September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೌಷ್ಟಿಕ ಆಹಾರ ಪ್ರದರ್ಶನ: ವಿಜ್ಞಾನ ಚಟುವಟಿಕೆಯಲ್ಲಿ ವಿದ್ಯಾರ್ಥಿಗಳ ಸಕ್ರಿಯ ಪಾಲ್ಗೊಳ್ಳುವಿಕೆ

ಉಜಿರೆ: ಎಸ್‌ಡಿಎಂ ಇಂಗ್ಲಿಷ್ ಮೀಡಿಯಂ ಶಾಲೆ, ಉಜಿರೆ (ರಾಜ್ಯ ಪಠ್ಯಕ್ರಮ)ದಲ್ಲಿ 6ನೇ ತರಗತಿಯ ವಿದ್ಯಾರ್ಥಿಗಳು ವಿಜ್ಞಾನ ಚಟುವಟಿಕೆಯ ಅಂಗವಾಗಿ “ಪೌಷ್ಟಿಕ ಆಹಾರ ಪ್ರದರ್ಶನ”ವನ್ನು ಆಯೋಜಿಸಿದರು.

ವಿದ್ಯಾರ್ಥಿಗಳು ವಿವಿಧ ಪೌಷ್ಟಿಕ ಆಹಾರ ಪದಾರ್ಥಗಳನ್ನು ತಯಾರಿಸಿ, ಪ್ರದರ್ಶಿಸಿದರು. ಅವುಗಳಲ್ಲಿರುವ ಪೋಷಕಾಂಶಗಳು ಹಾಗೂ ಆರೋಗ್ಯಕ್ಕೆ ಅವುಗಳ ಮಹತ್ವವನ್ನು ಪರಿಚಯಿಸಿದರು. ಆಹಾರದಲ್ಲಿರುವ ಕಾರ್ಬೋಹೈಡ್ರೇಟ್‌ಗಳು, ಪ್ರೋಟೀನ್‌ಗಳು, ಕೊಬ್ಬುಗಳು, ವಿಟಮಿನ್‌ಗಳು ಮತ್ತು ಖನಿಜಾಂಶಗಳ ಕುರಿತು ವಿದ್ಯಾರ್ಥಿಗಳು ಮಾಹಿತಿ ಹಂಚಿಕೊಂಡರು.

ಈ ಚಟುವಟಿಕೆಯ ಮೂಲಕ ಸಮತೋಲಿತ ಆಹಾರ ಸೇವನೆಯ ಅಗತ್ಯತೆ, ಆರೋಗ್ಯಕರ ಆಹಾರ ಪದ್ಧತಿ ಹಾಗೂ ಪೌಷ್ಟಿಕಾಂಶಗಳ ಮಹತ್ವದ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿತು. ವಿಜ್ಞಾನ ವಿಷಯವನ್ನು ಪ್ರಾಯೋಗಿಕವಾಗಿ ಅರ್ಥಮಾಡಿಕೊಳ್ಳಲು ಈ ಪ್ರದರ್ಶನವು ಸಹಾಯಕವಾಯಿತು.

ವಿದ್ಯಾರ್ಥಿಗಳ ಸಕ್ರಿಯ ಭಾಗವಹಿಸುವಿಕೆಯನ್ನು ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ವಿದ್ಯಾಲಕ್ಷ್ಮಿ ನಾಯಕ್ ಹಾಗೂ ವಿಜ್ಞಾನ ಶಿಕ್ಷಕಿ ಶೋಭಾ ಹಾಗೂ ಇತರೆ ಶಿಕ್ಷಕರು ಮೆಚ್ಚುಗೆ ವ್ಯಕ್ತಪಡಿಸಿದರು.

Related posts

ಇಚಿಲಂಪಾಡಿ ಬೆಕ್ಕಿನ ಮರಿಯನ್ನು ನುಂಗಿದ ನಾಗರಹಾವು: ಹಾವನ್ನು ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಸ್ನೇಕ್ ಪ್ರಕಾಶ್

Suddi Udaya

ಕಲ್ಲಾಜೆ ನವ ಭಾರತ್ ಗೆಳೆಯರ ಬಳಗದ ವಾರ್ಷಿಕ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಅಶಕ್ತ ಕುಟುಂಬಗಳಿಗೆ ರೂ.46 ಸಾವಿರ ಆರ್ಥಿಕ ನರೆವು

Suddi Udaya

ಫ್ಯಾಬ್ರಿಕ್ ಪೈಂಟ್ ಡಿಸೈನ್ ಉಚಿತ ತರಬೇತಿ ಶಿಬಿರದ ಉದ್ಘಾಟನೆ

Suddi Udaya

ಬೆಳ್ತಂಗಡಿ : ಬುರುಡೆ ತನಿಖೆಗೆ ಎಸ್.ಐ.ಟಿ ವಿಚಾರಣೆಗೆ ಹಾಜರಾದ ನಾಲ್ವರು

Suddi Udaya

ಸೇವಾಭಾರತಿಗೆ 21ರ ಸಂಭ್ರಮ: ಡಿ.4 ನೂತನ ಕಾರ್ಯಾಲಯ ಸೇವಾನಿಕೇತನ ಉದ್ಘಾಟನಾ ಸಮಾರಂಭ

Suddi Udaya
error: Content is protected !!