September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಶ್ರೀ ಧ. ಮಂ. ಕಾಲೇಜಿನಲ್ಲಿ ಪತ್ರಿಕೋದ್ಯಮ ವಿಭಾಗದ ವತಿಯಿಂದ ಅತಿಥಿ ಉಪನ್ಯಾಸ

ಉಜಿರೆ: ವೃತ್ತಿ ಕ್ಷೇತ್ರದಲ್ಲಿ ಗೆಲುವನ್ನು ಕಾಣಲು ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿಗಳು ಇಂದಿನಿಂದಲೇ ಪರಿಶ್ರಮದಿಂದ ಕಾರ್ಯನಿರ್ವಹಿಸುವುದು ಅತ್ಯಗತ್ಯ ಎಂದು ಜೋಸೆಫ್ ಅಂತರಾಷ್ಟ್ರೀಯ ಕಂಪನಿಯ ಪಿ ಆರ್ ಓ ಆಗಿರುವ ಮಹಮ್ಮದ್ ಸಪ್ವಾನ್ ಹೇಳಿದರು.

ಉಜಿರೆ ಶ್ರೀ ಧ. ಮಂ. ಕಾಲೇಜಿನಲ್ಲಿ ಪತ್ರಿಕೋದ್ಯಮ ವಿಭಾಗದ ವತಿಯಿಂದ ಸೆ. 7 ರಂದು ಆಯೋಜಿಸಿದ ಅತಿಥಿ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

ವಿದೇಶದಲ್ಲಿರುವ ಉದ್ಯೋಗ ಅವಕಾಶಗಳು ಹಾಗೂ ಪ್ರಸ್ತುತ ಯು.ಎ.ಇ ಅಂತಹ ದೇಶಗಳಲ್ಲಿ ಪತ್ರಿಕೋದ್ಯಮಕ್ಕೆ ಇರುವಂತಹ ಪ್ರಾಮುಖ್ಯತೆಗಳ ಕುರಿತು ಹಾಗೂ ವಿದ್ಯಾರ್ಥಿಗಳು ತಮ್ಮನ್ನು ತಾವು ಯಾವ ರೀತಿಯಲ್ಲಿ ತಯಾರಿಸಿಕೊಳ್ಳಬೇಕು ಎಂಬುದರ ಕುರಿತಾಗಿ ಅವರು ಹೇಳಿದರು.

ಭಾರತಕ್ಕಿಂತ ಹೊರದೇಶಗಳಲ್ಲಿ ಪತ್ರಿಕೋದ್ಯಮ ಎಷ್ಟು ವಿಭಿನ್ನವಾಗಿ ಮತ್ತು ಸೃಜನಾತ್ಮಕವಾಗಿ ಕಾರ್ಯನಿರ್ವಹಿಸುತ್ತಿದೆ ಎಂಬುದರ ಕುರಿತಾಗಿಯೂ ಪತ್ರಕರ್ತರು ಯಾವ ರೀತಿಯಾಗಿ ವಸ್ತುನಿಷ್ಠತೆಯಿಂದ ಕಾರ್ಯನಿರ್ವಹಿಸುತ್ತಾರೆ ಎಂಬುದಾಗಿ ಅವರು ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು.

ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಸುನಿಲ್ ಹೆಗ್ಡೆ, ಎಸ್‌ಡಿಎಂ ಮಲ್ಟಿಮೀಡಿಯಾ ಸ್ಟುಡಿಯೋದ ಸೀನಿಯರ್ ಪ್ರೊಡಕ್ಷನ್ ಅಸೋಸಿಯೇಟ್ ಸಂಹಿತಾ ಎಸ್ ಮೈಸೂರೆ ಹಾಗೂ ವಿಭಾಗದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಆ. 31: ತಾಲೂಕು ಜೈನ ಸಮಾಜದವರಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಧರ್ಮ ಸಂರಕ್ಷಣಾ ವಾಹನ ಜಾಥಾ

Suddi Udaya

ಮುಂಡಾಜೆ: ಸೈಂಟ್ ಮೇರಿಸ್ ಚರ್ಚ್ ನಲ್ಲಿ ಗುಡ್ ಫ್ರೈಡೆ ಆಚರಣೆ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಸಂಸ್ಥಾಪಕ ದೀಪಕ್ ಜಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

Suddi Udaya

ಭಾರೀ ಗಾಳಿ ಮಳೆ: ಬಂದಾರು ಪೇರಲ್ದಪಲಿಕೆಯಲ್ಲಿ ವಿದ್ಯುತ್ ತಂತಿ ಮೇಲೆ ಬಿದ್ದ ಮರ

Suddi Udaya

ಪುದುವೆಟ್ಟು: ಡಿಸೇಲ್ ಪೈಪ್ ಲೈನ್ ಕೊರೆದು ರೂ. 9 ಲಕ್ಷ ಮೌಲ್ಯದ ಡಿಸೇಲ್ ಕಳ್ಳತನ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ : ಉಜಿರೆ ಎಸ್ ಡಿ ಎಂ ಅನುದಾನಿತ ಸೆಕೆಂಡರಿ ಶಾಲೆ ಶೇ.99.34 ಫಲಿತಾಂಶ

Suddi Udaya
error: Content is protected !!