ಮಾಲಾಡಿ : ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಸಲುವಾಗಿ ಮಾಲಾಡಿ ಸೋಣಂದೂರು ಶಕ್ತಿ ಕೇಂದ್ರದ ವತಿಯಿಂದ ಪುಂಜಾಲಕಟ್ಟೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಿ ವಿಶ್ವನಾಯಕನ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸಲಾಯಿತು.

ಈ ಸಂದರ್ಭದಲ್ಲಿ ಮಾಲಾಡಿ ಹಾಗೂ ಸೋಣಂದೂರು ಶಕ್ತಿ ಕೇಂದ್ರದ ಪ್ರಮುಖರು, ಬೂತ್ ಅಧ್ಯಕ್ಷರು, ತಾಲೂಕು ಮಹಿಳಾಮೋರ್ಚಾದ ಪ್ರಧಾನ ಕಾರ್ಯದರ್ಶಿ ಮತ್ತು ಮೋದಿ ಅಭಿಮಾನಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.











