28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗೀತ ಗಾಯನ ಸ್ಪರ್ಧೆಯಲ್ಲಿ ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಗೆ ಬಹುಮಾನ

ಉಜಿರೆ: ಮಂಗಳೂರಿನ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ತರಬೇತಿ ಕೇಂದ್ರ ಪಿಲಿಕುಳದಲ್ಲಿ ಸೆ.18ರಂದು ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಸ್ಕೌಟ್ಸ್-ಗೈಡ್ಸ್ ಹಾಗೂ ಕಬ್ಸ್-ಬುಲ್‌ಬುಲ್ ವಿದ್ಯಾರ್ಥಿಗಳಿಗಾಗಿ ಜಿಲ್ಲಾ ಮಟ್ಟದ ಗೀತಗಾಯನ ದೇಶಭಕ್ತಿ ಗೀತ ಗಾಯನ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.

ಈ ಸ್ಪರ್ಧೆಯಲ್ಲಿ ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ಗಮನಾರ್ಹ ಸಾಧನೆ ಮಾಡಿದರು. ಗಗನ್ ನಾಯಕ್, ಪ್ರನೀತ್ ಗೋರೆ, ಜಿತ್ ಶೆಟ್ಟಿ, ವೇದಾಂತ್ ಬೇಡೆಕರ್, ಅಕ್ಷರ್ ಆರ್ . ಎಲ್, ಸ್ಕಂದ ಕೆ.ವಿ. ಇವರನ್ನೊಳಗೊಂಡ ಕಬ್ ವಿಭಾಗದ ತಂಡವು ದ್ವಿತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.

ವಿಜೇತ ವಿದ್ಯಾರ್ಥಿಗಳು ಹಾಗೂ ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳನ್ನು ಶಾಲಾ ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದದವರು ಅಭಿನಂದಿಸಿ ಶುಭಹಾರೈಸಿದರು.

Related posts

ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟ: ಶಿಶಿರ್ ಜಯವಿಕ್ರಮ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಬಡಕೋಡಿ ಸ. ಹಿ. ಪ್ರಾ. ಶಾಲೆಯಲ್ಲಿ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ಪದಗ್ರಹಣ ಸಮಾರಂಭ

Suddi Udaya

ಗುರುವಾಯನಕೆರೆ: 7 ಮಂದಿ ಸಾಧಕರಿಗೆ ‘ಎಕ್ಸೆಲ್ ಅಕ್ಷರ ಗೌರವ ಪುರಸ್ಕಾರ’ ಪ್ರದಾನ

Suddi Udaya

ಮಾ.30 ರಂದು ವೇಣೂರು-ಪೆರ್ಮುಡ ಸೂರ್ಯ- ಚಂದ್ರ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ

Suddi Udaya

ಬೆಳ್ತಂಗಡಿ ಅಲ್ಪಸಂಖ್ಯಾತ ಕಾಲೋನಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುವ ಬಗ್ಗೆ ಸಚಿವ ಬಿ ಜೆಡ್ ಜಮೀರ್ ಅಹಮ್ಮದ್ ಖಾನ್ ರವರಿಗೆ ರಕ್ಷಿತ್ ಶಿವಾರಾಂ ರಿಂದ ಮನವಿ

Suddi Udaya
error: Content is protected !!