September 19, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ತುಳು ಭಾಷೆಗೆ ಐತಿಹಾಸಿಕ ಗೌರವ: ಅಧಿಕೃತ ಸ್ಥಾನಮಾನ ನೀಡಿರುವುದು ಸಂತಸ ತಂದಿದೆ-ಡಾ|| ಹೆಗ್ಗಡೆ

ಬೆಳ್ತಂಗಡಿ: ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಸೆ.18ರಂದು ಮಂಗಳೂರಿನಲ್ಲಿ ನಡೆದ ರಾಜ್ಯ ಸರಕಾರದ ಸಚಿವ ಸಂಪುಟ ಸಭೆಯಲ್ಲಿ ನಮ್ಮ ಪ್ರಾಚೀನ ತುಳು ಭಾಷೆಗೆ ಕರ್ನಾಟಕ ರಾಜ್ಯದ ಎರಡನೇ ಆಡಳಿತ ಭಾಷೆಯಾಗಿ ಅಧಿಕೃತ ಸ್ಥಾನಮಾನ ನೀಡಿರುವ ವಿಚಾರ ತಿಳಿದು ಸಂತೋಷವಾಯಿತು. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ದೇಶ-ವಿದೇಶಗಳಲ್ಲಿರುವ ತುಳುವರ ಪರವಾಗಿ ರಾಜ್ಯ ಸರಕಾರಕ್ಕೆ ವಿಶೇಷ ಅಭಿನಂದನೆಗಳು.

ತುಳುಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರಿಸುವ ಪ್ರಕ್ರಿಯೆಗೆ ಕೂಡಾ ಇದು ಸಹಕಾರಿಯಾಗಿದೆ ಎಂದು ನಾನು ಭಾವಿಸುತ್ತೇನೆ.
2009ರಲ್ಲಿ ನಾವು ಉಜಿರೆಯಲ್ಲಿ ವಿಶ್ವತುಳು ಸಮ್ಮೇಳನ ಆಯೋಜಿಸಿ ತುಳು ಭಾಷೆ, ನಾಡು, ನುಡಿ, ಸಂಸ್ಕೃತಿ ಬಗ್ಗೆ ವಿಶೇಷ ಗಮನ ಸೆಳೆದಿರುತ್ತೇವೆ. ತುಳುಗ್ರಾಮದ ಕಲ್ಪನೆ ಸರ್ವರ ಆಕರ್ಷಣೆಯ ಕೇಂದ್ರವಾಗಿ ಎಲ್ಲರ ಮುಕ್ತ ಪ್ರಶಂಸೆಗೆ ಪಾತ್ರವಾಗಿತ್ತು.
ನಮ್ಮ ಬೇಡಿಕೆಗೆ ಸರಕಾರದ ಸಕಾರಾತ್ಮಕವಾದ ಸ್ಪಂದನೆಗೆ ತುಳುನಾಡಿನ ಎಲ್ಲಾ ಅಭಿಮಾನಿಗಳ ಪರವಾಗಿ ವಿಶೇಷ ಅಭಿನಂದನೆಗಳೆಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಬಂದಾರು: ಪಾಣೆಕಲ್ಲು ಶಿರಾಡಿ ಗ್ರಾಮದೈವ ಸಪರಿವಾರ ದೈವಸ್ಥಾನದಲ್ಲಿ ಕಾಲಾವಧಿ ನೇಮೋತ್ಸವ: ಉದ್ಯಮಿ ಕಿರಣ್ ಚಂದ್ರ ಡಿ ಪುಷ್ಪಗಿರಿ ಭಾಗಿ

Suddi Udaya

ಉಜಿರೆ ಸಂಧ್ಯಾ ಪ್ರೆಶ್ ಉತ್ಪಾದನಾ ಮತ್ತು ಪ್ಯಾಕೇಜಿಂಗ್ ಘಟಕದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಅರ್ಚನಾ ರಾಜೇಶ್ ಪೈ ರವರಿಗೆ ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಮಳೆಯಿಂದ ಹಾನಿಯಾದ ಪ್ರದೇಶಕ್ಕೆ ವಿಶೇಷ ಪ್ಯಾಕೇಜ್ ನ್ನು ನೀಡಬೇಕು: ಪ್ರತಾಪ್ ಸಿಂಹ ನಾಯಕ್

Suddi Udaya

ಬಿಜೆಪಿ ಆಡಳಿತದಲ್ಲಿ ಮಂಜೂರುಗೊಂಡ ಕಾಮಗಾರಿಗಳನ್ನು ತನ್ನದೆಂದು ಬಿಂಬುಸುವುದೇ ಸ್ಥಳೀಯ ಕಾಂಗ್ರೆಸಿಗರ ಸಾಧನೆ: ಪ್ರಕಾಶ್ ಎಳನೀರು

Suddi Udaya

ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನಲ್ಲಿ ಸದ್ಭಾವನಾ ದಿನಾಚರಣೆ

Suddi Udaya

ಅಳದಂಗಡಿ: ಬರಾಯ ಅರಮನೆಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಕಾರವಾರ ಅಂಕೋಲ ಮಾಜಿ ಶಾಸಕಿ ರೂಪಾಲಿ ಎಸ್ ನಾಯ್ಕ ಭೇಟಿ

Suddi Udaya
error: Content is protected !!