ಉಜಿರೆ: ಪ್ರಧಾನಮಂತ್ರಿ ನರೇಂದ್ರ ಮೋದಿಜಿ ಅವರ ಹುಟ್ಟುಹಬ್ಬದ ಪ್ರಯುಕ್ತ ಹಮ್ಮಿಕೊಂಡಿರುವ ಸೇವಾ ಸಂಕಲ್ಪ ಅಭಿಯಾನದ ಅಂಗವಾಗಿ ಉಜಿರೆ ಮಹಾಶಕ್ತಿ ಕೇಂದ್ರದಿಂದ ಉಜಿರೆಯ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ಮೋದಿಜಿಯವರಿಗೆ ಆಯುಷ್ಯ, ಆರೋಗ್ಯ ಹಾಗೂ ಉತ್ತಮ ಸೇವಾ ಶಕ್ತಿ ಲಭಿಸಲಿ ಎಂದು ದೇವರಲ್ಲಿ ಪ್ರಾರ್ಥಿಸಲಾಯಿತು.
ಈ ಸಂದರ್ಭದಲ್ಲಿ ಉಜಿರೆ ಪಂಚಾಯತ್‌ನ ಮಾಜಿ ಅಧ್ಯಕ್ಷರಾದ ಪುಷ್ಪಾ ಆರ್. ಶೆಟ್ಟಿ, ಉಷಾಕಿರಣ್ ಕಾರಂತ್, ಮಂಜುಳಾ ಉಮೇಶ್, ರವಿ ಕುಮಾರ್ ಬರಮೇಲು, ಮಹಿಳಾ ಸೊಸೈಟಿ ಅಧ್ಯಕ್ಷೆ ಹಾಗೂ ಶಕ್ತಿ ಕೇಂದ್ರ ಪ್ರಮುಖ್ ಶಶಿಕಲಾ ಡಿ. ಗೌಡ, ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪೂರ್ಣಿಮಾ ಜಯಂತ್, ಜಿಲ್ಲಾ ಎಸ್‌ಸಿ ಮೋರ್ಚಾ ಸದಸ್ಯೆ ಚಂದ್ರಕಲಾ, ಮಾಜಿ ಬೂತ್ ಅಧ್ಯಕ್ಷ ವಿಶ್ವನಾಥ ನಾಯ್ಕ, ಪಂಚಾಯತ್ ಮಾಜಿ ಸದಸ್ಯರಾದ ಜಯರಾಮ್ ಗೌಡ, ನಾಗೇಶ್ ರಾವ್, ಬೂತ್ ಕಾರ್ಯದರ್ಶಿ ಪ್ರಮೀಳಾ ಹಾಗೂ ದಿನೇಶ್ ಮಲವಂತಿಗೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.











