30.4 C
ಪುತ್ತೂರು, ಬೆಳ್ತಂಗಡಿ
September 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಡಿ.ಎಂ ಕಾಲೇಜು : ಎರಡು ದಿನಗಳ ‘ ರೀಸರ್ಚ್ ಮೆಥಾಡಾಲಜಿ ‘ ಕಾರ್ಯಗಾರಕ್ಕೆ ಚಾಲನೆ

ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಸ್ನಾತಕೋತ್ತರ ಪದವಿ ಅಧ್ಯಯನ ಕೇಂದ್ರದ ಸಂಶೋಧನೆ ಮತ್ತು ಅಭಿವೃದ್ಧಿ ಘಟಕದ ವತಿಯಿಂದ ” ಸಂಶೋಧನಾ ವಿಧಾನಶಾಸ್ತ್ರ: ಪರಿಕಲ್ಪನೆಗಳು, ವಿನ್ಯಾಸ ಮತ್ತು ಫಲಿತಾಂಶ” ವಿಷಯದಡಿಯಲ್ಲಿ ಕಾಲೇಜಿನ ಪದವಿ ಮತ್ತು ಸ್ನಾತಕೋತ್ತರ ಅಧ್ಯಯನ ವಿದ್ಯಾರ್ಥಿಗಳಿಗಾಗಿ
ಕಾಲೇಜಿನ ಸೆಮಿನಾರ್ ಸಭಾಂಗಣದಲ್ಲಿ ಆಯೋಜಿಸಿದ ಎರಡು ದಿನಗಳ ಸಂಶೋಧನಾ ಕಾರ್ಯಗಾರಕ್ಕೆ ಚಾಲನೆ ನೀಡಲಾಯಿತು.

ಕಾರ್ಯಗಾರವನ್ನು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ಹಿರಿಯ ವಿದ್ಯಾರ್ಥಿ ಹಾಗು ಮಂಗಳೂರಿನ ಕಾಗ್ನೇಟ್ ಇಂಡಸ್ಟ್ರಿಯಲ್ ಆಟೋಮೇಷನ್ ಸಂಸ್ಥೆಯ ಸಹ-ಸಂಸ್ಥಾಪಕರು ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿರುವ ಡಾ. ಪುರುಷೋತ್ತಮ ಚಿಪ್ಪಾರ್ ದೀಪ ಪ್ರಜ್ವಲಿಸಿ ಚಾಲನೆ ನೀಡಿದರು.

ಬಳಿಕ ಮಾತನಾಡಿ, ವಿದ್ಯಾರ್ಥಿ ಸಮುದಾಯ ತನ್ನ ಹೆಚ್ಚಿನ ಸಮಯವನ್ನು ಸಾಮಾಜಿಕ ಜಾಲತಾಣಗಳ ವೀಕ್ಷಣೆಗೆ ವಿನಿಯೋಗಿಸುವ ಬದಲು ವಿನೂತನ ಆಲೋಚನೆ ಹಾಗು ನಿರಂತರ ಅಧ್ಯಯನದ ಮೂಲಕ ಹೊಸ ಜ್ಞಾನ ಪರಂಪರೆಯನ್ನು ಕಟ್ಟಿಕೊಡಬೇಕು. ಅಧ್ಯಾಯನದ ಹಾದಿಯನ್ನು ಸ್ಪಷ್ಟಪಡಿಸಿ ಸುಸ್ಥಿರ ಬದಲಾವಣೆ ಕಡೆಗೆ ಹೆಜ್ಜೆ ಹಾಕುವುದರ ಜೊತೆಗೆ ಹೊಸ ಸಂಶೋಧನೆ ಹಾಗು ಆವಿಷ್ಕಾರಗಳ ಕಡೆಗೆ ಹೆಜ್ಜೆ ಹಾಕಬೇಕು. ವಿದ್ಯಾರ್ಥಿಗಳ ಸಂಶೋಧನಾ ವಿಷಯಗಳು ಹೊಸ ಒಳವುಗಳನ್ನು ಪರಿಚಯಿಸಿ, ನಿರ್ದಿಷ್ಟ ವಿಷಯದ ಕುರಿತು ಆಳವಾದ ಪ್ರಬುದ್ಧತೆಯನ್ನು ಹೊಂದುವುದರ ಮೂಲಕ ವಿಚಾರವಂತರಾಗಬೇಕು.

ಪ್ರತಿಯೊಂದು ಅಧ್ಯಾಯನ ಹಾಗು ಸಂಶೋಧನೆಗೆ ತನ್ನ ಗುರಿ ಮತ್ತು ಉದ್ದೇಶ ಅತ್ಯಂತ ಅವಶ್ಯ. ವಿದ್ಯಾರ್ಥಿಗಳು
ಕೌಶಲ್ಯಾಧರಿತ ಅಧ್ಯಾಯನ ಮತ್ತು ಸಂಶೋಧನೆಗಳಿಂದ ಮಾತ್ರ ಉತ್ಕೃಷ್ಟ ಭವಿಷ್ಯ ನಿರ್ಮಿಸಿಕೊಳ್ಳಲು ಸಾಧ್ಯ ಎಂದು ಕಾರ್ಯಕ್ರಮದ ಆಯೋಜಕರಿಗೆ ಮೆಚ್ಚುಗೆಯನ್ನು ‌ವ್ಯಕ್ತಪಡಿಸಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ ವಿಶ್ವನಾಥ್ ಪಿ ಮಾತನಾಡಿ, ಶಿಕ್ಷಣ ಎನ್ನುವುದು ಕೇವಲ ಪಠ್ಯದ ಅಧ್ಯಾಯನವಲ್ಲ ಇದೊಂದು ಬಹುಮುಖ ಜ್ಞಾನಾರ್ಜನೆ, ಪ್ರಯೋಗಾಲಯ, ವಿವಿಧ ವಿಷಯಗಳ ಕುರಿತು ಪ್ರಬುದ್ಧರಾಗುವ ವೇದಿಕೆ. ಇಂತಹ ವಿಚಾರ ಸಿರಿವಂತಿಕೆಯನ್ನು ಸಾಧಿಸಲು‌ ಸಂಶೋಧನೆ, ಚರ್ಚೆ, ವಿಚಾರ ಸಂಕಿರಣ, ಕಾರ್ಯಾಗಾರದಂತಹ ಕಾರ್ಯಕ್ರಮಗಳು ಬಹು ಮುಖ್ಯ ಪಾತ್ರ ವಹಿಸುತ್ತದೆ. ಇದರ ಭಾಗವಾಗಿ ಇಂದು ಎರಡು ದಿನಗಳ ಕಾಲ ” ಸಂಶೋಧನಾ ವಿಧಾನಶಾಸ್ತ್ರ: ಪರಿಕಲ್ಪನೆಗಳು, ವಿನ್ಯಾಸ ಮತ್ತು ಫಲಿತಾಂಶ” ವಿಷಯದಡಿಯಲ್ಲಿ ಕಾರ್ಯಗಾರವನ್ನು ಆಯೋಜಿಸಲಾಗಿದೆ. ಇದರ ಲಾಭವನ್ನು ವಿದ್ಯಾರ್ಥಿಗಳು ಪಡೆದುಕೊಂಡು ಶೈಕ್ಷಣಿಕ ಬೆಳವಣಿಗೆಯನ್ನು ಸಾಧಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಅತಿಥಿಗಳಿಗೆ ಎಸ್.ಡಿ.ಎಂ ಸಂಸ್ಥೆಯ ವತಿಯಿಂದ ಕಾಲೇಜಿನ ಪ್ರಾಂಶುಪಾಲ ಪ್ರೊ ವಿಶ್ವನಾಥ್ ಪಿ ಸ್ಮರಣಿಕೆ ನೀಡಿ ಗೌರವಿಸಿದರು. ಈ ಸಂದರ್ಭ ಕಾರ್ಯಕ್ರಮದ ವೇದಿಕೆಯಲ್ಲಿ ಸ್ನಾತಕೋತ್ತರ ಕೇಂದ್ರದ ಡೀನ್ ಹಾಗು ಸಂಶೋಧನೆ ಮತ್ತು ಅಭಿವೃದ್ಧಿ ಘಟಕದ ನಿರ್ದೇಶಕಿ ಡಾ. ಸೌಮ್ಯ ಬಿ ಪಿ, ಕಾರ್ಯಾಗಾರದ ಸಂಯೋಜಕರಾದ ಡಾ. ಶಶಿಪ್ರಭ ಹಾಗು ಡಾ. ಮಂಜುಶ್ರೀ ಆರ್ ವೇದಿಕೆಯಲ್ಲಿದ್ದರು. ಕಾರ್ಯಕ್ರಮದಲ್ಲಿ ಕಾಲೇಜಿನ ಉಪ ಪ್ರಾಚಾರ್ಯರಾದ ನಂದ ಕುಮಾರಿ ಕೆ ಪಿ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

Related posts

ಕುತ್ಲೂರು ಗ್ರಾಮ ಅರಣ್ಯ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya

ರಾಷ್ಟ್ರೀಯ ಟಾರ್ಗೆಟ್ ಬಾಲ್ ಫೆಡರೇಶನ್ ಕಪ್ ಪಂದ್ಯಾಟ: ರಾಷ್ಟ್ರಮಟ್ಟಕ್ಕೆ ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನ ವಿದ್ಯಾರ್ಥಿ ಸಿದ್ದಾರ್ಥ್ ಎಂ. ಸಿ ಆಯ್ಕೆ

Suddi Udaya

ಏ.9: ನಾವರದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಬಯಲಾಟ ಸಮಿತಿಯಿಂದ “ನಾಗರತಿ” ಯಕ್ಷಗಾನ

Suddi Udaya

ಮರಕ್ಕೆ ನೇಣುಬಿಗಿದು ವೃದ್ಧ ಆತ್ಮಹತ್ಯೆಗೆ ಶರಣು

Suddi Udaya

ಸ್ಕ್ವೇಯ್ ಮಾರ್ಷಲ್ ಆರ್ಟ್ಸ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ನಿಗಮ್ ಜೈನ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ: ಅನುಗ್ರಹ ಕಾಲೇಜಿನಲ್ಲಿ ಕನ್ನಡ ಸಂವರ್ಧನೆ ಕಾರ್ಯಕ್ರಮ

Suddi Udaya
error: Content is protected !!