ಬೆಳಾಲು :
ಸರ್ ಎಂ. ವಿಶ್ವೇಶ್ವರಯ್ಯನವರ ಜನ್ಮದಿನದ ಪ್ರಯುಕ್ತ ಬೆಳಾಲು ಶ್ರೀ ಧ. ಮಂ. ಪ್ರೌಢಶಾಲೆಯಲ್ಲಿ ಸೆ.14 ರಂದು ಇಂಜಿನಿಯರ್ಸ್ ದಿನಾಚರಣೆ ಆಚರಿಸಲಾಯಿತು.

ಸರ್ ಎಂ ವಿಶ್ವೇಶ್ವರಯ್ಯನವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.
ಇಂಜಿನಿಯರ್ಸ್ ದಿನಾಚರಣೆಯ ಕುರಿತ ಭಿತ್ತಿ ಪತ್ರಿಕೆಯನ್ನು ಅನಾವರಣಗೊಳಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮುಖ್ಯೋಪಾಧ್ಯಾಯ ಜಯರಾಮ ಮಯ್ಯ ಮಾತನಾಡಿ ದೇಶದ ಅಭಿವೃದ್ಧಿಗೆ, ನಿರ್ಮಾಣ ರಂಗಕ್ಕೆ ಮತ್ತು ತಂತ್ರಜ್ಞಾನ ಕ್ಷೇತ್ರಕ್ಕೆ ವಿಶ್ವೇಶ್ವರಯ್ಯನವರು ನೀಡಿದ ಕೊಡುಗೆಯನ್ನು ಸ್ಮರಿಸಿದರು.
ವಿದ್ಯಾರ್ಥಿನಿ ಶರಾವತಿ ದಿನ ವಿಶೇಷದ ಕುರಿತು ಮಾತನಾಡಿದರು.
ಸರ್ ಎಂ. ವಿಶ್ವೇಶ್ವರಯ್ಯನವರ ವಿಡಿಯೋ ತುಣುಕು ಪ್ರದರ್ಶಿಸಲಾಯಿತು.
ಕಾರ್ಯಕ್ರಮದಲ್ಲಿ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಸೃಜನ್ಯ ಕಾರ್ಯಕ್ರಮ ನಿರೂಪಿಸಿದರು.












