ಕಲ್ಮಂಜ: ಭಗವಾನ್ ವಿಶ್ವಕರ್ಮ ಜಯಂತಿ, ರಾಷ್ಟ್ರೀಯ ಕಾರ್ಮಿಕ ದಿನಾಚರಣೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನಾಚರಣೆ ಅಂಗವಾಗಿ ಕಲ್ಮಂಜ ಗ್ರಾಮದ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವರ ಸನ್ನಿಧಿಯಲ್ಲಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆಯನ್ನು ಭಾರತೀಯ ಮಜ್ದೂರ್ ಸಂಘ (BMS) ಮತ್ತು ಭಾರತೀಯ ಜನತಾ ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ದೇಶದ ಸರ್ವತೋಮುಖ ಅಭಿವೃದ್ಧಿ, ಕಾರ್ಮಿಕರ ಕಲ್ಯಾಣ ಮತ್ತು ಪ್ರಧಾನಿಯವರ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸಲಾಯಿತು. ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರ EPFO ವೇತನ ಮಿತಿಯನ್ನು ರೂ. 15,000 ದಿಂದ 25,000ಕ್ಕೆ ಏರಿಸಿರುವ ಐತಿಹಾಸಿಕ ನಿರ್ಧಾರವನ್ನು ಸ್ವಾಗತಿಸಿ, ಇದು ಕಾರ್ಮಿಕರಿಗೆ ವಿಶ್ವಕರ್ಮ ಜಯಂತಿಯ ನಿಜವಾದ ಕೊಡುಗೆ ಎಂದು ಬಣ್ಣಿಸಲಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮಜ್ದೂರ್ ಸಂಘದ ರಾಜ್ಯ ಕಾರ್ಯದರ್ಶಿ ಕುಮಾರ್ ನಾಥ್ ಶೆಟ್ಟಿ ಕಲ್ಮಂಜ, ಬಿಜೆಪಿ 88ನೇ ಬೂತ್ ಅಧ್ಯಕ್ಷರು ಹಾಗೂ ತಾಮ್ರ ಶಿಲ್ಪಿಗಳು ಶ್ರೀಧರ್ ಎಂ. ಪೆಲತ್ತಬೆಟ್ಟು, ಶ್ರೀ ಸತ್ಯನಾರಾಯಣ ಭಜನಾ ಮಂದಿರ ಕಲ್ಮಂಜ ಇದರ ಅಧ್ಯಕ್ಷ ಸಂತೋಷ್ ಹೆಗ್ಡೆ, ಬಿಜೆಪಿ ಉಜಿರೆ ಮಹಾಶಕ್ತಿ ಕೇಂದ್ರ ಪ್ರಮುಖರು ಸಿವಿಲ್ ಗುತ್ತಿಗೆದಾರರಾದ ರಾಘವೇಂದ್ರ ಗೌಡ ಉಂಕ್ರೊಟ್, ಗಣೇಶ್ ಭಂಡಾರಿ ಮತ್ತಿತರರು ಉಪಸ್ಥಿತರಿದ್ದರು.











