವೇಶಿಸಿ ಗಾದ್ರೇಜ್ ತೆರೆದು ಚಿನ್ನಾಭರಣ ಮತ್ತು ನಗದು ಕಳವು ಮಾಡಿರುವ ಶಂಕೆ ವ್ಯಕ್ತವಾಗಿದೆ.

ಫಾಲ್ ಸೀಲಿಂಗ್ ಕೆಲಸಕ್ಕೆ ಬಂದಿದ್ದ ಅಶ್ರಫ್, ಫಾರೂಕ್ ಹಾಗೂ ಸುಲೈಮಾನ್ ಅವರ ಮೇಲೆ ಅನುಮಾನವಿರುವುದಾಗಿ ನೌಫಾಲ್ ದೂರಿನಲ್ಲಿ ತಿಳಿಸಿದ್ದಾರೆ.ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಸೆ.15 ರಂದು ಕಲಂ 331(3), 331(4), 305 BNS-2023 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿದಿದೆ.

Related posts

ರಾಜ್ಯಮಟ್ಟದ ಶ್ರೀ ಭಗವದ್ಗೀತಾ ಸ್ಪರ್ಧೆ: ಉಜಿರೆಯ ಎಸ್ ಡಿಎಂ ಪ.ಪೂ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಉಜಿರೆ: ಕುಂಜರ್ಪದಲ್ಲಿ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya

ಹೊಸಂಗಡಿಯ ಪುಲಾಬೆಯಲ್ಲಿ ಬದ್ರಿಯಾ ಮಸ್ಜಿದ್ ಮತ್ತು ಮದರಸ ಉದ್ಘಾಟನೆ

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಗ್ನಿವೀರ್ ಕುರಿತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ಕೊಕ್ಕಡ ಶ್ರೀ ಕ್ಷೇತ್ರ ‌ಸೌತಡ್ಕ ಮಹಾಗಣಪತಿ ‌ದೇವಾಲಯದ‌ ಮುಂಭಾಗದಲ್ಲಿ ನೂತನ ಹರಕೆಯ ಘಂಟೆಯ ‌ಅಂಗಡಿ ಶುಭಾರಂಭ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿಂದನೆ ಪ್ರಕರಣ:ಸೌಜನ್ಯ ಮಾವ ವಿಠ್ಠಲ ಗೌಡನಿಗೆ ನ್ಯಾಯಾಂಗ ಬಂಧನಕ್ಕೆ ಆದೇಶ

Suddi Udaya
error: Content is protected !!