September 19, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಸಭೆ

ಬೆಳ್ತಂಗಡಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಸಭೆ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಪದ್ಮನಾಭ ಸಾಲ್ಯಾನ್ ಅಧ್ಯಕ್ಷತೆಯಲ್ಲಿ ಸೆ. 19 ರಂದು ಗುರುವಾಯನಕೆರೆ ನಮ್ಮ ಮನೆ ಹವ್ಯಕ ಭವನದಲ್ಲಿ ನಡೆಯಿತು.

ಅಧ್ಯಕ್ಷತೆ ವಹಿಸಿದ್ದ ಪದ್ಮನಾಭ ಸಾಲ್ಯಾನ್ ಮಾರ್ತೆಗಲ್ ಸೊಲ್ಮೆಲು ಎನ್ನುವ ಮೂಲಕ ಮಾತು ಆರಂಭಿಸಿದ ಅವರು ತುಳು ಭಾಷೆಗೆ ಐತಿಹಾಸಿಕ ಗೌರವ ದೊರೆತಿರುವುದು ಹರ್ಷ ತಂದಿದೆ. ರಾಜ್ಯದ ಎರಡನೇ ಅಧೀಕೃತ ಭಾಷೆಯಾಗಿ ತುಳುವನ್ನು ಘೋಷಣೆ ಮಾಡಿರುವ ಸರಕಾರಕ್ಕೆ ಕೃತಜ್ಞತೆಗಳು, ಜಾತಿ ಭೇದ ಮರೆತು ಒಂದೇ ತಾಯಿಯಂತೆ ಬದುಕವರು ತುಳುವರು ಎಂದು ಹೇಳಿದ ಅವರು ಸರಕಾರ ಮನೆ ಬಾಗಿಲಿಗೆ ಬಂದು ತಮ್ಮ ಸಮಸ್ಯೆಯನ್ನು ಆಲಿಸುವ ವ್ಯವಸ್ಥೆಯಾಗಿದೆ.

ತಹಶೀಲ್ದಾರ್ ಎಸ್. ಎನ್. ನರಗುಂದ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್, ಕೆಡಿಪಿ ಸದಸ್ಯರು, ತಾಲೂಕು ಮಟ್ಟದ ಇಲಾಖಾಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.  ಸಾರ್ವಜನಿಕರು ವಿವಿಧ ಇಲಾಖೆಗಳಿಗೆ ತಮ್ಮ ಅಹವಾಲು ನೀಡಿದರು.

Related posts

ಬೆಳ್ತಂಗಡಿ: ಶಶಾಂಕ ಕುಳಮರ್ವ ರವರಿಗೆ ಸುರತ್ಕಲ್ ಎನ್.ಐ.ಟಿ.ಕೆ. ಯಿಂದ ಪಿ.ಎಚ್.ಡಿ. ಪದವಿ

Suddi Udaya

ನಡ ಗ್ರಾಮ ಪಂಚಾಯತ್ ನಲ್ಲಿ 22ನೇ ಜನಸ್ಪಂದನ ಸಭೆ

Suddi Udaya

ಗೆಜ್ಜೆಗಿರಿ ಕ್ಷೇತ್ರದ ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಶ್ರೀ ಧ. ಮಂ. ಆಂ.ಮಾ. ಶಾಲೆಗೆ ದೇಶಭಕ್ತಿ ಗೀತ ಗಾಯನ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಬೆಳ್ತಂಗಡಿ: ಕೇಂದ್ರ ಸರಕಾರದ ವಿವಾದಿತ ವಕ್ಫ್ ಕಾಯಿದೆ ವಿರುದ್ಧ ತಾಲೂಕಿನಲ್ಲಿ ಬೃಹತ್ ಪ್ರತಿಭಟನಾ ಸಭೆಗೆ ಮುಸ್ಲಿಮ್ ಮುಖಂಡರಿಂದ ನಿರ್ಧಾರ: ವಕ್ಫ್ ಸಂರಕ್ಷಣಾ ಹೋರಾಟ ಸಮಿತಿ ಅಸ್ಥಿತ್ವಕ್ಕೆ : ವೈ.ಸಿ.ಎಫ್. ನಿಂದ ಪೂರ್ವಭಾವಿ ಸಭೆ.

Suddi Udaya

ಬೆಳ್ತಂಗಡಿ : ವಿಪರೀತ ಮಳೆಯಾಗುತ್ತಿರುವ ಕಾರಣ ಈ ಪ್ರವಾಸಿ ತಾಣಗಳಿಗೆ ಪ್ರವೇಶ ನಿಷೇಧ

Suddi Udaya
error: Content is protected !!