ಬೆಳ್ತಂಗಡಿ: ಮಂಗಳೂರಿನಲ್ಲಿ ಸೆ. 18 ರಂದು ನಡೆಯುವ ಐತಿಹಾಸಿಕ ರಾಜ್ಯ ಸಚಿವ ಸಂಪುಟ ಸಭೆಯ ತಯಾರಿಯ ಪೂರ್ವಭಾವಿ ಸಭೆಯು ಸೆ. 15 ರಂದು ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪದ್ಮರಾಜ್ ಆರ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು , ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮಾಜಿ ಸಚಿವ ರಮಾನಾಥ್ ರೈ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ. ವಿಧಾನ ಪರಿಷತ್ ಶಾಸಕ ಐವನ್ ಡಿಸೋಜಾ, ಮಾಜಿ ಸಚಿವ ಅಭಯ ಚಂದ್ರ ಜೈನ್, ಲಾವಣ್ಯ ಬಲ್ಲಾಳ್, ಮಮತಾ ಗಟ್ಟಿ, ಸೈಲೆಂಟ್ ಪಿಂಟೋ, ಕಾಂಗ್ರೆಸ್ ಪಕ್ಷದ ಪ್ರಮುಖ ಮುಖಂಡರು ಉಪಸ್ಥಿತರಿದ್ದರು..











