32.3 C
ಪುತ್ತೂರು, ಬೆಳ್ತಂಗಡಿ
September 19, 2026
ಕರಾವಳಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತುಳು ಭಾಷೆಗೆ ಅಧಿಕೃತ ಮಾನ್ಯತೆ: ತುಳುನಾಡಿನ ಜನರ ಬಹುದಿನಗಳ ಕನಸಿಗೆ ಗೌರವ

ಕರ್ನಾಟಕ ಸರ್ಕಾರವು ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡಿರುವುದು ಅತ್ಯಂತ ಸಂತೋಷ ಹಾಗೂ ಹೆಮ್ಮೆಯ ವಿಚಾರ. ಇದು ಕೇವಲ ಒಂದು ಭಾಷೆಗೆ ದೊರೆತ ಮಾನ್ಯತೆಯಲ್ಲ, ನಮ್ಮ ಹಿರಿಯರು ಉಳಿಸಿಕೊಂಡು ಬಂದ ತುಳುನಾಡಿನ ಶ್ರೀಮಂತ ಇತಿಹಾಸ, ಸಂಸ್ಕೃತಿ, ಪರಂಪರೆ, ಸಾಹಿತ್ಯ, ದೈವಾರಾಧನೆ, ಯಕ್ಷಗಾನ ಹಾಗೂ ಜನಜೀವನಕ್ಕೆ ದೊರೆತ ಗೌರವವಾಗಿದೆ.
ತುಳು ಭಾಷೆ ಸಾವಿರಾರು ವರ್ಷಗಳ ಸಾಂಸ್ಕೃತಿಕ ಪರಂಪರೆಯನ್ನು ತನ್ನೊಳಗೆ ಉಳಿಸಿಕೊಂಡಿರುವ ಜೀವಂತ ಭಾಷೆ. ಈ ನಿರ್ಧಾರದಿಂದ ತುಳು ಭಾಷೆಯ ಸಂರಕ್ಷಣೆ, ಅಭಿವೃದ್ಧಿ ಹಾಗೂ ಮುಂದಿನ ಪೀಳಿಗೆಗೆ ಅದರ ಪರಿಚಯ ಮತ್ತಷ್ಟು ಬಲಗೊಳ್ಳಲಿದೆ. ಕರ್ನಾಟಕ ಸರ್ಕಾರದ ಈ ಐತಿಹಾಸಿಕ ನಿರ್ಧಾರವನ್ನು ತುಳುನಾಡಿನ ದೈವ ಚಾಕಿರಿ ಮಾಡುವವರ ಪರವಾಗಿ ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ತುಳು ಭಾಷೆಯ ಬೆಳವಣಿಗೆಗೆ ಸರ್ಕಾರ, ಸಂಘ-ಸಂಸ್ಥೆಗಳು, ಸಾಹಿತಿಗಳು ಮತ್ತು ಪ್ರತಿಯೊಬ್ಬ ತುಳುವರೂ ಒಗ್ಗಟ್ಟಿನಿಂದ ಕೈಜೋಡಿಸಬೇಕಾಗಿದೆ ಎಂದು ದೈವ ನರ್ತಕರು ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕ ಡಾ. ರವೀಶ್ ಪಡುಮಲೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ

Suddi Udaya

ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿ ಮೂರ್ತಿಯ ಪ್ರತಿಷ್ಠಾ ಮಹೋತ್ಸವದ ನಲ್ವತ್ತೆರಡನೆ ವರ್ಧಂತ್ಯುತ್ಸವ

Suddi Udaya

ಗುರುವಾಯನಕೆರೆ ಶಾಲೆಯಲ್ಲಿ ಶತಮಾನೋತ್ಸವ ಸಂಭ್ರಮ

Suddi Udaya

ಉಜಿರೆ: ಅಭ್ಯಾಸ್ ಪಿ.ಯು ಕಾಲೇಜಿನಲ್ಲಿ “POCSO ಕಾಯ್ದೆ ಜಾಗೃತಿ” ಕಾರ್ಯಕ್ರಮ

Suddi Udaya

ಪರ್ಸ್ ಹಿಂದಿರುಗಿಸಿ ಕೊಟ್ಟು ಮಾನವೀಯತೆ ಮೆರೆದ ಕೆಎಸ್.ಆರ್.ಟಿ.ಸಿ ಬಸ್ಸು ಸಿಬ್ಬಂದಿ

Suddi Udaya

ಕರಾಯ ಮತ್ತು ಪುಂಜಾಲಕಟ್ಟೆ ವಲಯ ಮಟ್ಟದ ಕ್ರೀಡಾಕೂಟ

Suddi Udaya
error: Content is protected !!