ಬೆಳ್ತಂಗಡಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಸಭೆ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಪದ್ಮನಾಭ ಸಾಲ್ಯಾನ್ ಅಧ್ಯಕ್ಷತೆಯಲ್ಲಿ ಸೆ. 19 ರಂದು ಗುರುವಾಯನಕೆರೆ ನಮ್ಮ ಮನೆ ಹವ್ಯಕ ಭವನದಲ್ಲಿ ನಡೆಯಿತು.

ಅಧ್ಯಕ್ಷತೆ ವಹಿಸಿದ್ದ ಪದ್ಮನಾಭ ಸಾಲ್ಯಾನ್ ಮಾರ್ತೆಗಲ್ ಸೊಲ್ಮೆಲು ಎನ್ನುವ ಮೂಲಕ ಮಾತು ಆರಂಭಿಸಿದ ಅವರು ತುಳು ಭಾಷೆಗೆ ಐತಿಹಾಸಿಕ ಗೌರವ ದೊರೆತಿರುವುದು ಹರ್ಷ ತಂದಿದೆ. ರಾಜ್ಯದ ಎರಡನೇ ಅಧೀಕೃತ ಭಾಷೆಯಾಗಿ ತುಳುವನ್ನು ಘೋಷಣೆ ಮಾಡಿರುವ ಸರಕಾರಕ್ಕೆ ಕೃತಜ್ಞತೆಗಳು, ಜಾತಿ ಭೇದ ಮರೆತು ಒಂದೇ ತಾಯಿಯಂತೆ ಬದುಕವರು ತುಳುವರು ಎಂದು ಹೇಳಿದ ಅವರು ಸರಕಾರ ಮನೆ ಬಾಗಿಲಿಗೆ ಬಂದು ತಮ್ಮ ಸಮಸ್ಯೆಯನ್ನು ಆಲಿಸುವ ವ್ಯವಸ್ಥೆಯಾಗಿದೆ.

ತಹಶೀಲ್ದಾರ್ ಎಸ್. ಎನ್. ನರಗುಂದ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್, ಕೆಡಿಪಿ ಸದಸ್ಯರು, ತಾಲೂಕು ಮಟ್ಟದ ಇಲಾಖಾಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು. ಸಾರ್ವಜನಿಕರು ವಿವಿಧ ಇಲಾಖೆಗಳಿಗೆ ತಮ್ಮ ಅಹವಾಲು ನೀಡಿದರು.












