ಉಜಿರೆ: ಮಕ್ಕಳಿಗಾಗಿ ಉಜಿರೆ ಪಂಚಾಯತ್ ವತಿಯಿಂದ ಒದಗಿಸಲಾಗುವ ಸೌಲಭ್ಯಗಳು, ಜಲ ಸಂರಕ್ಷಣೆ ಹಾಗೂ ತ್ಯಾಜ್ಯ ವಿಲೇವಾರಿ ಕುರಿತು ವಿಶೇಷ ಜಾಗೃತಿ ಕಾರ್ಯಕ್ರಮವು ಸೆ. 15ರಂದು ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆ, ಉಜಿರೆಯಲ್ಲಿ ನಡೆಯಿತು.
ಬೆಳ್ತಂಗಡಿ ತಾಲೂಕು ಪಂಚಾಯತ್‌ನ VBG-RAMG ವಿಭಾಗದ ಸಹಾಯಕ ನಿರ್ದೇಶಕರಾದ ಗಾಯತ್ರಿ ಪಿ. ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಮಕ್ಕಳಿಗಾಗಿ ಪಂಚಾಯತ್ ಮೂಲಕ ಲಭ್ಯವಿರುವ ಸೌಲಭ್ಯಗಳು, ನೀರಿನ ಸಂರಕ್ಷಣೆಯ ಮಹತ್ವ ಹಾಗೂ ಜವಾಬ್ದಾರಿಯುತ ತ್ಯಾಜ್ಯ ವಿಲೇವಾರಿ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಭಾಗವಹಿಸಿ, ಪರಿಸರ ಸಂರಕ್ಷಣೆ ಹಾಗೂ ಸ್ವಚ್ಛತೆಯ ಕುರಿತು ಅರಿವು ಪಡೆದುಕೊಂಡರು. ನೀರನ್ನು ಮಿತವಾಗಿ ಬಳಸುವುದು, ಮಳೆನೀರು ಸಂಗ್ರಹಿಸುವುದು, ತ್ಯಾಜ್ಯವನ್ನು ಸರಿಯಾಗಿ ವಿಂಗಡಿಸಿ ವಿಲೇವಾರಿ ಮಾಡುವುದು ಮತ್ತು ಪರಿಸರದ ಬಗ್ಗೆ ಜವಾಬ್ದಾರಿಯುತ ನಡವಳಿಕೆ ಬೆಳೆಸಿಕೊಳ್ಳುವುದು ಕಾರ್ಯಕ್ರಮದ ಪ್ರಮುಖ ಸಂದೇಶಗಳಾಗಿದ್ದವು.
ಮಕ್ಕಳಲ್ಲಿ ಪರಿಸರ ಕಾಳಜಿ, ನಾಗರಿಕ ಜವಾಬ್ದಾರಿ ಹಾಗೂ ಪಂಚಾಯತ್ ಸೌಲಭ್ಯಗಳ ಅರಿವು ಮೂಡಿಸುವಲ್ಲಿ ಕಾರ್ಯಕ್ರಮವು ಸಹಾಯಕವಾಯಿತು.











