30.4 C
ಪುತ್ತೂರು, ಬೆಳ್ತಂಗಡಿ
September 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಾಸಕರ ಸಲಹೆಗೆ ಆಡಳಿತಾತ್ಮಕ ಸ್ಪಂದನೆ : ಕಸ್ತೂರಿರಂಗನ್ ವರದಿ ಕರಡು ಕುರಿತು ವಿಶೇಷ ಗ್ರಾಮಸಭೆಯಲ್ಲಿ ಚರ್ಚೆ

ಬೆಳ್ತಂಗಡಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯಕ್ಕೆ (ESA) ಸಂಬಂಧಿಸಿದ ಕಸ್ತೂರಿರಂಗನ್ ವರದಿಯ ಕರಡು ಪ್ರತಿಯ ಕುರಿತು ಗ್ರಾಮ ಮಟ್ಟದಲ್ಲಿಯೇ ಸಾರ್ವಜನಿಕರ ಅಭಿಪ್ರಾಯ ಮತ್ತು ಆಕ್ಷೇಪಣೆಗಳನ್ನು ದಾಖಲಿಸಬೇಕು ಎಂದು ಶಾಸಕ ಹರೀಶ್ ಪೂಂಜ ಅವರು ಸೆ. 15ರಂದು ನಡೆದ ಜಿಲ್ಲಾ ಕೆಡಿಪಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ಸಲಹೆ ನೀಡಿದ್ದರು.

ಶಾಸಕರ ಈ ಸಲಹೆಯ ಹಿನ್ನೆಲೆಯಲ್ಲಿ ಉಸ್ತುವಾರಿ ಸಚಿವರು ಸೂಚನೆ ನೀಡಿದ್ದು ಅದರಂತೆ, ಜಿ.ಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯವರು ಆದೇಶಿಸಿದ್ದು ಅದರನ್ವಯ ತಾಲ್ಲೂಕು ಪಂಚಾಯತ್ ಮೂಲಕ ಸಂಬಂಧಪಟ್ಟ ಗ್ರಾಮ ಪಂಚಾಯಿತಿಗಳಿಗೆ ನಿರ್ದೇಶನ ನೀಡಲಾಗಿದ್ದು, ವಿಶೇಷ ಗ್ರಾಮಸಭೆಯ ಮಾಹಿತಿಯನ್ನು ಪಂಚತಂತ್ರ 2.0ರಲ್ಲಿ ದಾಖಲಿಸುವಂತೆ ಹಾಗೂ ಕಸ್ತೂರಿರಂಗನ್ ವರದಿಯ ಕರಡು ಪ್ರತಿಯ ಕುರಿತು ಗ್ರಾಮಸಭೆಯಲ್ಲಿ ಚರ್ಚಿಸಿ, ಸಾರ್ವಜನಿಕರಿಂದ ವ್ಯಕ್ತವಾಗುವ ಅಭಿಪ್ರಾಯ, ಆಕ್ಷೇಪಣೆ ಮತ್ತು ಸಲಹೆಗಳನ್ನು ನಡಾವಳಿಯಲ್ಲಿ ದಾಖಲಿಸುವಂತೆ ತಿಳಿಸಲಾಗಿದೆ.

ಇದರಿಂದ ಪಶ್ಚಿಮ ಘಟ್ಟ ಪ್ರದೇಶದ ರೈತರು, ಸ್ಥಳೀಯ ನಿವಾಸಿಗಳು ಹಾಗೂ ಗ್ರಾಮಸ್ಥರ ಸ್ಥಳೀಯ ವಾಸ್ತವಾಂಶಗಳು ಮತ್ತು ಅಭಿಪ್ರಾಯಗಳನ್ನು ಅಧಿಕೃತವಾಗಿ ದಾಖಲಿಸಿ ಸರ್ಕಾರದ ಗಮನಕ್ಕೆ ತರುವ ಅವಕಾಶ ಕಲ್ಪಿಸಲಾಗಿದೆ.

ಜಿಲ್ಲಾ ಕೆಡಿಪಿ ಸಭೆಯಲ್ಲಿ ಶಾಸಕರು ಮುಂದಿಟ್ಟ ಸಲಹೆಗೆ ತಕ್ಷಣವೇ ಆಡಳಿತಾತ್ಮಕ ಕ್ರಮ ಕೈಗೊಳ್ಳಲಾಗಿರುವುದು, ಸ್ಥಳೀಯ ಜನರ ಅಭಿಪ್ರಾಯಗಳಿಗೆ ಅಧಿಕೃತ ದಾಖಲೆ ರೂಪ ನೀಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ.

ಈ ಸಂದರ್ಭದಲ್ಲಿ ಪಶ್ಚಿಮ ಘಟ್ಟ ಪ್ರದೇಶದ ಗ್ರಾಮಸ್ಥರು ತಮ್ಮ ತಮ್ಮ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸಭೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ, ಕಸ್ತೂರಿರಂಗನ್ ವರದಿ ಕರಡು ಹಾಗೂ ಪರಿಸರ ಸೂಕ್ಷ್ಮ ವಲಯಕ್ಕೆ ಸಂಬಂಧಿಸಿದ ತಮ್ಮ ಪ್ರದೇಶದ ವಾಸ್ತವಾಂಶಗಳು, ಸಮಸ್ಯೆಗಳು, ಆಕ್ಷೇಪಣೆಗಳು ಮತ್ತು ಸಲಹೆಗಳನ್ನು ಸಂಪೂರ್ಣವಾಗಿ ನಡಾವಳಿಯಲ್ಲಿ ದಾಖಲಿಸುವಂತೆ ಶಾಸಕ ಹರೀಶ್ ಪೂಂಜ ಅವರು ಮನವಿ ಮಾಡಿದ್ದಾರೆ.

Related posts

ಶಾಸಕರಿಂದ ವಿವಾದಾತ್ಮಕ ಹೇಳಿಕೆ ಆರೋಪಿಸಿ ಮಹಿಳಾ ಕಾಂಗ್ರೆಸ್ ನಿಂದ ಠಾಣೆಗೆ ದೂರು

Suddi Udaya

ಉಜಿರೆ ರುಡ್ ಸೆಟ್ ನಲ್ಲಿ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya

ಬರೆಂಗಾಯ ಸ.ಉ.ಹಿ.ಪ್ರಾ. ಶಾಲೆಯಲ್ಲಿ 75ನೇ ವರ್ಷದ ಅಮೃತ ಮಹೋತ್ಸವದ ಉದ್ಘಾಟನಾ ಸಮಾರಂಭ

Suddi Udaya

ಧರ್ಮಸ್ಥಳ : ನೇರ್ತನೆಯಲ್ಲಿ ದನದ ಕರುವಿನ ಮೇಲೆ ಚಿರತೆ ದಾಳಿ

Suddi Udaya

ನಾಲ್ಕೂರು: ಯುವಶಕ್ತಿ ಫ್ರೆಂಡ್ ವತಿಯಿಂದ ಮೊಸರು ಕುಡಿಕೆ ಉತ್ಸವ, ಗಮನ ಸೆಳೆದ ರಂಗಿನ ಹೋಳಿ, ಬಣ್ಣದ ಓಕುಳಿ

Suddi Udaya

ತೆಕ್ಕಾರು: ಭಟ್ರಬೈಲು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ದೇವರ ಮೂರ್ತಿಯ ಪುರಪ್ರವೇಶದ ಅದ್ದೂರಿ ಮೆರವಣಿಗೆ

Suddi Udaya
error: Content is protected !!