September 19, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬ್ಯಾಡ್ಮಿಂಟನ್ ಪಂದ್ಯಾಟ: ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗವಿಜ್ಞಾನ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಚಾಂಪಿಯನ್

ಬೆಳ್ತಂಗಡಿ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಬೆಂಗಳೂರು ಹಾಗೂ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜ್ ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ನಡೆದ ಮಂಗಳೂರು ವಲಯ ಮಟ್ಟದ ಪುರುಷರ ಶೆಟ್ಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗವಿಜ್ಞಾನ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಚಾಂಪಿಯನ್ ಆಗಿ ಮೂಡಿಬಂದರು.

ಪುರುಷರ ವಿಭಾಗದಲ್ಲಿ ಒಟ್ಟು 26 ತಂಡಗಳು ಭಾಗವಹಿಸಿದ್ದು, ಸೆಮಿಫೈನಲ್ ಪಂದ್ಯಾಟದಲ್ಲಿ ಮಂಗಳೂರಿನ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜ್ ತಂಡವನ್ನು 3 -1 ಅಂತರದಲ್ಲಿ ಪರಭವ ಗೊಳಿಸಿ ಫೈನಲ್ ಪ್ರವೇಶ ಪಡೆಯಿತು, ಫೈನಲ್ ಪಂದ್ಯಾಟದಲ್ಲಿ ಮಂಗಳೂರಿನ ದೇರಳಕಟ್ಟೆಯ ಫಾದರ್ ಮುಲ್ಲರ್ ಹೋಮಿಯೋಪತಿ ಕಾಲೇಜು ತಂಡವನ್ನು 3 – 1 ಅಂತರದಲ್ಲಿ ಸೋಲಿಸಿ ಚಾಂಪಿಯನಾಗಿ ಮೂಡಿಬಂದಿತು. ಅ.1ರಂದು ಬೆಂಗಳೂರಿನ ಆದಿತ್ಯ ಕಾಲೇಜಲ್ಲಿ ನಡೆಯುವ ಅಂತರ್ ವಲಯ ಮಟ್ಟದ ಪುರುಷರ ಶೆಟಲ್ ಬ್ಯಾಡ್ಮಿಂಟಲ್ ಪಂದ್ಯಾಟಕ್ಕೆ ಆಯ್ಕೆಗೊಂಡಿರುತ್ತದೆ

ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲ ಡಾ. ಶಿವಪ್ರಸಾದ್ ಶೆಟ್ಟಿ ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿ, ಮುಂದಿನ ಹಂತದ ಪಂದ್ಯಾವಳಿಗೆ ಶುಭ ಹಾರೈಸಿದರು.

Related posts

ಕಿರು ನಾಟಕ ಸ್ಪರ್ಧೆ: ಬೆಳ್ತಂಗಡಿ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ

Suddi Udaya

ಬೆಳ್ತಂಗಡಿ: ಹೊತ್ತಿ ಉರಿದ ಬೈಕ್ : ವಾರೀಸುದಾರು  ಹಾಗೂ ನಂಬರ್  ಪ್ಲೇಟ್  ಇಲ್ಲದ ಬೈಕ್ ಮೇಲೆ ಅನುಮಾನ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದೀಪಾವಳಿ ಆಚರಣೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ ದೂರು ಪ್ರಕರಣ : ವಕೀಲರ ತಂಡ ಭೇಟಿ ನೀಡಿದ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಭೇಟಿಗೆ ಲಭ್ಯವಿರದ ವಿಷಯ: ಉದ್ದೇಶ ಪೂರ್ವಕವಾಗಿ ಸುಳ್ಳು ಮಾಹಿತಿಯನ್ನು ವರದಿ ಮಾಡಿದ ವೆಬ್ ನ್ಯೂಸ್ ಮೇಲೆ ಕೇಸು

Suddi Udaya

ಅಳದಂಗಡಿಯಲ್ಲಿ ಸಂಭ್ರಮದ ಪಟ್ಟದ ಕಂಬಳ

Suddi Udaya

ವೇಣೂರು ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!