September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯಲ್ಲಿ ಬ್ಯಾಂಕಿಂಗ್ ಹಾಗೂ ಕೌಶಲ್ಯ ತರಬೇತಿ ಮಾಹಿತಿ ಶಿಬಿರ

ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ, ಸುನಿಧಿ ಫೌಂಡೇಷನ್ ಟ್ರಸ್ಟ್ ಹಾಗೂ ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ ಬೆಳ್ತಂಗಡಿ ವಲಯ ಇವರ ಜಂಟಿ ಆಶ್ರಯದಲ್ಲಿ ಕೌಶಲ್ಯ ತರಬೇತಿ ಹಾಗೂ ಬ್ಯಾಂಕಿಂಗ್ ಸೌಲಭ್ಯಗಳ ಮಾಹಿತಿ ಶಿಬಿರ ಬೆಳ್ತಂಗಡಿ ಅಂಬೇಡ್ಕರ ಭವನದಲ್ಲಿ ನಡೆಯಿತು.

ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇದರ ಕಾರ್ಯಕ್ರಮ ವ್ಯವಸ್ಥಾಪಕ ಜೀವನ್ ಕೊಲ್ಯ ಇವರು ” ಮಹಿಳೆಯರಿಗೆ ಕೌಶಲ್ಯ ತರಬೇತಿ ಹಾಗೂ ಬ್ಯಾಂಕಿಂಗ್ ಮಾಹಿತಿ ಇಂದಿನ ಕಾಲದಲ್ಲಿ ಅವಶ್ಯವಾಗಿದ್ದು, ಹೆಚ್ಚಿನ ಮಹಿಳೆಯರು ಇದರ ಪ್ರಯೋಜನ ಪಡೆಯಬೇಕು” ಎಂದು ಕರೆ ನೀಡಿದರು.

ಮಂಗಳೂರಿನ ಗೌತಮ್ ಇವರು ಬ್ಯಾಂಕಿಂಗ್ ಸಾಲ ಸೌಲಭ್ಯ , ಕೃಷಿಗೆ ಸಂಬಂಧಿಸಿದಂತೆ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಸಂಪನ್ಮೂಲ ವ್ಯಕ್ತಿ ಶ್ರೀಮತಿ ಮೀನಾಕ್ಷಿ ಇವರು ಆರಿ ಕೌಶಲ್ಯ ತರಬೇತಿ ಯೊಜನೆ ಬಗ್ಗೆ ಮಾಹಿತಿ ನೀಡಿದರು.

ವೇದಿಕೆಯಲ್ಲಿ ವಿನೀತ್, KSTA ಬೆಳ್ತಂಗಡಿ ವಲಯದ ಅಧ್ಯಕ್ಷ ಸುರೇಂದ್ರ ಕೋಟ್ಯಾನ್ ವಲಯ ಸಮಿತಿ ಉಪಾಧ್ಯಕ್ಷ ಹರೀಶ್ ಹರ್ಷ, ತಾಲೂಕು ಸಮಿತಿ ಉಪಾಧ್ಯಕ್ಷ ವಸಂತ ಸ್ವಾತಿ, ಮಾಜಿ ವಲಯ ಸಮಿತಿ ಅಧ್ಯಕ್ಷ ಹರೀಶ್ ಗಜಾನನ
ತರಗತಿಯಲ್ಲಿ ಭಾಗವಹಿಸುವ 47 ಮಂದಿ ಭಾಗವಹಿಸಿದರು . ಜಿ.ವಿ. ಹರೀಶ್ ನಿರೂಪಿಸಿ, ಸುರೇಖಾ ಸ್ವಾಗತಿಸಿದರು. ಶ್ರೀಮತಿ ಶಶಿಕಲಾ ಧನ್ಯವಾದಗೈದರು.

Related posts

ಕೂಟ ಮಹಾ ಜಗತ್ತು ಬೆಳ್ತಂಗಡಿ ಅಂಗಸಂಸ್ಥೆಯ ಮಹಿಳಾ ವೇದಿಕೆಯಿಂದ ಆಟಿಕೂಟ ಆಚರಣೆ

Suddi Udaya

ಬಂಟರಯಾನೆ ನಾಡವರ ಸಂಘ ಬೆಳ್ತಂಗಡಿ, ತಾಲೂಕು ಮಹಿಳಾ ಬಂಟರ ವಿಭಾಗ ಹಾಗೂ ತಾಲೂಕು ಯುವ ಬಂಟರ ವಿಭಾಗ ನೇತೃತ್ವ ಗುರುವಾಯನಕೆರೆಯಲ್ಲಿ ಸಂಭ್ರಮದ ಬಂಟೋತ್ಸವ

Suddi Udaya

ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಮೂರನೇ ಬಾರಿ ಗಡಿಪಾರು ಆದೇಶ

Suddi Udaya

ಕೆಎಸ್ಸಾರ್ಟಿಸಿ ಧರ್ಮಸ್ಥಳ ಘಟಕದ ಸಂಚಾರ ನಿಯಂತ್ರಕ ವರ್ಗೀಸ್ ನಿಧನ

Suddi Udaya

ಕೊಯ್ಯೂರು ಗ್ರಾಮದಲ್ಲಿ ನೆಟ್ವರ್ಕ್ ಸಮಸ್ಯೆ, ಏರ್ ಟೆಲ್ ಸಂಸ್ಥೆಯ ಗಮನಕ್ಕೆ ತಂದರೂ ನಿರ್ಲಕ್ಷ್ಯ ಧೋರಣೆ: ಸಮಸ್ಯೆ ಬಗೆಹರಿಸುವಂತೆ ಸಾರ್ವಜನಿಕರ ಪರವಾಗಿ ಅಶೋಕ್ ಪೂಜಾರಿ ಬಜಿಲ ಒತ್ತಾಯ

Suddi Udaya

ಉಜಿರೆ ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಹಾಯ ಕೇಂದ್ರ

Suddi Udaya
error: Content is protected !!