September 17, 2026
ಅಪಘಾತತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಷ್ಟ್ರೀಯ ಸುದ್ದಿವರದಿ

ಬೆಳ್ತಂಗಡಿ: ಕಟ್ಟಡ ತೆರವು ಕಾರ್ಯಾಚರಣೆ ವೇಳೆ ರಾಡ್ ಇದ್ದ ಸಿಮೆಂಟ್ ತುಂಡು ಬಿದ್ದು ಕಾರ್ಮಿಕ ಸಾವು

ಬೆಳ್ತಂಗಡಿ : ಪುಂಜಾಲಕಟ್ಟೆ- ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ವೇಳೆ ಕಟ್ಟಡ ತೆರವು ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಬೆಳ್ತಂಗಡಿಯ ಕಟ್ಟಡದ ಮೇಲ್ಬಾಗದಲ್ಲಿ ಸಿಮೆಂಟ್ ಸಹಿತ ರಾಟ್ ಕಟ್ಟಿಂಗ್ ಮಾಡುತ್ತಿದ್ದಾಗ ಕೆಳಭಾಗದಲ್ಲಿದ್ದ ಕಾರ್ಮಿಕ ಮೇಲೆ ಬಿದ್ದು ಸಾವನ್ನಪ್ಪಿದ ಘಟನೆ ಸೆ.17 ರಂದು ಸಂಜೆ 4:30 ರ ಸುಮಾರಿಗೆ ನಡೆದಿದೆ.

ಬೆಳ್ತಂಗಡಿ ನಗರದ ಮೂರು ಮಾರ್ಗದ ಬಳಿಯ ಬೆಳ್ತಂಗಡಿ ಮಹಿಳಾ ಗ್ರಾಹಕರ ಸಹಕಾರಿ ಸಂಘಕ್ಕೆ ಸೇರಿದ ಮಳಿಗೆಯ ಕಟ್ಟಡ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾಗ ಮೇಲ್ಬಾಗದಲ್ಲಿ ರಾಡ್ ಸಹಿತ ಸಿಮೆಂಟ್ ತೆರವು ಮಾಡುವಾಗ ಆಯಾತಪ್ಪಿ ಒಂದು ತುಂಡು ಕೆಳಭಾಗದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ ಆಲಿ ಎಂಬವರ ಪುತ್ರ ಝುಬೈರ್(22) ಎಂಬಾತನ ಮೇಲೆ ಬಿದ್ದಿದೆ. ತಕ್ಷಣ ಸ್ಥಳೀಯರ ಸಹಕಾರದಿಂದ ಸಾಯಿರಾಂ ಆಂಬುಲೆನ್ಸ್ ಮೂಲಕ ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಸಾವನ್ನಪ್ಪಿದ್ದಾನೆ‌. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌.

Related posts

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶಾರದ ಮಂಟಪ ಉಜಿರೆ 17ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ, ಪೂರ್ವಭಾವಿ ಸಭೆ

Suddi Udaya

ವೇಣೂರಿನ ವಿದ್ಯೋದಯ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಯಕ್ಷಗಾನ ತಾಳಮದ್ದಳೆ

Suddi Udaya

ಅಳದಂಗಡಿ: ಶ್ರೀ ಸೋಮನಾಥೇಶ್ವರಿ ಭಜನಾ ಮಂಡಳಿಯ ಹಿರಿಯ ಕಾರ್ಯಕರ್ತ ಪೂವಪ್ಪ ಮಡಿವಾಳ ಸನ್ಮಾನ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ದೃಢ ಕಲಶ

Suddi Udaya

ಮಲವಂತಿಗೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಬೆಳಾಲು ಶ್ರೀ ಧ. ಮಂ. ಪ್ರೌಢಶಾಲೆಯಲ್ಲಿ ಗಮಕ ವಾಚನ ಕಾರ್ಯಕ್ರಮ

Suddi Udaya
error: Content is protected !!