32.3 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ರಕ್ತೇಶ್ವರಿಪದವು ಅಂಗನವಾಡಿ ಕೇಂದ್ರದಲ್ಲಿ ಪೌಷ್ಠಿಕ ಪೋಷಣಾ ಅಭಿಯಾನ ಕಾರ್ಯಕ್ರಮ

ಬೆಳ್ತಂಗಡಿ : ಬೆಳ್ತಂಗಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಣಿಯೂರು ಪ್ರಾರ್ಥಮಿಕ ಆರೋಗ್ಯ ಕೇಂದ್ರ ಮತ್ತು ನ್ಯಾಯತರ್ಪು ಗ್ರಾಮದ ರಕ್ತೇಶ್ವರಿಪದವು ಅಂಗನವಾಡಿ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಪೌಷ್ಠಿಕ ಪೋಷಣಾ ಅಭಿಯಾನ ಕಾರ್ಯಕ್ರಮ ಸೆ.16 ರಂದು ನಡೆಯಿತು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಣಿಯೂರು ವಲಯ ಮೇಲ್ವಿಚಾರಕಿ ಸುಜಾತ, ಕಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ. ನಿತಿನ್, ನ್ಯಾಯತರ್ಪು ಆರೋಗ್ಯ ಉಪಕೇಂದ್ರ ಪ್ರಭಾರ ಆರೋಗ್ಯ ಸುರಕ್ಷಾಧಿಕಾರಿ ತೃಪ್ತಿ ಪೌಷ್ಟಿಕ ಶಿಬಿರದ ಬಗ್ಗೆ ಮಾಹಿತಿ ನೀಡಿದರು.

ಕಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸುಮಾರು 16 ವರ್ಷಗಳ ಕಾಲ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಸುನಿತಾ ಹೆಗ್ಡೆ ಹಾಗೂ ಬಾಲ ವಿಕಾಸ ಸಮಿತಿ ಮಾಜಿ ಅಧ್ಯಕ್ಷ ಜಯಶ್ರೀ ಅವರನ್ನು ವಿವಿಧ ಸಂಘ ಸಂಸ್ಥೆ ವತಿಯಿಂದ ಸನ್ಮಾನಿಸಿ ಗೌರವಿಸಿದರು.

ಬಾಲವಿಕಾಸ ಸಮಿತಿಯ ಅಧ್ಯಕ್ಷೆ ಚೇತನ ಅಧ್ಯಕ್ಷತೆ ವಹಿಸಿದ್ದರು.

ಕಳಿಯ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಮೋಹಿನಿ, ವಿಜಯ್ ಕುಮಾರ್ ಕೆ., ಭಾರತೀಯ ಭೂಸೇನೆಯ ನಿವೃತ್ತ ವಿಕ್ರಂ ಜೆ., ನ್ಯಾಯತರ್ಪು ಅರಣ್ಯ ಸಮಿತಿ ಅಧ್ಯಕ್ಷ ವಸಂತ ಕುಮಾರ್ ಉಪಸ್ಥಿತರಿದ್ದರು.

ರಕ್ತೇಶ್ವರಿಪದವು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಪ್ರಭಾರ ಮುಖ್ಯ ಶಿಕ್ಷಕ ಕಿರಣ್ ಕುಮಾರ್, ಸಹ ಶಿಕ್ಷಕಿ ಅನುಷಾ, ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಕುಶಾಲಪ್ಪ ಗೌಡ ಕೆ., ನ್ಯಾಯತರ್ಪು ಆಶಾ ಕಾರ್ಯಕರ್ತರಾದ ಶಶಿಕಲಾ, ಪೂರ್ಣಿಮಾ, ಸ್ತ್ರೀ ಶಕ್ತಿ ಸಂಘದ ಸದಸ್ಯರು, ಮಕ್ಕಳ ಪೋಷಕರು ಮತ್ತಿತರರಿದ್ದರು.

ಅಂಗನವಾಡಿ ಕಾರ್ಯಕರ್ತೆ ಸುನೀತಾ ಸ್ವಾಗತಿಸಿ, ನಿರೂಪಿಸಿದರು. ಸಹಾಯಕಿ ಸವಿತಾ ವಂದಿಸಿದರು.

Related posts

ಉಜಿರೆ ಶ್ರೀ. ಧ.ಮಂ. ವಸತಿ ಪ.ಪೂ. ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಮಚ್ಚಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಯಕ್ಷಧ್ರುವ-ಯಕ್ಷಶಿಕ್ಷಣ ತರಗತಿಗೆ ಚಾಲನೆ

Suddi Udaya

ಗುರುವಾಯನಕೆರೆ ಕುಲಾಲ ಮಂದಿರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ರಾಷ್ಟ್ರೀಯ ಹೆದ್ದಾರಿ ಅರಳಿ ಪ್ರದೇಶಕ್ಕೆ ಅನುಕೂಲವಾಗುವಂತೆ ರಸ್ತೆ ನಿರ್ಮಿಸಲು ಆಗ್ರಹ

Suddi Udaya

ಮಿತ್ತಬಾಗಿಲು ಸ.ಹಿ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಕುಂಟಿನಿ ಮದ್ರಸದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!