September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನೆಟ್ ಬಾಲ್ ಪಂದ್ಯಾಟ: ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ

ಉಜಿರೆ: ಸೇಕ್ರೆಡ್ ಹಾರ್ಟ್ ಪ್ರೌಢಶಾಲೆಯಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ 14ರ ವಯೋಮಾನದ ಪ್ರಾಥಮಿಕ/ಪ್ರೌಢಶಾಲಾ ವಿಭಾಗದ ನೆಟ್ಬಾಲ್ ಪಂದ್ಯಾಟದಲ್ಲಿ ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆ, ಉಜಿರೆಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.

ತಂಡದ ಮೂವರು ವಿದ್ಯಾರ್ಥಿಗಳಾದ ರೂಪೇಶ್, ಪ್ರೀತಮ್ ಮತ್ತು ಸುಹಾಸ್ ಅವರು ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ ನೆಟ್ಬಾಲ್ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಬೆಸ್ಟ್ ಅಲ್ ರೌಂಡರ್ ಆಗಿ ಸುಹಾಸ್ ಆಯ್ಕೆಯಾಗಿರುತ್ತಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಎಸ್.ಡಿ.ಎಂ. ಸ್ಪೋರ್ಟ್ಸ್ ಕ್ಲಬ್ ನ ಕಾರ್ಯದರ್ಶಿಗಳಾದ ರಮೇಶ್ ಸಹಕಾರ ನೀಡಿ, ವಿದ್ಯಾರ್ಥಿಗಳನ್ನು ಅಭಿನಂದಿಸಿದರು.

ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರಾದ ಶ್ರೀಮತಿ ವಿದ್ಯಾ ಟಿ., ಶಿಕ್ಷಕ ವೃಂದ, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.
ವಿದ್ಯಾರ್ಥಿಗಳಿಗೆ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಹೆಮೋಧರ್ ತರಬೇತಿ ನೀಡಿರುತ್ತಾರೆ.

Related posts

ಬೆಳ್ಳಿಹಬ್ಬದ ಸಂಭ್ರಮದಲ್ಲಿ ಎಸ್‌.ಡಿ.ಎಂ ಮನೋವಿಜ್ಞಾನ ವಿಭಾಗ: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 25 ಬಗೆಯ ಅನನ್ಯ ಕಾರ್ಯಕ್ರಮಗಳ ಪ್ರಯೋಗ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ-ಸ್ನೇಹಕಿರಣ ಮಹಿಳಾ ಜಿಲ್ಲಾ ಒಕ್ಕೂಟದ ಸದಸ್ಯರಿಗೆ ಸಾಮರ್ಥ್ಯ ವರ್ಧನಾ ತರಬೇತಿ

Suddi Udaya

ಕೆ.ಎಸ್.ಎಂ.ಸಿ.ಎ ಕೇಂದ್ರ ಸಮಿತಿಯ ವತಿಯಿಂದ ಉಜಿರೆ ಸಂತ ಜಾರ್ಜ್ ದೇವಾಲಯಕ್ಕೆ ಭೇಟಿ

Suddi Udaya

ಆ.19: ಧರ್ಮಸ್ಥಳದಲ್ಲಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ, ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ ಸಮಾರಂಭ

Suddi Udaya

ಬೆಳೆ ವಿಮೆ ರೈತರ ಖಾತೆಗೆ ಜಮೆಯಾಗದೆ ತೊಂದರೆ : ಹರೀಶ್ ಸಾಲಿಯಾನ್ ಮೋರ್ತಾಜೆ

Suddi Udaya

ಮಡಂತ್ಯಾರು: ವರ್ತಕ ಬಂಧು ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!