ಉಜಿರೆ: ಎಸ್‌ಡಿಎಂ ಇಂಗ್ಲಿಷ್ ಮೀಡಿಯಂ ಶಾಲೆ, ಉಜಿರೆ (ರಾಜ್ಯ ಪಠ್ಯಕ್ರಮ)ದಲ್ಲಿ ಸೆ.15ರಂದು ಇಂಜಿನಿಯರ್ಸ್ ಡೇಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ದೇಶದ ಅಭಿವೃದ್ಧಿಯಲ್ಲಿ ಇಂಜಿನಿಯರ್‌ಗಳ ಕೊಡುಗೆಯನ್ನು ಸ್ಮರಿಸುವ ಸಲುವಾಗಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ವಿದ್ಯಾಲಕ್ಷ್ಮಿ ನಾಯಕ್ ಅವರು ಇಂಜಿನಿಯರ್ಸ್ ಡೇಗೆ ಸಂಬಂಧಿಸಿದ ಪೋಸ್ಟರ್‌ನ್ನು ಅನಾವರಣಗೊಳಿಸಿದರು. ಬಳಿಕ ಸನ್ನಿಧಿ ಅವರು ದಿನದ ಮಹತ್ವವನ್ನು ವಿವರಿಸಿದರು.
ಇಂಜಿನಿಯರ್‌ಗಳ ಸೃಜನಶೀಲತೆ, ತಾಂತ್ರಿಕ ಜ್ಞಾನ ಮತ್ತು ದೇಶದ ಪ್ರಗತಿಯಲ್ಲಿ ಅವರ ಪಾತ್ರದ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಯಿತು. ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಬಗ್ಗೆ ಆಸಕ್ತಿ ಬೆಳೆಸುವಂತಾಯಿತು.











