ಉಜಿರೆ: ಮಂಗಳೂರಿನ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ತರಬೇತಿ ಕೇಂದ್ರ ಪಿಲಿಕುಳದಲ್ಲಿ ಸೆ.18ರಂದು ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಸ್ಕೌಟ್ಸ್-ಗೈಡ್ಸ್ ಹಾಗೂ ಕಬ್ಸ್-ಬುಲ್‌ಬುಲ್ ವಿದ್ಯಾರ್ಥಿಗಳಿಗಾಗಿ ಜಿಲ್ಲಾ ಮಟ್ಟದ ಗೀತಗಾಯನ ದೇಶಭಕ್ತಿ ಗೀತ ಗಾಯನ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.
ಈ ಸ್ಪರ್ಧೆಯಲ್ಲಿ ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ಗಮನಾರ್ಹ ಸಾಧನೆ ಮಾಡಿದರು. ಗಗನ್ ನಾಯಕ್, ಪ್ರನೀತ್ ಗೋರೆ, ಜಿತ್ ಶೆಟ್ಟಿ, ವೇದಾಂತ್ ಬೇಡೆಕರ್, ಅಕ್ಷರ್ ಆರ್ . ಎಲ್, ಸ್ಕಂದ ಕೆ.ವಿ. ಇವರನ್ನೊಳಗೊಂಡ ಕಬ್ ವಿಭಾಗದ ತಂಡವು ದ್ವಿತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.
ವಿಜೇತ ವಿದ್ಯಾರ್ಥಿಗಳು ಹಾಗೂ ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳನ್ನು ಶಾಲಾ ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದದವರು ಅಭಿನಂದಿಸಿ ಶುಭಹಾರೈಸಿದರು.











