31.4 C
ಪುತ್ತೂರು, ಬೆಳ್ತಂಗಡಿ
September 20, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಪೋಕ್ಸೋ ಪ್ರಕರಣದಲ್ಲಿ ಆರೋಪಿ ಅಬ್ದುಲ್ ಲತೀಫ್ ಗೆ ಶಿಕ್ಷೆ ಪ್ರಕಟ

ಬೆಳ್ತಂಗಡಿ: ಪೋಕ್ಸೋ ಹಾಗೂ ಬಿಎನ್‌ಎಸ್ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ವಾಸ ಹಾಗೂ ರೂ.80,000 ದಂಡ ವಿಧಿಸಿ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ನಿವಾಸಿ ಅಬ್ದುಲ್ ಲತೀಫ್ ಶಿಕ್ಷೆಗೊಳಗಾದ ಆರೋಪಿ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಂದಿನ ಪೊಲೀಸ್ ನಿರೀಕ್ಷಕರಾದ ಅನಂತ ಪದ್ಮನಾಭರವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.ಪ್ರಕರಣದ ವಿಚಾರಣೆ ನಡೆಸಿದ ಮಾನ್ಯ ನ್ಯಾಯಾಧೀಶರಾದ ಶ್ರೀ ಮಾನು ಕೆ.ಎಸ್. ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 19, 2026ರಂದು ಈ ಮಹತ್ವದ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರ ಪರವಾಗಿ ಸರ್ಕಾರಿ ಅಭಿಯೋಜಕಿ ಸಹನಾದೇವಿ ಬೋಳೂರು ಅವರು ಸಮರ್ಥವಾಗಿ ವಾದ ಮಂಡಿಸಿದ್ದರು.

Related posts

ಭಾರತೀಯ ವಿಜ್ಞಾನ ಮತ್ತು ಎಂಜಿನಿಯರಿಂಗ್ ಮೇಳ (ಐಎನ್‌ಎಸ್‌ಇಎಫ್) 2024-25″ – ಶ್ರೀ ಧ.ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯ ಅಧೀಶ್ ಬಿ.ಸಿ ಮತ್ತು ಆಲಾಪ್.ಎಂ ಗೆ ಚಿನ್ನದ ಪದಕ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ.

Suddi Udaya

ಅಳದಂಗಡಿ: ಕೆದ್ದುವಿನಲ್ಲಿ ಕಾರುಗಳ ನಡುವೆ ಭೀಕರ ರಸ್ತೆ ಅಪಘಾತ, ಹಲವರಿಗೆ ಗಂಭೀರ ಗಾಯ

Suddi Udaya

ಕೊಕ್ಕಡ: ವಾಮನ ನಾಯ್ಕ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ: ಜೀವನ ಕೌಶಲ ತರಬೇತಿ ಕಾರ್ಯಾಗಾರ

Suddi Udaya

ಉಜಿರೆಯ ಕುಂಜರ್ಪದಲ್ಲಿ ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು ಸೌಜನ್ಯ ಟ್ರೋಫಿ -2024

Suddi Udaya

ಧರ್ಮಸ್ಥಳ: ನೂತನವಾಗಿ ಪ್ರಾರಂಭಗೊಂಡ ಶ್ರೀ ಶಿವಶಕ್ತಿ ಅಯ್ಯಂಗಾರ್ ಬೇಕರಿಗೆ ಬಿಜೆಪಿ ರಾಜ್ಯ ಕಾರ್ಯದರ್ಶಿ ಬ್ರಿಜೇಶ್ ಚೌಟ ಭೇಟಿ

Suddi Udaya
error: Content is protected !!