32 C
ಪುತ್ತೂರು, ಬೆಳ್ತಂಗಡಿ
September 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಸೇಫ್ಟಿ ಫಸ್ಟ್ ಅಭಿಯಾನ

ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಎಸ್‌ಡಿಎಂ) ಆಂಗ್ಲ ಮಾಧ್ಯಮ ಶಾಲೆಯಲ್ಲಿ (ರಾಜ್ಯ ಪಠ್ಯಕ್ರಮ) ಜೂನಿಯರ್ ರೆಡ್ ಕ್ರಾಸ್ ಘಟಕ ಹಾಗೂ ಕ್ರೀಡಾ ಸಂಘದ ಜಂಟಿ ಆಶ್ರಯದಲ್ಲಿ ‘ಸೇಫ್ಟಿ ಫಸ್ಟ್ ಅಭಿಯಾನ ಎಂಬ ವಿಶೇಷ ಸುರಕ್ಷತಾ ಜಾಗೃತಿ ಕಾರ್ಯಕ್ರಮವು ಇಂದು ಜರುಗಿತು.

ವಿದ್ಯಾರ್ಥಿಗಳಲ್ಲಿ ಸುರಕ್ಷತಾ ಪ್ರಜ್ಞೆ ಮೂಡಿಸುವುದು ಹಾಗೂ ತುರ್ತು ಪರಿಸ್ಥಿತಿಗಳನ್ನು ಧೈರ್ಯ ಮತ್ತು ಸಮರ್ಥವಾಗಿ ಎದುರಿಸುವ ಸಾಮರ್ಥ್ಯವನ್ನು ಬೆಳೆಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಮಂಗಳೂರಿನ ವೃತ್ತಿಪರ ಅಗ್ನಿ ಮತ್ತು ಸುರಕ್ಷತಾ ಅಧಿಕಾರಿ (OSHA Card Holder) ಶ್ರೀ ಸತ್ಯರಾಜ್ ಅವರು ಭಾಗವಹಿಸಿ, ಸುರಕ್ಷತೆಯ ಪ್ರಾಮುಖ್ಯತೆ ಕುರಿತು ಮಾಹಿತಿ ನೀಡಿದರು. ಈ ವೇಳೆ ಅಗ್ನಿ ಅವಘಡಗಳ ತಡೆಗಟ್ಟುವಿಕೆ, ಅಗ್ನಿಶಾಮಕ ಉಪಕರಣಗಳ ಬಳಕೆಯ ಸುರಕ್ಷಿತ ವಿಧಾನಗಳು, ಪ್ರಥಮ ಚಿಕಿತ್ಸೆ, ಸಿಪಿಆರ್ (CPR) ಪ್ರಕ್ರಿಯೆ, ವಿಪತ್ತು ನಿರ್ವಹಣೆ ಹಾಗೂ ತುರ್ತು ಸಂದರ್ಭಗಳಿಗೆ ಸಿದ್ಧರಾಗುವ ಕುರಿತು ಪ್ರಾಯೋಗಿಕ ಕಾರ್ಯಾಗಾರ ನಡೆಸಿ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲಾಯಿತು.

ಕಾರ್ಯಕ್ರಮವು “ಸುರಕ್ಷಿತ ವ್ಯಕ್ತಿಗಳು – ಉತ್ತಮ ಭವಿಷ್ಯ” ಎಂಬ ಸಂದೇಶದೊಂದಿಗೆ ಯಶಸ್ವಿಯಾಗಿ ನೆರವೇರಿತು.

ಜೂನಿಯರ್ ರೆಡ್ ಕ್ರಾಸ್ ಘಟಕವು ಸಂಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ವಿದ್ಯಾರ್ಥಿ ಅಕ್ಷರ್ ಸ್ವಾಗತಿಸಿ, ಆದ್ಯತ್ ಅತಿಥಿಗಳನ್ನು ಸಭೆಗೆ ಪರಿಚಯಿಸಿದರು. ಸ್ಪೂರ್ತಿ ಕಾರ್ಯಕ್ರಮವನ್ನು ನಿರೂಪಿಸಿದರೆ, ನೀರಜಾ ಕೊನೆಯಲ್ಲಿ ವಂದನಾರ್ಪಣೆ ಸಲ್ಲಿಸಿದರು.

Related posts

ಅರಸಿನಮಕ್ಕಿ ಗ್ರಾ.ಪಂ.ನಲ್ಲಿ ಗಾಂಧೀ ಜಯಂತಿ ಆಚರಣೆ

Suddi Udaya

ಶಾಸಕ ಹರೀಶ್ ಪೂಂಜರಿಂದ ಪಿಲಿಚಾಮುಂಡಿಕಲ್ಲು-ಶಕ್ತಿನಗರ ರಸ್ತೆ ಡಾಮರೀಕರಣಕ್ಕೆ ಶಿಲಾನ್ಯಾಸ: ಬದ್ಧತೆಯ ಜನಪ್ರತಿನಿಧಿನಗಳಿಂದ ಅಭಿವೃದ್ಧಿ ಸಾಧ್ಯ: ಹರೀಶ್ ಪೂಂಜ

Suddi Udaya

ಗುರುವಾಯನಕೆರೆ: ಶ್ರೀ ಲಕ್ಷ್ಮಿ ಫ್ಯಾನ್ಸಿಯಲ್ಲಿ ಚಪ್ಪಲ್ ಮೇಲೆ 10-50% ಡಿಸ್ಕೌಂಟ್ ಸೇಲ್

Suddi Udaya

ಜೇನು ಕುಟುಂಬಕ್ಕಾಗಿ ಕಾಡಿಗೆ ತೆರಳಿದ್ದ ಅಣ್ಣ ಸಂತೋಷ್‌ಗೆ ಕಚ್ಚಿದ ಹಾವು: ಬಾಯಿಯಿಂದ ವಿಷ ಹೀರಿ ಅಣ್ಣನ ಜೀವ ಉಳಿಸಿದ ತಮ್ಮ ಗಣೇಶ್

Suddi Udaya

ಮಧ್ವ ಯಕ್ಷಕೂಟ ಮಡಂತ್ಯಾರು ವಲಯ ಸಮಿತಿ ಉದ್ಘಾಟನೆ: ಶ್ರೀ ಕೃಷ್ಣ ಸಂಧಾನ ಯಕ್ಷಗಾನ ತಾಳಮದ್ದಳೆ

Suddi Udaya

ಬಿಜೆಪಿ ಕಾರ್ಯಕರ್ತರ ಮೇಲಿನ ದಬ್ಬಾಳಿಕೆ ಸಹಿಸುವುದಿಲ್ಲ; ಶಾಸಕ ಹರೀಶ್ ಪೂಂಜರ ಬಂಧನ ದುಸ್ಸಾಹಸಕ್ಕೆ ಕೈಹಾಕಿದರೆ ಮುಂದೆ ಆಗುವ ವಿಚಾರಗಳಿಗೆ ಪೊಲೀಸ್ ಇಲಾಖೆ ಹಾಗೂ ಸರಕಾರ ನೇರ ಹೊಣೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಪ್ರತಿಕ್ರಿಯೆ

Suddi Udaya
error: Content is protected !!