26.5 C
ಪುತ್ತೂರು, ಬೆಳ್ತಂಗಡಿ
September 18, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ತುಳು ಭಾಷೆಗೆ ರಾಜ್ಯದ 2ನೇ ಅಧಿಕೃತ ಭಾಷಾ ಸ್ಥಾನಮಾನ ಸಂತಸ ತಂದಿದೆ: ಬಿನುತಾ ಬಂಗೇರ

ಬೆಳ್ತಂಗಡಿ: 2013ರ ವಿಧಾನಸಭಾ ಕಲಾಪದಲ್ಲಿ ಮಾಜಿ ಶಾಸಕರಾದ ಕೆ. ವಸಂತ ಬಂಗೇರ ಅವರು ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ತುಳು ಭಾಷೆಯಲ್ಲಿ ಪ್ರಮಾಣವಚನ ಸ್ವೀಕರಿಸುವ ಮೂಲಕ ತುಳು ಭಾಷೆಗೆ ವಿಶೇಷ ಮಾನ್ಯತೆ ಹಾಗೂ ಪ್ರಾತಿನಿಧ್ಯ ದೊರೆಯಬೇಕೆಂಬ ಹೋರಾಟಕ್ಕೆ ನಾಂದಿ ಹಾಡಿದ್ದರು.

ಇದೀಗ ಸೆ.18ರಂದು ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಗೆ ರಾಜ್ಯದ 2ನೇ ಅಧಿಕೃತ ಭಾಷಾ ಸ್ಥಾನಮಾನ ನೀಡುವ ಮಹತ್ವದ ನಿರ್ಧಾರ ಕೈಗೊಂಡಿರುವುದು ಸಂತಸದ ಸಂಗತಿಯಾಗಿದೆ. ಈ ಮೂಲಕ ಕೆ. ವಸಂತ ಬಂಗೇರ ಅವರ ಕನಸು ನನಸಾಗುವಂತಾಗಿದೆ.

ತುಳು ಭಾಷೆಗೆ ಈ ಮಹತ್ವದ ಗೌರವ ದೊರಕಿಸಿಕೊಟ್ಟ ಕರ್ನಾಟಕ ರಾಜ್ಯ ಸರ್ಕಾರಕ್ಕೆ ಹಾಗೂ ಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಡಿ.ಕೆ. ಶಿವಕುಮಾರ್ ಮತ್ತು ಸಚಿವ ಸಂಪುಟದ ಎಲ್ಲ ಸಚಿವರಿಗೆ ಹೃದಯಪೂರ್ವಕ ಕೃತಜ್ಞತೆಗಳು ಎಂದು ಬಂಗೇರ ಬ್ರಿಗೇಡ್ ಅಧ್ಯಕ್ಷೆ ಬಿನುತಾ ಬಂಗೇರ ತಿಳಿಸಿದ್ದಾರೆ.

Related posts

ನೈತಿಕ ಮೌಲ್ಯಾಧಾರಿತ ಸ್ಪರ್ಧೆ: ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿನಿ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಅಪಾಯಕಾರಿ ಸ್ಥಳಗಳಲ್ಲಿರುವ ಮನೆಗಳಲ್ಲಿರುವವರಿಗೆ ಗ್ರಾಮ ಪಂಚಾಯತಿನಿಂದ ನೋಟೀಸು

Suddi Udaya

ಧರ್ಮಸ್ಥಳ ಹರ್ಷೇಂದ್ರ ಕುಮಾರ್ ಪ್ರತಿಷ್ಠಿತ ಅಗರಿ ಪ್ರಶಸ್ತಿಗೆ ಆಯ್ಕೆ

Suddi Udaya

ಕರಾಟೆ ಚಾಂಪಿಯನ್ಶಿಪ್: ಬೆಳ್ತಂಗಡಿಯ ಸೈಂಟ್ ಮೇರಿಸ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ನಾಫೀರವರು ಕುಮಿಟೆಯಲ್ಲಿ ಹಾಗೂ ಕಟಾದಲ್ಲಿ ಕಂಚಿನ ಪದಕ

Suddi Udaya

ಕಾಜೂರು ರಹ್ಮಾನಿಯ್ಯ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತರ್

Suddi Udaya

ಬಂದಾರು ಶಾಲಾ ವಿದ್ಯಾರ್ಥಿಗಳಿಗೆ ಬೆಸ್ಟ್ ಫೌಂಡೇಶನ್ ಪ್ರಾಯೋಜಕತ್ವದಲ್ಲಿ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya
error: Content is protected !!