ಮಂಗಳೂರು: ಮಂಗಳೂರಿಗೆ ಆಗಮಿಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿಮಾನ ನಿಲ್ದಾಣದಲ್ಲಿ ಪೊಲೀಸ್ ಪಡೆಯಿಂದ ಗೌರವ ರಕ್ಷೆ ಸ್ವೀಕರಿಸಿದರು.
ಕಸ್ತೂರಿ ರಂಗನ್ ವರದಿಯನ್ನು ನಮ್ಮ ಸರ್ಕಾರ ಈ ಹಿಂದೆಯೇ ಸ್ಪಷ್ಟವಾಗಿ ತಿರಸ್ಕರಿಸಿದೆ. ಆದರೂ ಕೇಂದ್ರದಿಂದ ಬಂದಿರುವ ನಿರ್ದೇಶನಗಳ ಹಿನ್ನೆಲೆಯಲ್ಲಿ ಸ್ಥಳೀಯ ರೈತರಲ್ಲಿ ಆತಂಕ ಮೂಡಿರುವುದು ಗಮನಕ್ಕೆ ಬಂದಿದೆ. ಈ ವಿಷಯದಲ್ಲಿ ರೈತರು ಹಾಗೂ ಜನಸಾಮಾನ್ಯರ ಹಿತ ಕಾಪಾಡುವುದು ನಮ್ಮ ಮೊದಲ ಆದ್ಯತೆ ಎಂದರು.
ಕಸ್ತೂರಿ ರಂಗನ್ ವರದಿಯ ಕುರಿತು ವಿಸ್ತೃತ ಚರ್ಚೆ ನಡೆಸಲಾಗುತ್ತದೆ. ಎರಡನೇ ದಿನ ಪೂರ್ಣ ಪ್ರಮಾಣದಲ್ಲಿ ರೈತರ ಸಮಸ್ಯೆಗಳ ಬಗ್ಗೆಯೇ ಚರ್ಚೆ ನಡೆಸಿ, ಎಲ್ಲಾ ಶಾಸಕರ ಅಭಿಪ್ರಾಯಗಳನ್ನು ದಾಖಲಿಸಿಕೊಳ್ಳಲಾಗುತ್ತದೆ ಎಂದು ತಿಳಿಸಿದರು. ಜನರ ಬದುಕಿಗೆ ಧಕ್ಕೆ ಬಾರದಂತೆ ನೋಡಿಕೊಳ್ಳಲು ಸರ್ಕಾರ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಭರವಸೆ ನೀಡಿದರು.











