28.8 C
ಪುತ್ತೂರು, ಬೆಳ್ತಂಗಡಿ
September 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ತುಳು ಭಾಷೆಗೆ ಅಧಿಕೃತ ಭಾಷಾ ಮಾನ್ಯತೆ ಹಾಗೂ ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ ರೂ. 1 ಕೋಟಿ ಅನುದಾನ: ರಾಜ್ಯ ಕಾಂಗ್ರೆಸ್ ಸರ್ಕಾರದ ಐತಿಹಾಸಿಕ ನಿರ್ಧಾರಗಳಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅಭಿನಂದನೆ

ಬೆಳ್ತಂಗಡಿ:ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಯನ್ನು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯನ್ನಾಗಿ ಘೋಷಿಸುವ ಮೂಲಕ ತುಳುನಾಡಿನ ಜನರ ಬಹುದಿನದ ಕನಸನ್ನು ಈಡೇರಿಸಿದ್ದಲ್ಲದೆ, ಧಾರ್ಮಿಕ ಮತ್ತು ಸಾಮಾಜಿಕ ಕ್ಷೇತ್ರವಾದ ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ 1 ಕೋಟಿ ರೂಪಾಯಿ ಅನುದಾನ ಘೋಷಿಸಿದ ರಾಜ್ಯ ಸರ್ಕಾರಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಕರಾವಳಿ ಭಾಗದ ಸಾಂಸ್ಕೃತಿಕ ಅಸ್ಮಿತೆ ಹಾಗೂ ಕೋಟ್ಯಂತರ ತುಳು ಭಾಷಿಕರ ಭಾವನೆಯಾಗಿದ್ದ ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡಿರುವುದು ನುಡಿದಂತೆ ನಡೆದ ನಮ್ಮ ಕಾಂಗ್ರೆಸ್ ಸರ್ಕಾರದ ಐತಿಹಾಸಿಕ ಸಾಧನೆಯಾಗಿದೆ. ಇದರೊಂದಿಗೆ ಕನ್ಯಾಡಿಯ ಪುಣ್ಯಕ್ಷೇತ್ರವಾದ ಶ್ರೀರಾಮ ಕ್ಷೇತ್ರಕ್ಕೆ 1 ಕೋಟಿ ರೂಪಾಯಿ ಅನುದಾನ ನೀಡುವ ಮೂಲಕ ಸರ್ಕಾರವು ಕರಾವಳಿಯ ಧಾರ್ಮಿಕ ಹಾಗೂ ಸಾಂಸ್ಕೃತಿಕ ಪರಂಪರೆಗೆ ವಿಶೇಷ ಗೌರವ ನೀಡಿದೆ” ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

“ಕರಾವಳಿ ಮಣ್ಣಿನಲ್ಲಿ ನಡೆದ ಈ ವಿಶೇಷ ಸಂಪುಟ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಮುಖ್ಯಮಂತ್ರಿಗಳಾದ ಡಿ. ಕೆ. ಶಿವಕುಮಾರ್ ಅವರ ನೇತೃತ್ವದ ಸರ್ಕಾರವು ತುಳುನಾಡಿನ ಜನರ ದಶಕಗಳ ಕಾಲದ ಹೋರಾಟ ಮತ್ತು ಆಶಯಗಳಿಗೆ ಸೂಕ್ತವಾಗಿ ಸ್ಪಂದಿಸಿದೆ. ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡಿರುವುದು ಸಾಹಿತ್ಯ, ಸಂಸ್ಕೃತಿ ಮತ್ತು ಜಾನಪದ ಪರಂಪರೆಯನ್ನು ಮುಂದಿನ ಪೀಳಿಗೆಗೆ ಬೆಳೆಸಲು ಪ್ರಮುಖ ಮೈಲಿಗಲ್ಲಾಗಲಿದೆ” ಎಂದು ಅವರು ತಿಳಿಸಿದ್ದಾರೆ.

ತುಳು ಭಾಷಾ ಮಾನ್ಯತೆಗಾಗಿ ಶ್ರಮಿಸಿದ ಕರಾವಳಿ ಭಾಗದ ಭಾಷಾ ಪ್ರೇಮಿಗಳು, ಸಾಹಿತಿಗಳು, ಸಂಘ-ಸಂಸ್ಥೆಗಳು ಹಾಗೂ ಕನ್ಯಾಡಿ ಕ್ಷೇತ್ರದ ಅಭಿವೃದ್ಧಿಗೆ ಬೆಂಬಲ ನೀಡಿದ ರಾಜ್ಯ ಸರ್ಕಾರದ ಎಲ್ಲಾ ಸಚಿವರಿಗೂ ರಕ್ಷಿತ್ ಶಿವರಾಂ ಅವರು ಅಭಿನಂದನೆ ಹಾಗೂ ಧನ್ಯವಾದಗಳನ್ನು ತಿಳಿಸಿದ್ದಾರೆ

Related posts

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ, ಅಧಿಕಾರದ ಗದ್ದುಗೆಗೇರಿದ ಬಿಜೆಪಿ: ನೂತನ ಅಧ್ಯಕ್ಷ ಜೋಯೇಲ್ ಮೆಂಡೋನ್ಸಾ,ಉಪಾಧ್ಯಕ್ಷ ಕಾಂತಪ್ಪ ಗೌಡ ಹಾಗೂ ನಿರ್ದೇಶಕರನ್ನು ಅಭಿನಂದಿಸಿದ ಬಿಜೆಪಿ ಕಾರ್ಯಕರ್ತರು

Suddi Udaya

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ನೂತನ ಪ್ರಭಾರ ಮುಖ್ಯೋಪಾಧ್ಯಾಯರಾಗಿ ಜಯರಾಮ ಮಯ್ಯ ಅಧಿಕಾರ ಸ್ವೀಕಾರ

Suddi Udaya

ದಿಡುಪೆ – ಸಂಸೆ ಅರಣ್ಯ ರಸ್ತೆಯೊಳಗೆ ವಿಡಿಯೋ ಮಾಡಿದ ಪ್ರಕರಣ: ಬೆಳ್ತಂಗಡಿ ವನ್ಯಜೀವಿ ಇಲಾಖೆಯಿಂದ ಮೂವರಿಗೆ ದಂಡ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಸುಮಾರು 40ಕ್ಕೂ ಹೆಚ್ಚು ಗಣೇಶೋತ್ಸವದಲ್ಲಿ ಪಾಲ್ಗೊಂಡ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

Suddi Udaya

ಪುಷ್ಪಗಿರಿ ತಂಡದಿಂದ ಶಿಶಿಲ ಬಿ.ಜಯರಾಮ ನೆಲ್ಲಿತ್ತಾಯರಿಗೆ ಅಭಿನಂದನೆ

Suddi Udaya

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya
error: Content is protected !!