September 17, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ: ಅಕ್ರಮ ಕಟ್ಟಡದ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಕೆ

ಬೆಳ್ತಂಗಡಿ: ಲಾಯಿಲದಲ್ಲಿ ವಾಸದ ಮನೆಗೆಂದು ಭೂ‌ ಪರಿವರ್ತನೆ ಮಾಡಿ ಅದರಲ್ಲಿ ಅಕ್ರಮವಾಗಿ ಬಹುಮಹಡಿ ಕಟ್ಟಡವನ್ನು ನಿರ್ಮಿಸಲಾಗುತ್ತಿದ್ದು. ಈ ಬಗ್ಗೆ ದೂರು ನೀಡಿದರೂ ಕ್ರಮ ಕೈಗೊಳ್ಳದ ಬಗ್ಗೆ ಬೆಳ್ತಂಗಡಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಭವಾನಿ‌ ಶಂಕರ್‌ ಹಾಗೂ ಇತರರ ವಿರುದ್ದ ಲಾಯಿಲ ಗ್ರಾಮದ ನಿವಾಸಿ ಅನ್ಸಾರ್ ಎಂಬವರು ಲೋಕಾಯುಕ್ತರಿಗೆ ಸೆ.16 ರಂದು ದೂರು ನೀಡಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ದೂರನ್ನು ಸ್ವೀಕರಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಲೋಕಾಯುಕ್ತ ದೂರಿನಲ್ಲಿ ಏನಿದೆ: ಬೆಳ್ತಂಗಡಿ ತಾಲೂಕಿನ ಲಾಯಿಲ‌ ಗ್ರಾಮದ ನಿವಾಸಿ ಅನ್ಸಾರ್ ಎಂಬವರು ನೀಡಿರುವ ದೂರಿನಲ್ಲಿ ಲಾಯಿಲ ಗ್ರಾಮದ ರಾಘವೇಂದ್ರ ನಗರದಲ್ಲಿ ಮೊಹಮ್ಮದ್ ರಫೀಕ್ ಬಿನ್ ಕರೀಂ ಮೈನಾ ಎಂಬವರು ವಾಣಿಜ್ಯ ಉದ್ದೇಶಕ್ಕಾಗಿ ಬಹುಮಹಡಿ ಕಟ್ಟಡವನ್ನು ನಿರ್ಮಿಸುತ್ತಿದ್ದು ಈ‌ಕಟ್ಟಡಕ್ಕೆ ಸಮರ್ಪಕ ಪರವಾನಿಗೆಗಳನ್ನು ಪಡೆದುಕೊಂಡಿಲ್ಲ, ಗೃಹ ನಿರ್ಮಾಣದ ಉದ್ದೇಶಕ್ಕಾಗಿ ಭೂಪರಿವರ್ತನೆ ಮಾಡಿಕೊಂಡು ಅದರಲ್ಲಿ ವಾಣಿಜ್ಯ ಉದ್ದೇಶಕ್ಕಾಗಿ ಕಟ್ಟಡ ಕಟ್ಟಲಾಗುತ್ತಿದೆ. ಇದರ ಬಗ್ಗೆ ಲಾಯಿಲ ಗ್ರಾಮಪಂಚಾಯತು ಮತ್ತು ಬೆಳ್ತಂಗಡಿ ತಾಲೂಕು ಪಂಚಾಯತು ಕಾರ್ಯನಿರ್ವಾಹಕ ಅಧಿಕಾರಿ ಭವಾನಿ ಶಂಕರ್ ಅವರಿಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಳ್ಳದೆ ಅಕ್ರಮ ಕಟ್ಟಡ ನಿರ್ಮಾಣಕ್ಕೆ‌ ಸಹಕಾರ ನೀಡುತ್ತಾ ಬಂದಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಇದೀಗ ಅಕ್ರಮವಾಗಿ ನಿರ್ಮಾಣವಾಗುತ್ತಿರುವ ಕಟ್ಟಡಕ್ಕೆ ಡೋರ್ ನಂಬರ್ ಹಾಗೂ ವಿದ್ಯುತ್ ಸಂಪರ್ಕ ಕ್ಕೆ ಎನ್.ಒ.ಸಿ ನೀಡುವ ಬಗ್ಗೆ ಒತ್ತಡ ಹೇರಲಾಗುತ್ತಿದೆ ಎಂದು ಆರೋಪಿಸಲಾಗಿದೆ.

ಈ ದೂರನ್ನು ಲೋಕಾಯುಕ್ತರು ಸ್ವೀಕರಿಸಿದ್ದಾರೆ ಪ್ರಕರಣದ ಬಗ್ಗೆ ಲೋಕಾಯುಕ್ತರು ಯಾವ ಕ್ರಮ ಕೈಗೊಳ್ಳಲಿದ್ದಾರೆ ಎಂಬುದು ಕಾದು ನೋಡಬೇಕಾಗಿದೆ.

Related posts

ಜೋಗಿ ಪುರುಷರ ವೃಂದ ನಿಟ್ಟಡ್ಕ ನಾಲ್ಕೂರು ವತಿಯಿಂದ ರಾಶಿಪೂಜೆ: ನಾಲ್ಕು ಪುರುಷ ಕಲಾವಿದರಿಗೆ ಸನ್ಮಾನ, ಪೂಜೆಯಲ್ಲಿ ನೂರಾರು ಭಕ್ತರು ಭಾಗಿ

Suddi Udaya

ಪಡ್ಡಂದಡ್ಕ ಮುನವಿರುಲ್ ಇಸ್ಲಾಂ ಮದರಸ ಪ್ರಾರಂಭೋತ್ಸವ

Suddi Udaya

ಉಜಿರೆ ಶ್ರೀ ಧ. ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ: ಬದುಕಿನ ಸ್ಫೂರ್ತಿ ಪಡೆಯಲು ಎನ್ನೆನ್ನೆಸ್ ಅಡಿಪಾಯ – ಎ. ಜೀವಂಧರ ಕುಮಾರ್

Suddi Udaya

ಮೇ.31ಕ್ಕೆ ನಿವೃತ್ತರಾಗುತ್ತಿರುವ ಟೀಚರ್ಸ್ ಕೋಪರೇಟಿವ್ ಬ್ಯಾಂಕ್ ಮೆನೇಜರ್ ಲ| ರವೀಂದ್ರ ಶೆಟ್ಟಿ ಬಳಂಜ

Suddi Udaya

ಮುಂಡಾಜೆ ಶ್ರೀ ಮೂರ್ತಿಲ್ಲಾಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ರಾಘವ ಶೆಟ್ಟಿ, ಕಾರ್ಯದರ್ಶಿಯಾಗಿ ಬಾಬು ಪೂಜಾರಿ ಆಯ್ಕೆ

Suddi Udaya

ಕಜಕೆ ಸ. ಹಿ ಪ್ರಾ. ಶಾಲೆಗೆ ಬೆಸ್ಟ್ ಫೌಂಡೇಶನ್ ವತಿಯಿಂದ ಪೀಠೋಪಕರಣ ವಿತರಣೆ

Suddi Udaya
error: Content is protected !!